ಜ.1ಕ್ಕೆ ರಾಜತಂತ್ರ ತೆರೆಗೆ
Team Udayavani, Dec 28, 2020, 1:59 PM IST
ನಟ ರಾಘವೇಂದ್ರ ರಾಜಕುಮಾರ್ ಅಭಿನಯದ ಹೊಸಚಿತ್ರ “ರಾಜತಂತ್ರ’ 2021ರ ಜ. 1ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ “ರಾಜತಂತ್ರ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗಷ್ಟೇ ಚಿತ್ರದ ಟೀಸರ್, ಟ್ರೇಲರ್ ಬಿಡುಗಡೆಗೊಳಿಸುವ ಮೂಲಕ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಪವರ್ಸ್ಟಾರ್ ಪುನೀತ್ ರಾಜಕುಮಾರ್ “ರಾಜತಂತ್ರ’ದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
“ಅಮ್ಮನ ಮನೆ’ ಚಿತ್ರದ ನಂತರ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿರುವ ಚಿತ್ರ ಇದಾಗಿದ್ದು, ಚಿತ್ರದಲ್ಲಿರಾಘಣ್ಣ ನಿವೃತ್ತ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಹಿರಿಯ ನಟ ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಹಿರಿಯ ನಟಿಭವ್ಯಾ, ಶಂಕರ್ ಅಶ್ವತ್, ನೀನಾಸಂ ಅಶ್ವತ್, ಮುನಿರಾಜು ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಇದನ್ನೂ ಓದಿ : ಬರಲಿದೆ ಕಸ್ತೂರಿ ಮಹಲ್-2
“ವಿಶ್ವಂ ಡಿಜಿಟಲ್ ಮೀಡಿಯಾ’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಜೆ.ಎಂ ಪ್ರಹ್ಲಾದ್ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಪಿ.ವಿ.ಆರ್.ಸ್ವಾಮಿ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಗೇಶ್ ಸಂಕಲನ ಕಾರ್ಯವಿದೆ. ಹಾಡುಗಳಿಗೆ ಸಿ. ಸುರೇಶ್ ಸಂಗೀತ ಸಂಯೋಜನೆಯಿದೆ. ವೈಲೆಂಟ್ ವೇಲು, ರಾಮದೇವ್ ಸಾಹಸವಿದೆ. ಸದ್ಯ ಬಿಡುಗಡೆಯಾಗಿರುವ “ರಾಜತಂತ್ರ’ ಚಿತ್ರದ ಟೀಸರ್, ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚಿತ್ರ ಪ್ರೇಕ್ಷಕ ಪ್ರಭುಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಹೊಸವರ್ಷದ ಮೊದಲ ದಿನ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ