ಮತ್ತೆ ಮತ್ತೆ ರಚಿತಾ

ಪ್ರಜ್ವಲ್‌ ವೀರಂಗೆ ರಚಿತಾ ಜೋಡಿ

Team Udayavani, Nov 6, 2019, 5:02 AM IST

ರಚಿತಾ ರಾಮ್‌ ಸದ್ಯಕ್ಕೆ ಬಿಝಿ ನಟಿ. ಸ್ಟಾರ್‌ ನಟರು ಸೇರಿದಂತೆ ಹೊಸಬರ ಚಿತ್ರಗಳಲ್ಲೂ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗುತ್ತಿರುವ ಅವರು, ಇತ್ತೀಚೆಗಷ್ಟೇ ರಿಷಿ ಅಭಿನಯದ ಹೊಸ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದರು. ಈಗ ಮತ್ತೊಂದು ಚಿತ್ರಕ್ಕೆ ನಾಯಕಿ ಅನ್ನೋದು ಹೊಸ ಸುದ್ದಿ. ಹೌದು, ಪ್ರಜ್ವಲ್‌ ದೇವರಾಜ್‌ ಅವರಿಗೆ ರಚಿತಾರಾಮ್‌ ನಾಯಕಿಯಾಗಿದ್ದಾರೆ.

ಹೌದು, ಪ್ರಜ್ವಲ್‌ ದೇವರಾಜ್‌ ಅಭಿನಯದ “ವೀರಂ’ ಚಿತ್ರದಲ್ಲಿ ರಚಿತಾರಾಮ್‌ ನಾಯಕಿಯಾಗಿದ್ದಾರೆ. ಈ ಚಿತ್ರದಲ್ಲಿ ರಚಿತಾರಾಮ್‌, ಕಾಲೇಜು ಹುಡುಗಿಯ ಪಾತ್ರ ಮಾಡುತ್ತಿದ್ದಾರೆ. ಇನ್ನು, ಚಿತ್ರವನ್ನು ಕುಮಾರ್‌ ನಿರ್ದೇಶನ ಮಾಡುತ್ತಿದ್ದಾರೆ. ಶಶಿಧರ್‌ ಕೆ.ಎಂ. ನಿರ್ಮಾಣವಿದೆ. ಇವರ ಜೊತೆಗೆ ರಘು ಹಾಗು ವಿಜಯಲಕ್ಷ್ಮೀ ಕೃಷ್ಣೇಗೌಡ ಕೂಡ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ.

ನಟ ದರ್ಶನ್‌ ಅವರು ಚಿತ್ರದ ಶೀರ್ಷಿಕೆ ಹಾಗೂ ಮೋಷನ್‌ ಪೋಸ್ಟರ್‌ ಲಾಂಚ್‌ ಮಾಡುವ ಮೂಲಕ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಈಗ ಚಿತ್ರಕ್ಕೆ ರಚಿತಾ ರಾಮ್‌ ಸೇರ್ಪಡೆಯಾಗಿದ್ದು, ಹಂತ ಹಂತವಾಗಿ ಉಳಿದ ಕಲಾವಿದರು ಹಾಗು ತಂತ್ರಜ್ಞರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

“ವೀರಂ’ ಶೀರ್ಷಿಕೆಯೇ ಹೇಳುವಂತೆ ಇದೊಂದು ಪಕ್ಕಾ ಮಾಸ್‌ ಫೀಲ್‌ ಇರುವ ಚಿತ್ರ. ಚಿತ್ರದಲ್ಲಿ ಪ್ರಜ್ವಲ್‌ ಅವರು ವಿಷ್ಣುವರ್ಧನ್‌ ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. “ವೀರಂ’ ಒಂದು ಸಂಸ್ಕೃತ ಪದವಾಗಿದ್ದು, ಆ ಹೆಸರಲ್ಲಿ ಈಗ ಪಕ್ಕಾ ಕಮರ್ಷಿಯಲ್‌ ಸಿನಿಮಾ ಮಾಡಲು ಚಿತ್ರತಂಡ ಅಣಿಯಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಡಿಸೆಂಬರ್‌ನಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ