ರಘು ಶಾಸ್ತ್ರಿ ಹೊಸ ಚಿತ್ರ ಟಕ್ಕರ್
Team Udayavani, Jan 15, 2018, 4:25 PM IST
ವಿನಯ್ ರಾಜಕುಮಾರ್ ಅಭಿನಯದ “ರನ್ ಅಂಟೋನಿ’ ಚಿತ್ರ ನಿರ್ದೇಶಿಸಿದ ರಘು ಶಾಸ್ತ್ರಿ ಈಗ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಅದು “ಟಕ್ಕರ್’. ಈಗಾಗಲೇ ಫೋಟೋಶೂಟ್ ಕೂಡಾ ಆಗಿದೆ. ಚಿತ್ರದ ಟೈಟಲ್ ಹಾಗೂ ಪೋಸ್ಟರ್ ನೋಡಿದಾಗ ಇದು ಪಕ್ಕಾ ಆ್ಯಕ್ಷನ್ ಸಿನಿಮಾವೆಂಬುದು ಗೊತ್ತಾಗುತ್ತದೆ. ಈ ಚಿತ್ರದಲ್ಲಿ ಮನೋಜ್ ನಾಯಕರಾಗಿ ನಟಿಸುತ್ತಿದ್ದಾರೆ.
ನಟ ದರ್ಶನ್ ಅವರ ಸಂಬಂಧಿಯಾಗಿರುವ ಮನೋಜ್ ಈಗ “ಟಕ್ಕರ್’ ಮೂಲಕ ನಾಯಕರಾಗಿ ಎಂಟ್ರಿಕೊಡುತ್ತಿದ್ದಾರೆ. ಈ ಚಿತ್ರವನ್ನು ನಾಗೇಶ್ ಕೋಗಿಲು ನಿರ್ಮಿಸುತ್ತಿದ್ದಾರೆ. ಈ ಹಿಂದೆ ಇವರು “ಹುಲಿರಾಯ’ ಚಿತ್ರವನ್ನು ನಿರ್ಮಿಸಿದ್ದರು. ಚಿತ್ರಕ್ಕೆ ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.
“ರನ್ ಅಂಟೋನಿ’ ಮೂಲಕ ಎಂಟ್ರಿಕೊಟ್ಟ ರಘು ಶಾಸ್ತ್ರಿ ಈಗ ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾ ಮಾಡಲು ಹೊರಟಂತಿದೆ. “ಲೈಫ್ ಜೊತೆಗೊಂದ್ ಸೆಲ್ಫಿ’ ಚಿತ್ರದಲ್ಲೂ ರಘು ಶಾಸ್ತ್ರಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ