“ರಾಜಲಕ್ಷ್ಮೀ’ ಚಿತ್ರೀಕರಣ ಜೋರು
Team Udayavani, Apr 11, 2019, 3:00 AM IST
“ಎಸ್.ಕೆ.ಎಂ ಮೂವೀಸ್’ ಲಾಂಛನದಲ್ಲಿ ಮೋಹನ್ ಕುಮಾರ್ ಎಸ್.ಕೆ ನಿರ್ಮಿಸುತ್ತಿರುವ “ರಾಜಲಕ್ಷ್ಮೀ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಮಂಡ್ಯ, ಮೈಸೂರು, ಬೆಂಗಳೂರು ಸುತ್ತಮುತ್ತ ಸುಮಾರು 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.
“ರಾಜಲಕ್ಷ್ಮೀ’ ಚಿತ್ರಕ್ಕೆ ಶ್ರೀಕಾಂತ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ನಾಗರಾಜ ಮೂರ್ತಿ ಛಾಯಾಗ್ರಹಣ, ಕಿರಣ್-ಅರ್ಜುನ್ ಸಂಕಲನ ಕಾರ್ಯವಿದೆ. ಚಿತ್ರದ ಹಾಡುಗಳಿಗೆ ಎ.ಟಿ ರವೀಶ್ ಸಂಗೀತ ಸಂಯೋಜಿಸಿದ್ದು, ಕಾಂತರಾಜ್ ಸಾಹಿತ್ಯ ಮತ್ತು ಮಾಗಡಿ ಯತೀಶ್ ಸಂಭಾಷಣೆ ಒದಗಿಸಿದ್ದಾರೆ.
ಹೊನ್ನವಳ್ಳಿ ಕೃಷ್ಣ, ಟೆನ್ನಿಸ್ ಕೃಷ್ಣ, ನವೀನ್ ತೀರ್ಥಹಳ್ಳಿ, ರಶ್ಮಿ ಗೌಡ, ಚಂದ್ರಪ್ರಭ (ಮಜಾ ಭಾರತ), ಸ್ಟೈಲ್ ಶಶಿ, ಸೀತಾರಾಂ, ಮುತ್ತುರಾಜ್, ಸದಾನಂದ್ ಮುಂತಾದ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಾಮ ರಾಜ್ಯದಂತಿದ್ದ ಇದ್ದ ಊರೊಂದು ಕಾರಾಣಾಂತರಗಳಿಂದ ರಾವಣ ರಾಜ್ಯದಂತಾಗುತ್ತದೆ.
ಮತ್ತೆ ಆ ಊರು ಹೇಗೆ ರಾಮ ರಾಜ್ಯ ಆಗುತ್ತದೆ ಎಂಬ ಕಥಾಹಂದರ ಇರುವ ಈ ಚಿತ್ರದಲ್ಲಿ ಒಂದು ನವಿರಾದ ಲವ್‌ಸ್ಟೋರಿ ಕೂಡ ಇದೆಯಂತೆ. ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿದ್ದು, ಇದೇ ಆಗಷ್ಟ್ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ