‘ವೀರಂ’ ಮೇಲೆ ರಚಿತಾ ರಾಮ್ ನಿರೀಕ್ಷೆ


Team Udayavani, Apr 6, 2023, 12:45 PM IST

Rachita

ಪ್ರಜ್ವಲ್‌ ದೇವರಾಜ್‌ ನಟಿಸಿರುವ “ವೀರಂ’ ಚಿತ್ರ ಏಪ್ರಿಲ್‌ 7ರಂದು ತೆರೆಕಾಣುತ್ತಿದೆ. ಈ ಚಿತ್ರದ ಮೂಲಕ ರಚಿತಾ ರಾಮ್‌ ಕೂಡಾ ಅಭಿಮಾನಿಗಳಿಗೆ ದರ್ಶನ ನೀಡುತ್ತಿದ್ದಾರೆ.

ಹೌದು, “ವೀರಂ’ ಸಿನಿಮಾದಲ್ಲಿ ರಚಿತಾ ರಾಮ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದು ರಚಿತಾ ಈ ವರ್ಷ ತೆರೆಮೇಲೆ ಕಾಣಿಸಿಕೊಳ್ಳುತ್ತಿರುವ ಎರಡನೇ ಸಿನಿಮಾ. ಈಗಾಗಲೇ “ಕ್ರಾಂತಿ’ ಮೂಲಕ ಹೊಸ ವರ್ಷದ ಅಕೌಂಟ್‌ ಓಪನ್‌ ಮಾಡಿರುವ ರಚಿತಾ ಈಗ “ವೀರಂ’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಶಶಿಧರ್‌ ಕೆ.ಎಂ ನಿರ್ಮಾಣದ ಈ ಚಿತ್ರವನ್ನು ಕುಮಾರ್‌ ರಾಜ್‌ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಇನ್ನು, ಈಗಾಗಲೇ ಬಿಡುಗಡೆ ಯಾಗಿರುವ ಚಿತ್ರದ ಟೀಸರ್‌, ಟ್ರೇಲರ್‌ ಹಿಟ್‌ಲಿಸ್ಟ್‌ ಸೇರಿದೆ. ಶ್ರೀನಗರ ಕಿಟ್ಟಿ ಚಿತ್ರದಲ್ಲಿ ಮತ್ತೂಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸುಮಾರು ಏಳು ವರ್ಷಗಳ ಬಳಿಕ ನಟ ಶಿಷ್ಯ ದೀಪಕ್‌ ಚಿತ್ರದಲ್ಲಿ ನೆಗೆಟಿವ್‌ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಹಿರಿಯ ನಟಿ ಶ್ರುತಿ, ಅಚ್ಯುತಕುಮಾರ್‌, ಗಿರಿ ಮೊದಲಾದವರು “ವೀರಂ’ನ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ವೀರಂ’ ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜನೆಯಿದ್ದು, ಲವಿತ್‌ ಛಾಯಾಗ್ರಹಣ, ರವಿಚಂದ್ರನ್‌ ಸಂಕಲನವಿದೆ. “ಶಶಿಧರ್‌ ಸ್ಟುಡಿಯೋಸ್‌ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ವೀರಂ’ ಚಿತ್ರಕ್ಕೆ ಶಶಿಧರ್‌ ಕೆ.ಎಂ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

“ವೀರಂ’ ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಶಶಿಧರ್‌ ಕೆ.ಎಂ, “ಪ್ರಜ್ವಲ್‌ ದೇವರಾಜ್‌ ಸಿನಿ ಕೆರಿಯರ್‌ನಲ್ಲಿ “ವೀರಂ’ ಹೊಸಥರದ ಸಿನಿಮಾ. ಇದರಲ್ಲಿ ಪ್ರಜ್ವಲ್‌ ದೇವರಾಜ್‌ ಸಾಹಸಸಿಂಹ ವಿಷ್ಣುವರ್ಧನ್‌ ಅಭಿಮಾನಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್‌ ಸ್ಟಾರ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಲವ್‌, ಸೆಂಟಿ ಮೆಂಟ್‌, ಆ್ಯಕ್ಷನ್‌, ಕಾಮಿಡಿ ಹೀಗೆ ಕಂಪ್ಲೀಟ್‌ ಎಂಟರ್‌ ಟೈನ್ಮೆಂಟ್‌ ಎಲಿಮೆಂಟ್ಸ್‌ “ವೀರಂ’ನಲ್ಲಿದೆ. ಮಾಸ್‌ ಮತ್ತು ಕ್ಲಾಸ್‌ ಆಡಿಯನ್ಸ್‌ಗೆ “ವೀರಂ’ ಸಿನಿಮಾ ಖಂಡಿತಾ ಇಷ್ಟವಾಗುತ್ತದೆ’ ಎಂಬ ಭರವಸೆ ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.