ರಾಘವೇಂದ್ರ ಸ್ಟೋರ್ಸ್ ಬಿಡುಗಡೆ ಮುಂದಕ್ಕೆ
Team Udayavani, Jul 20, 2022, 11:26 AM IST
ನವರಸ ನಾಯಕ ಜಗ್ಗೇಶ್ ಅಭಿನಯದ “ರಾಘವೇಂದ್ರ ಸ್ಟೋರ್’ ಚಿತ್ರ ಆಗಸ್ಟ್ 5ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿಕೊಂಡಿತ್ತು. ಆದರೆ, ಈಗ ಬಿಡುಗಡೆ ಮುಂದಕ್ಕೆ ಹೋಗಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡ ಅಧಿಕೃತವಾಗಿ ಹೇಳಿದೆ. “ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ..’ ಎಂದು ನಿರ್ಮಾಣ ಸಂಸ್ಥೆ ಟ್ವೀಟ್ ಮಾಡಿದೆ.
“ಹೊಂಬಾಳೆ ಫಿಲಂಸ್’ ಬ್ಯಾನರ್ನಲ್ಲಿ ವಿಜಯ ಕಿರಗಂದೂರು ನಿರ್ಮಿಸುತ್ತಿರುವ ಸಿನಿಮಾ ಇದಾಗಿದ್ದು, ಸಿನಿಮಾದಲ್ಲಿ ನಾಯಕ ಜಗ್ಗೇಶ್ ಅಡುಗೆ ಭಟ್ಟನ ಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ. “ರಾಜಕುಮಾರ’ ಖ್ಯಾತಿಯ ನಿರ್ದೇಶಕ ಸಂತೋಷ ಆನಂದರಾಮ್ “ರಾಘವೇಂದ್ರ ಸ್ಟೋರ್’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ “ರಾಘವೇಂದ್ರ ಸ್ಟೋರ್’ಸಿನಿಮಾದ ಪೋಸ್ಟರ್ ಮತ್ತು ಟೀಸರ್ ಸಿನಿ ಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು,ಸಿನಿಮಾ ತೆರೆಮೇಲೆ ಯಾವಾಗ ಬರುತ್ತಿದೆ ಎಂಬ ಕುತೂಹಲದ ನಿರೀಕ್ಷೆಯಲ್ಲಿದ್ದಾರೆ ಪ್ರೇಕ್ಷಕರು.
ಸದ್ಯ ಜಗ್ಗೇಶ್ ನಟನೆಯ “ತೋತಾಪುರಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸೆ.30ರಂದು ತೆರೆಕಾಣಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್, ಹಾಡುಗಳು ಹಿಟ್ಲಿಸ್ಟ್ ಸೇರಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…