
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ
Team Udayavani, May 31, 2023, 2:47 PM IST

ಉಳ್ಳಾಲ: ಸ್ಯಾಂಡಲ್ ವುಡ್ ಡಿಂಪಲ್ ಬೆಡಗಿ ರಚಿತಾ ರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ʼಮ್ಯಾಟ್ನಿʼ,ʼಬ್ಯಾಡ್ ಮ್ಯಾನರ್ಸ್ʼ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು ಬಂದ್ಬಿಟ್ಟೆ. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ʼಮ್ಯಾಟ್ನಿʼ ಮತ್ತು ʼಬ್ಯಾಡ್ ಮ್ಯಾನರ್ಸ್ʼ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾ ರಾಮ್ ಹೇಳಿದರು.
ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು.
ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ,ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ,ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ ,ಟ್ರಸ್ಟಿಗಳಾದ ಮಹಾಬಲ್ ಹೆಗ್ಡೆ ,ಪ್ರೀತಮ್ ಶೆಟ್ಟಿ,ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್ ಹೊಸ ಚಿತ್ರ ಘೋಷಣೆ?

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ