ಏಕ್‌ಲವ್‌ಯಾದಲ್ಲಿ ಮತ್ತೆ ಬೋಲ್ಡ್‌ ಆದ ರಚಿತಾ

ಧಮ್‌ಗೂ ಸೈ, ಲಿಪ್‌ಲಾಕ್‌ಗೂ ಸೈ...

Team Udayavani, Feb 15, 2020, 7:02 AM IST

ನಟಿ ರಚಿತಾ ರಾಮ್‌, ಉಪೇಂದ್ರ ನಾಯಕರಾಗಿರುವ “ಐ ಲವ್‌ ಯು’ ಚಿತ್ರದ ಹಾಡೊಂದರಲ್ಲಿ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದರು. ಆ ಬಗ್ಗೆ ಸಾಕಷ್ಟು ಪರ-ವಿರೋಧದ ಕಾಮೆಂಟ್ಸ್‌ಗಳು ಬರುತ್ತಿದ್ದಂತೆ ರಚಿತಾ, ಆ ಸಿನಿಮಾದ ಬಿಡುಗಡೆಯ ಸಮಯದಲ್ಲಿ ಚಿತ್ರದ ಪ್ರಚಾರದಿಂದಲೇ ದೂರ ಉಳಿದಿದ್ದರು. ಈಗ ಮತ್ತೆ ರಚಿತಾ ಸುದ್ದಿಯಲ್ಲಿದ್ದಾರೆ. ಅದು ಕೂಡಾ ಬೋಲ್ಡ್‌ ಆಗಿ ಕಾಣಿಸಿಕೊಂಡು.

ಹೌದು, ಪ್ರೇಮ್‌ ನಿರ್ದೇಶನದ “ಏಕ್‌ಲವ್ಯ’ ಚಿತ್ರದ ಟೀಸರ್‌ ನೋಡಿದವರು ರಚಿತಾ ಮತ್ತೆ ಬೋಲ್ಡ್‌ ಆಗಿ ಕಾಣಿಸಿಕೊಂಡ್ರಾ ಎಂದು ಉದ್ಗಾರ ತೆಗೆಯುತ್ತಿದ್ದಾರೆ. ಟೀಸರ್‌ ಓಪನಿಂಗ್‌ನಲ್ಲೇ ರಚಿತಾ ಹಾಗೂ ನಾಯಕ ರಾಣಾ ಸಿಗರೇಟ್‌ ಸೇದುವ ದೃಶ್ಯವಿದ್ದರೆ, ಆ ನಂತರದ ದೃಶ್ಯದಲ್ಲಿ ರಚಿತಾ ಹಾಗೂ ರಾಣಾ ಲಿಪ್‌ ಕಿಸ್‌ ಮಾಡಿದ್ದಾರೆ. ಈ ಮೂಲಕ ರಚಿತಾ ರಾಮ್‌, ತಾನು ಪಾತ್ರಕ್ಕಾಗಿ ಆಗಾಗ ಬೋಲ್ಡ್‌ ಆಗುತ್ತೇನೆ ಎಂದಂತಿದೆ.

ಪ್ರೇಮಿಗಳ ದಿನಕ್ಕೆ ಬಿಡುಗಡೆಯಾಗಿರುವ ಈ “ಏಕ್‌ಲವ್ಯ’ ಚಿತ್ರದಲ್ಲಿ ರಾಣಾ, ರಚಿತಾ ರಾಮ್‌, ರೀಷ್ಮಾ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ತುಂಬಾ ಗ್ಯಾಪ್‌ನ ನಂತರ ಪ್ರೇಮ್‌ ನಿರ್ದೇಶಿಸುತ್ತಿರುವ ಲವ್‌ಸ್ಟೋರಿ ಇದು. ಚಿತ್ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರವನ್ನು ರಕ್ಷಿತಾ ಪ್ರೇಮ್‌ ನಿರ್ಮಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ