ಹೊಸಬರ ಚಿತ್ರಕ್ಕೂ ಸೈ ಎನ್ನುತ್ತಿರುವ “ರಚಿತಾ’

ಮೋಹನ್‌ ಸಿಂಗ್‌ ನಿರ್ದೇಶನದಲ್ಲಿ ನಟನೆ

Team Udayavani, Nov 5, 2019, 6:05 AM IST

ಸಾಮಾನ್ಯವಾಗಿ ಚಿತ್ರರಂಗದಲ್ಲಿ ಸ್ಟಾರ್‌ ನಟರಿಗೆ ನಾಯಕಿಯಾಗಿ ಕಾಣಿಸಿಕೊಂಡ ನಟಿಯರು ಹೊಸಬರ ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವುದಿಲ್ಲ. ಹಾಗೇನಾದ್ರೂ ಕಾಣಿಸಿಕೊಂಡರೆ, ಅವರಿಗೆ ಸ್ಟಾರ್‌ ನಟರ ಚಿತ್ರಗಳಲ್ಲಿ ಸರಿಯಾಗಿ ಅವಕಾಶಗಳು ಸಿಗುತ್ತಿಲ್ಲ ಎಂದರ್ಥ ಅನ್ನೋ ಮಾತು ಗಾಂಧಿನಗರದಲ್ಲಿ ಚಾಲ್ತಿಯಲ್ಲಿದೆ. ಇದಕ್ಕೆ ಇಂಬು ನೀಡುವಂತೆ ಅನೇಕ ಬಾರಿ ಹಲವು ನಟಿಯರು ಸ್ಟಾರ್‌ ನಟರ ಚಿತ್ರಗಳಲ್ಲಿ ತಮಗೆ ಅವಕಾಶಗಳು ಕಡಿಮೆಯಾಗುತ್ತಿದ್ದಂತೆ, ಹೊಸಬರ ಚಿತ್ರಗಳಲ್ಲಿ ಕಾಣಿಸಿಕೊಳ್ಳುವುದನ್ನೂ ನೋಡುತ್ತಿರುತ್ತೇವೆ.

ಈಗ ಯಾಕೆ ಈ ವಿಷಯ ಅಂದ್ರೆ, ಅದಕ್ಕೊಂದು ಕಾರಣವಿದೆ. ಇಲ್ಲೊಬ್ಬ ನಟಿ ಹಲವು ಸ್ಟಾರ್‌ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡರೂ, ಇನ್ನೂ ಸ್ಟಾರ್‌ ನಟರ ಚಿತ್ರಗಳಲ್ಲಿ ನಟಿಸುವ ಅವಕಾಶಗಳು ಇದ್ದರೂ, ಅದರ ನಡುವೆಯೇ ಹೊಸಬರ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ. ಈ ಮೂಲಕ ಹೊಸ ನಟ, ನಿರ್ದೇಶಕರಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಅಂದಹಾಗೆ, ಆ ನಟಿ ಬೇರಾರೂ ಅಲ್ಲ ಡಿಂಪಲ್‌ ಚೆಲುವೆ ರಚಿತಾ ರಾಮ್‌.

ಹೌದು, ರಚಿತಾ ಸದ್ಯ ಹಲವು ಚಿತ್ರಗಳಲ್ಲಿ ಬಿಝಿಯಾಗಿದ್ದರೂ, ಅದರ ನಡುವೆಯೇ ಹೊಸ ನಾಯಕರ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ರಿಷಿ ನಾಯಕನಾಗಿ ಅಭಿನಯಿಸುತ್ತಿರುವ ಯೋಗರಾಜ್‌ಭಟ್‌ ಹಾಗೂ ಶಶಾಂಕ್‌ ಜಂಟಿಯಾಗಿ ನಿರ್ಮಿಸುತ್ತಿರುವ ಹೊಸಚಿತ್ರ “ಸೀರೆ’ ಚಿತ್ರಕ್ಕೂ ರಚಿತಾ ರಾಮ್‌ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ಇನ್ನು ಈ ಹಿಂದೆ ಯೋಗರಾಜ್‌ ಭಟ್‌ ಅವರೊಂದಿಗೆ ಕೆಲಸ ಮಾಡಿದ್ದ, ಮೋಹನ್‌ ಸಿಂಗ್‌ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ಈ ಚಿತ್ರದ ಹೀರೋ ರಿಷಿ ಮತ್ತು ರಚಿತಾ ಆಯ್ಕೆಯಾಗಿದ್ದು, ಉಳಿದ ಕಲಾವಿದರ ಆಯ್ಕೆ ನಡೆಯಬೇಕಿದೆ. ಅರ್ಜುನ್‌ ಜನ್ಯ ಅವರ ಸಂಗೀತವಿದೆ. ಜ್ಞಾನಮೂರ್ತಿ ಛಾಯಾಗ್ರಹಣವಿದೆ. ಒಟ್ಟಾರೆ “ಸೀರೆ’ ಉಡಲು ರೆಡಿಯಾಗಿರುವ ರಚಿತಾ, ತೆರೆಮೇಲೆ ಹೇಗೆ ಕಾಣುತ್ತಾರೆ ಅನ್ನೋದು ಮುಂದಿನ ವರ್ಷದ ಮಧ್ಯ ಭಾಗಕ್ಕೆ ಗೊತ್ತಾಗುವ ಸಾಧ್ಯತೆ ಇದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ