ಚೆಕ್‌ಪೋಸ್ಟ್‌ಗೆ ರಾಘಣ್ಣ ಸಾಥ್‌

Team Udayavani, Sep 15, 2018, 11:17 AM IST

kamarottu-check-post.jpg

“ಕಮರೊಟ್ಟು ಚೆಕ್‌ಪೋಸ್ಟ್‌’ ಅಂದಾಕ್ಷಣ, “ರಂಗಿತರಂಗ’ ಚಿತ್ರದ ಹಾಡೊಂದರಲ್ಲಿ ಬರುವ “ಕಮರೊಟ್ಟು…’ ಎಂಬ ಊರು ನೆನಪಾಗುತ್ತೆ. ಅದೇ ಹೆಸರಿಟ್ಟುಕೊಂಡು ಚಿತ್ರವೊಂದು ತಯಾರಾಗುತ್ತಿದೆ ಅಂತ ಈ ಹಿಂದೆ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಈಗ ಸದ್ದಿಲ್ಲದೆಯೇ ಆ ಚಿತ್ರದ ಚಿತ್ರೀಕರಣ ಮುಗಿಸಿ, ಈಗ ಬಿಡುಗಡೆಯ ತಯಾರಿಯಲ್ಲಿದೆ ಚಿತ್ರತಂಡ. “ಮಾಮು ಟೀ ಅಂಗಡಿ’ ಚಿತ್ರದ ಬಳಿಕ ಪರಮೇಶ್‌ ನಿರ್ದೇಶಿಸಿರುವ ಚಿತ್ರವಿದು.

ಹೊಸ ಸುದ್ದಿಯೆಂದರೆ, ನಟ ಕಮ್‌ ನಿರ್ಮಾಪಕ ರಾಘವೇಂದ್ರ ರಾಜಕುಮಾರ್‌ ಅವರು “ಕಮರೊಟ್ಟು ಚೆಕ್‌ಪೋಸ್ಟ್‌’ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರತಂಡದವರೆಲ್ಲರೂ ಡಾ.ರಾಜಕುಮಾರ್‌ ಅವರ ಪಕ್ಕಾ ಅಭಿಮಾನಿಗಳು. ಹಾಗಾಗಿ ರಾಘವೇಂದ್ರ ರಾಜಕುಮಾರ್‌ ಅವರಿಂದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿಸಬೇಕು ಅಂದುಕೊಂಡು ಅವರಿಂದಲೇ ಬಿಡುಗಡೆ ಮಾಡಿಸಿರುವುದು ವಿಶೇಷ.

“ಕಮರೊಟ್ಟು ಚೆಕ್‌ಪೋಸ್ಟ್‌’ ಚಿತ್ರದ ಫ‌ಸ್ಟ್‌ಲುಕ್‌ ಟ್ರೇಲರ್‌ನಲ್ಲೊಂದು ವಿಶೇಷವಿದೆ. ಅದೇನೆಂದರೆ, ನಿರ್ದೇಶಕರು ಡಾ.ರಾಜಕುಮಾರ್‌ ಹಾಗೂ ವರದಣ್ಣ ಅವರಿಬ್ಬರ ಭಾವಚಿತ್ರದೊಂದಿಗೆ ಟ್ರೇಲರ್‌ ಬಿಡುಗಡೆ ಮಾಡಿದ್ದಾರೆ. ಅದನ್ನು ವೀಕ್ಷಿಸಿ, ಖುಷಿಗೊಂಡ ರಾಘವೇಂದ್ರ ರಾಜಕುಮಾರ್‌, ಫ‌ಸ್ಟ್‌ಲುಕ್‌ ಟ್ರೇಲರ್‌ ಮೆಚ್ಚಿಕೊಂಡಿದ್ದಲ್ಲದೆ, ಸಿನಿಮಾ ನೋಡುವ ಬಯಕೆ ವ್ಯಕ್ತಪಡಿಸಿದ್ದಾರಂತೆ.

ಇನ್ನು ಈ ಚಿತ್ರದ ಮತ್ತೂಂದು ವಿಶೇಷವೆಂದರೆ, ಇದೇ ಮೊದಲ ಬಾರಿಗೆ ಊಸರವಳ್ಳಿಯ ಅನಿಮೇಷನ್‌ ಪಾತ್ರವೊಂದನ್ನು ಚಿತ್ರದುದ್ದಕ್ಕೂ ಬಳಕೆ ಮಾಡಲಾಗಿದೆ. ವಿಶೇಷ ಎನಿಸುವ ಈ ಪ್ರಾಣಿ ಚಿತ್ರದ ಮತ್ತೂಂದು ಹೈಲೆಟ್‌ ಆಗಿದ್ದು, ಚಿತ್ರದಲ್ಲಿನ್ನೂ ಹಲವು ವಿಶೇಷತೆಗಳೂ ತುಂಬಿಕೊಂಡಿವೆ ಎಂಬುದು ಪರಮೇಶ್‌ ಮಾತು.

ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಎಂದಷ್ಟೇ ಹೇಳುವ ಪರಮೇಶ್‌, ಚೆಕ್‌ಪೋಸ್ಟ್‌ ಬಳಿ ನಡೆದ ಆಕ್ಸಿಡೆಂಟ್‌ವೊಂದರ ಸತ್ಯಘಟನೆ ಆಧರಿಸಿ ಚಿತ್ರ ಮಾಡಲಾಗುತ್ತಿದೆ. ಈ ಚಿತ್ರಕ್ಕೆ ಸನತ್‌ ಮತ್ತು ಉತ್ಪಲ್‌ ನಾಯಕರಾದರೆ, ಅವರಿಗೆ ಸ್ವಾತಿ ಕೊಂಡೆ ಹಾಗೂ ಅಹಲ್ಯಾ ನಾಯಕಿಯರಾಗಿ ನಟಿಸಿದ್ದಾರೆ. ಎ.ಪಿ.ಪ್ರೊಡಕ್ಷನ್‌ ಮತ್ತು ಸ್ವಪ್ನ ಕ್ರಿಯೇಷನ್ಸ್‌ ಬ್ಯಾನರ್‌ನಡಿ ಈ ಚಿತ್ರ ನಿರ್ಮಾಣಗೊಂಡಿದೆ. ಮಡಿಕೇರಿ, ಮಂಗಳೂರು ಸುತ್ತಮುತ್ತ ಸುಮಾರು 35 ದಿನಗಳ ಕಾಲ ಚಿತ್ರೀಕರಣವಾಗಿದೆ. ಚಿತ್ರಕ್ಕೆ ಎ.ಟಿ. ರವೀಶ್‌ ಅವರ ಸಂಗೀತವಿದೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.