ಚಾರ್ಲಿ ಕಲೆಕ್ಷನ್‌ 150 ಕೋಟಿ!: ಲಾಭದಲ್ಲಿ ಶ್ವಾನಗಳಿಗೂ ಪಾಲು


Team Udayavani, Jul 5, 2022, 12:32 PM IST

777 charlei

ನಟ ರಕ್ಷಿತ್‌ ಶೆಟ್ಟಿ ಅಭಿನಯದ “777 ಚಾರ್ಲಿ’ ಸಿನಿಮಾ ಇದೀಗ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ “777 ಚಾರ್ಲಿ’ಗೆ ವಿದೇಶಗಳಲ್ಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸದ್ಯ ಬಿಡುಗಡೆಯಾಗಿ 25 ದಿನಗಳನ್ನು ಪೂರೈಸಿದ ಖುಷಿಯಲ್ಲಿರುವ “777 ಚಾರ್ಲಿ’ ಚಿತ್ರತಂಡ, “25 ದಿನಗಳ ಯಶಸ್ವಿ ಸಂಭ್ರಮ’ವನ್ನು ಆಚರಿಸಿತು. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಚಿತ್ರತಂಡ “777 ಚಾರ್ಲಿ’ ಬಿಡುಗಡೆಯ ನಂತರದ ಬೆಳವಣಿಗೆಗಳ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.

ಗಳಿಕೆಯ 5% ಶ್ವಾನ ಸಂರಕ್ಷಣೆ ಕಾರ್ಯಕ್ಕೆ ಮೀಸಲು!: “777 ಚಾರ್ಲಿ’ ಸಿನಿಮಾದ ಒಟ್ಟು ಲಾಭದಲ್ಲಿ ಬಂದ 5% ರಷ್ಟು ಹಣವನ್ನು ಬೀದಿ ನಾಯಿಗಳ ಸಂರಕ್ಷಣೆಗಾಗಿ ತೆಗೆದಿಡಲು ಚಿತ್ರತಂಡ ನಿರ್ಧರಿಸಿದೆ. “777 ಚಾರ್ಲಿ’ ಸಿನಿಮಾದ 25 ದಿನದ ಸಂಭ್ರಮದಲ್ಲಿ ಚಿತ್ರತಂಡ ಇಂಥದ್ದೊಂದು ನಿರ್ಧಾರವನ್ನು ತೆಗೆದುಕೊಂಡಿದೆ.

ಇದನ್ನೂ ಓದಿ:ನಾಗದೇವರ ಆರಾಧಕಿ ಮಿಸ್ ಇಂಡಿಯಾ ಸಿನಿ‌ ಶೆಟ್ಟಿ

ಈ ಬಗ್ಗೆ ಮಾತನಾಡಿದ ನಾಯಕ ನಟ ಕಂ ನಿರ್ಮಾಪಕ ರಕ್ಷಿತ್‌ ಶೆಟ್ಟಿ, “ಬೀದಿ ನಾಯಿಗಳನ್ನು ಸಂರಕ್ಷಿಸಬೇಕು ಎಂಬ ವಿಷಯವನ್ನು ನಮ್ಮ ಸಿನಿಮಾದಲ್ಲಿ ಹೇಳಿದ್ದೇವೆ. ಅದರಂತೆ ನಾವು ಕೂಡ ಅದಕ್ಕೆ ಬದ್ಧರಾಗಿದ್ದೇವೆ. “777 ಚಾರ್ಲಿ’ ಸಿನಿಮಾದ ಲಾಭಾಂಶದಲ್ಲಿ ಬಂದಿರುವ ಶೇಕಡ 5ರಷ್ಟು ಹಣವನ್ನು “ಚಾರ್ಲಿ’ ಹೆಸರಿನಲ್ಲಿ ಭಾರತದಾದ್ಯಂತ ಇರುವ ಸಂಘ-ಸಂಸ್ಥೆಗಳ ನೆರವಿನೊಂದಿಗೆ ಬೀದಿ ನಾಯಿಗಳ ಆರೈಕೆ ಮತ್ತು ಸಂರಕ್ಷಣೆಗಾಗಿ ವಿನಿಯೋಗಿಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಲಾಭಾಂಶದ 10% ಚಿತ್ರತಂಡಕ್ಕೆ ಬೋನಸ್‌: ಇನ್ನು “777 ಚಾರ್ಲಿ’ ಸಿನಿಮಾದ ಲಾಭಾಂಶದಲ್ಲಿ ಬಂದಿರುವ 10% ಹಣವನ್ನು ಚಿತ್ರದಲ್ಲಿ ದುಡಿದ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರಿಗಾಗಿ ತೆಗೆದಿರಿಸಲಾಗಿದೆ. ಈ ವಿಷಯವನ್ನು ಕೂಡ ಅಧಿಕೃತವಾಗಿ ಘೋಷಿಸಿರುವ ನಟ ಕಂ ನಿರ್ಮಾಪಕ ರಕ್ಷಿತ್‌ ಶೆಟ್ಟಿ, “”777 ಚಾರ್ಲಿ’ ಸಿನಿಮಾಕ್ಕೆ ಪ್ರತಿಯೊಬ್ಬರೂ ಕೂಡ ಅವರದ್ದೇ ಆದ ಪರಿಶ್ರಮ ಹಾಕಿದ್ದಾರೆ. ಎಲ್ಲರ ಪರಿಶ್ರಮದಿಂದಾಗಿಯೇ ಇಂಥದ್ದೊಂದು ಸಿನಿಮಾ ಮಾಡೋದಕ್ಕೆ ಸಾಧ್ಯವಾಯ್ತು. ಸಿನಿಮಾದ ಯಶಸ್ಸಿಗೆ ಅವರೆಲ್ಲರೂ ಪಾಲುದಾರರಾಗಿದ್ದಾರೆ. “777 ಚಾರ್ಲಿ’ಯ ಸಕ್ಸಸ್‌ ಸಿನಿಮಾ ತಂಡದ ಪ್ರತಿಯೊಬ್ಬರ ಜೊತೆಯೂ ಹಂಚಿಕೊಳ್ಳಬೇಕು. ಹೀಗಾಗಿ ನನ್ನನ್ನು ಹೊರತುಪಡಿಸಿ ಸಿನಿಮಾದಲ್ಲಿ ಅಭಿನಯಿಸಿರುವ ಕಲಾವಿದರು, ಕೆಲಸ ಮಾಡಿದ ತಂತ್ರಜ್ಞರು ಮತ್ತು ಕಾರ್ಮಿಕರಿಗಾಗಿ “777 ಚಾರ್ಲಿ’ ಸಿನಿಮಾದ ಲಾಭಾಂಶದಲ್ಲಿ ಬಂದಿರುವ ಶೇಕಡ 10ರಷ್ಟು ಹಣವನ್ನು ತೆಗೆದಿಡಲು ನಿರ್ಧರಿಸಿದ್ದೇವೆ’ ಎಂದಿದ್ದಾರೆ ರಕ್ಷಿತ್‌ ಶೆಟ್ಟಿ.

150 ಕೋಟಿ ಗಳಿಕೆ?: ಇನ್ನು ಪ್ಯಾನ್‌ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾದ “777 ಚಾರ್ಲಿ’ ಸಿನಿಮಾ ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಗಳಲ್ಲೂ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಇದೀಗ “777 ಚಾರ್ಲಿ’ ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರ್ಣಗೊಳಿಸಿರುವುದರಿಂದ, ಸಹಜವಾಗಿಯೇ ಸಿನಿಮಾದ ಬಾಕ್ಸಾಫೀಸ್‌ ಕಲೆಕ್ಷನ್‌ ಎಷ್ಟಾಗಿರಬಹುದು ಎಂಬ ಕುತೂಹಲ ಸಿನಿಮಾ ಮಂದಿಯಲ್ಲಿ ಮತ್ತು ಪ್ರೇಕ್ಷಕರಲ್ಲಿತ್ತು. ಆದರೆ “777 ಚಾರ್ಲಿ’ ಸಿನಿಮಾದ ಅಧಿಕೃತ ಗಳಿಕೆಯ ಮಾಹಿತಿ ಬಿಟ್ಟುಕೊಡದ ಚಿತ್ರತಂಡ, ಇಲ್ಲಿಯವರೆಗೆ ಆಗಿರುವ ಒಟ್ಟು ಗಳಿಕೆಯ ಬಗ್ಗೆ ಒಂದಷ್ಟು ಸುಳಿವನ್ನು ಬಿಟ್ಟುಕೊಟ್ಟಿದೆ. ಕನ್ನಡ ಮತ್ತು ಇತರ ಭಾಷೆಗಳ ಒಟ್ಟು ಥಿಯೇಟರಿಕಲ್‌ ಕಲೆಕ್ಷನ್‌ ಮತ್ತು ವಿದೇಶಿ ಗಳಿಕೆ ಸೇರಿದಂತೆ, 25 ದಿನಗಳವರೆಗೆ “777 ಚಾರ್ಲಿ’ ಬರೋಬ್ಬರಿ 150 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎನ್ನಲಾಗುತ್ತಿದೆ.

25 ದಿನ ಸಂಭ್ರಮ ದಲ್ಲಿ ನಿರ್ದೇಶಕ ಕಿರಣ್‌ ರಾಜ್‌, ನಾಯಕ ನಟಿ ಸಂಗೀತಾ ಶೃಂಗೇರಿ, ಬೇಬಿ ಶಾರ್ವರಿ, ಸಂಗೀತ ನಿರ್ದೇಶಕ ನೋಬಿನ್‌ ಪೌಲ್‌, ವಿತರಕ ಕಾರ್ತಿಕ್‌ ಗೌಡ ಮತ್ತಿತರರು ಚಿತ್ರದ ಬಿಡುಗಡೆಯ ನಂತರ ಸಿಗುತ್ತಿರುವ ಪ್ರತಿಕ್ರಿಯೆಗಳ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.