ವಿಜಯ ದಶಮಿಯಲ್ಲಿ ರಾಗಿಣಿ


Team Udayavani, Oct 10, 2018, 11:26 AM IST

ragini.jpg

ಪ್ರಜ್ವಲ್‌ ದೇವರಾಜ್‌ ಪತ್ನಿ ರಾಗಿಣಿ ರಾಮಚಂದ್ರನ್‌ ಮಾಡೆಲಿಂಗ್‌ ಫೀಲ್ಡ್‌ನಿಂದ ಬಂದವರು. ಸಾಕಷ್ಟು ಜಾಹೀರಾತುಗಳಲ್ಲೂ ರಾಗಿಣಿ ಕಾಣಿಸಿಕೊಂಡಿದ್ದಾರೆ. ಸಹಜವಾಗಿಯೇ ಅವರಿಗೆ ಎದುರಾಗುತ್ತಿದ್ದ ಪ್ರಶ್ನೆ ಸಿನಿಮಾದಲ್ಲಿ ಯಾವಾಗ ನಟಿಸುತ್ತೀರಿ ಎಂಬುದು. ಇತ್ತೀಚೆಗೆ ಪ್ರಜ್ವಲ್‌ ದೇವರಾಜ್‌ ನಾಯಕರಾಗಿರುವ “ಇನ್ಸ್‌ಪೆಕ್ಟರ್‌ ವಿಕ್ರಮ್‌’ ಚಿತ್ರದ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಈಗ ರಾಗಿಣಿ ಸಿನಿಮಾವೊಂದರಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದು, ಈ ಮೂಲಕ ಪೂರ್ಣಪ್ರಮಾಣದಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹೌದು,  ರಾಗಿಣಿ “ವಿಜಯ ದಶಮಿ’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ನಾಯಕ ಯಾರು ಎಂದು ನೀವು ಕೇಳುವಂತಿಲ್ಲ. ಏಕೆಂದರೆ ಇದು ನಾಯಕಿ ಪ್ರಧಾನ ಚಿತ್ರ. ಇಡೀ ಕಥೆ ರಾಗಿಣಿ ಸುತ್ತವೇ ಸುತ್ತಲಿದೆ. ರಘು ಸಮರ್ಥ್ ಈ ಸಿನಿಮಾದ ನಿರ್ದೇಶಕರು. ಈ ಹಿಂದೆ “ಸ್ಮೈಲ್‌ ಪ್ಲೀಸ್‌’ ಎಂಬ ಸಿನಿಮಾ ಮಾಡಿದ್ದ ರಘು ಸಮರ್ಥ್ ಆ ನಂತರ ಯಾವುದೇ ಸಿನಿಮಾ ಮಾಡಿರಲಿಲ್ಲ.

ಸಿನಿಮಾಗಳಿಗೆ ಸಂಭಾಷಣೆ ಬರೆಯುವ ಜೊತೆಗೆ ತಮ್ಮದೇ ಕಾರ್ಯಗಳಲ್ಲಿ ಬಿಝಿಯಾಗಿದ್ದ ರಘು ಈಗ “ವಿಜಯ ದಶಮಿ’ ಮೂಲಕ ಮತ್ತೆ ನಿರ್ದೇಶಕನಕ್ಕೆ ವಾಪಾಸ್‌ ಆಗಿದ್ದಾರೆ. ಚಿತ್ರದಲ್ಲಿ ರಾಗಿಣಿಯವರು ಕಾನೂನು ಪದವಿ ಪಡೆದಿರುವ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಾಮಾನ್ಯವಾಗಿ ಅನ್ಯಾಯ ನಡೆದರೆ ಅದರ ವಿರುದ್ಧ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ಸಿಟ್ಟು, ಬೇಸರ, ವಿರೋಧವನ್ನು ಹಾಕಿ ಕೂರುವ ಅನೇಕರ ನಡುವೆ, ರಾಗಿಣಿಯವರು ಭಿನ್ನವಾಗಿ ನಿಲ್ಲುವ ಪಾತ್ರ ಮಾಡುತ್ತಿದ್ದಾರಂತೆ.

ಒಂದೇ ಮಾತಲ್ಲಿ ಹೇಳಬೇಕಾದರೆ ಅನ್ಯಾಯದ ವಿರುದ್ಧ ಹೋರಾಡುವ ಪಾತ್ರ. ಬುದ್ಧಿವಂತಿಕೆಯಿಂದ ಅನ್ಯಾಯಕ್ಕೊಳಗಾದವರಿಗೆ ಸಹಾಯ ಮಾಡುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ವಿಜಯ ದಶಮಿ’ ಚಿತ್ರದ ಮುಹೂರ್ತ ವಿಜಯದಶಮಿಯಂದು (ಅ.19) ನಡೆಯಲಿದ್ದು, ಅ.22 ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಅಚ್ಯುತ್‌ ಕುಮಾರ್‌, ಅವಿನಾಶ್‌, ಸುಧಾರಾಣಿ, ರಾಜೇಶ್‌ ನಟರಂಗ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಸುಜ್ಞಾನ್‌ ಛಾಯಾಗ್ರಹಣ, ವಾಸುಕೀ ವೈಭವ್‌ ಸಂಗೀತ, ಶ್ರೀಕಾಂತ್‌ ಸಂಕಲನವಿದೆ. 

ಟಾಪ್ ನ್ಯೂಸ್

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಬೇಜಾರು ಮಾಡ್ಕೊಂಡ್ರು ಸಂಹಿತಾ!

ಬೇಜಾರು ಮಾಡ್ಕೊಂಡ್ರು ಸಂಹಿತಾ!

11

ಸತೀಶ್‌ ಕೈಯಲ್ಲಿ ಅಶೋಕ ಬ್ಲೇಡ್

10

ಸವಾಲಿನ ಪಾತ್ರದಲ್ಲಿ ಮಯೂರಿ : ಅಂಧ ಪಾತ್ರದ ಮೇಲೆ ಚೆಂದದ ನಿರೀಕ್ಷೆ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

heddari

ಕೆಸರು ತುಂಬಿ ಅವ್ಯವಸ್ಥೆಯ ಆಗರವಾದ ಕಲ್ಲಡ್ಕ ಪೇಟೆ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

bheti

ಶೀಘ್ರ ಕಾಮಗಾರಿ ಪೂರ್ತಿಗೊಳಿಸಲು ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.