ದಶಕದ ಬಳಿಕ ಮತ್ತೆ ಸಿನ್ಮಾಗೆ ರಕ್ಷಿತಾ

ಸಹೋದರನ ಚಿತ್ರದಲ್ಲಿ ರಚಿತಾ ಜೊತೆ ಹಾಡಿಗೆ ಹೆಜ್ಜೆ

Team Udayavani, Oct 3, 2019, 3:03 AM IST

rakshita

ರಕ್ಷಿತಾ ಪ್ರೇಮ್‌ ಈಗ ಕಿರುತೆರೆಯಲ್ಲಿ ತುಂಬಾ ಬಿಝಿ. ಹೌದು, “ಕಾಮಿಡಿ’ ಕಾರ್ಯಕ್ರಮವೊಂದರ ತೀರ್ಪುಗಾರರಾಗಿ ಕಾಣಿಸಿಕೊಂಡಿರುವ ರಕ್ಷಿತಾ ಪ್ರೇಮ್‌, ಈಗ ಇನ್ನೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ. ಆ ಸುದ್ದಿಯ ವಿಶೇಷವೆಂದರೆ, ಸುಮಾರು 12 ವರ್ಷಗಳ ಬಳಿಕ ರಕ್ಷಿತಾ ಪ್ರೇಮ್‌ ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. “ತಾಯಿಯ ಮಡಿಲು’ ಸಿನಿಮಾ ಬಳಿಕ ರಕ್ಷಿತಾ ಅವರು ಸಿನಿಮಾ ನಟನೆಯಿಂದ ದೂರ ಉಳಿದಿದ್ದರು.

ಆ ಮಧ್ಯೆ ಕಿರುತೆರೆಯಲ್ಲಿ ಮೆಲ್ಲನೆ ಸದ್ದು ಮಾಡುತ್ತಿದ್ದ ಅವರೀಗ, ಪುನಃ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ ಎಂಬುದೇ ಈ ಹೊತ್ತಿನ ವಿಶೇಷ. ಅಂದಹಾಗೆ, ರಕ್ಷಿತಾ ಪ್ರೇಮ್‌ ಕಾಣಿಸಿಕೊಳ್ಳುತ್ತಿರುವುದು ಅವರ ಸಹೋದರ ರಾಣಾ ಅಭಿನಯದ “ಏಕ್‌ ಲವ್‌ ಯಾ’ (ಏಕಲವ್ಯ) ಚಿತ್ರದಲ್ಲಿ. ಈ ಚಿತ್ರವನ್ನು ಪ್ರೇಮ್‌ ನಿರ್ದೇಶಿಸುತ್ತಿದ್ದು, ರಕ್ಷಿತಾ ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು.

ಹಾಗಾದರೆ, ರಕ್ಷಿತಾ “ಏಕ್‌ ಲವ್‌ ಯಾ’ ಚಿತ್ರದಲ್ಲಿ ಯಾವ ಪಾತ್ರ ಮಾಡುತ್ತಾರೆ ಎಂಬುದಕ್ಕೆ ಸದ್ಯ ಉತ್ತರವಿಲ್ಲ. ಆದರೆ, ನಟಿ ರಚಿತಾರಾಮ್‌ ಜೊತೆ ರಕ್ಷಿತಾ ಅವರು ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ ಎಂಬುದು ಪಕ್ಕಾ ಆಗಿದೆ. ಲವ್‌ ಫೇಲ್ಯೂರ್‌ ಹಾಡೊಂದರಲ್ಲಿ ರಕ್ಷಿತಾ ಪ್ರೇಮ್‌ ಹಾಗು ರಚಿತಾರಾಮ್‌ ಇಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಲವ್‌ ಬ್ರೇಕ್‌ ಅಪ್‌ ಆದ ಹುಡುಗಿಯ ಮೇಲೆ ಸಾಗುವ ಈ ಹಾಡಲ್ಲಿ ಈ ಇಬ್ಬರು ನಾಯಕಿಯರು ಹೆಜ್ಜೆ ಹಾಕುತ್ತಿದ್ದಾರೆ.

ಇದು ಹುಡುಗಿಯರಿಗಾಗಿಯೇ ಬರೆದಂತಹ ಹಾಡು ಆಗಿರುವುದರಿಂದ, ಚಿತ್ರತಂಡ, ಈ ಹಾಡನ್ನು ಎಲ್ಲಾ ಹುಡುಗಿಯರಿಗೆ ಅರ್ಪಿಸಲಿದೆಯಂತೆ. ಈಗಾಗಲೇ “ಏಕ್‌ ಲವ್‌ ಯಾ’ ಚಿತ್ರದ ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ. ಸದ್ಯದಲ್ಲೇ ಹಾಡಿನ ಚಿತ್ರೀಕರಣದಲ್ಲಿ ರಕ್ಷಿತಾ ಹಾಗು ರಚಿತಾ ಕಾಣಿಸಿಕೊಳ್ಳಲಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ, ಈಗಾಗಲೇ ಈ ಹಾಡಿನ ಚಿತ್ರೀಕರಣ ನಡೆಯಬೇಕಿತ್ತು. ಕಾರಣಾಂತರಗಳಿಂದ ಶುರುವಾಗಿಲ್ಲ. ಅಂದಹಾಗೆ, ಈ ಹಾಡಿಗೆ ಮೋಹನ್‌ ನೃತ್ಯ ಸಂಯೋಜನೆ ಇದೆ.

ಅರ್ಜುನ್‌ ಜನ್ಯ ಅವರ ಸಂಗೀತವಿದೆ. ಅದೇನೆ ಇರಲಿ, ರಕ್ಷಿತಾ ಪುನಃ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಂಡು ಹಾಡೊಂದಕ್ಕೆ ಹೆಜ್ಜೆ ಹಾಕುತ್ತಿರುವ ಸುದ್ದಿ ಅವರ ಅಭಿಮಾನಿಗಳ ಪಾಲಿಗಂತೂ ಖುಷಿಯ ವಿಚಾರ. ಇತ್ತೀಚೆಗಷ್ಟೇ ರಕ್ಷಿತಾ ಅವರು, ದರ್ಶನ್‌ ಜೊತೆ ಸೆಲ್ಫಿ ತೆಗೆದುಕೊಂಡು ಟ್ವಿಟ್ಟರ್‌ನಲ್ಲಿ ಹಾಕಿದ್ದರು. ಎಲ್ಲರಿಗೂ ರಕ್ಷಿತಾ ಮತ್ತೆ ಸಿನಿಮಾಗೆ ಬರುತ್ತಾರಾ? ಎಂಬ ಪ್ರಶ್ನೆ ಗಿರಕಿ ಹೊಡೆಯುತ್ತಿತ್ತು. ಆದರೆ, ಈಗ ರಕ್ಷಿತಾ ಅವರ ಸಹೋದರನ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸುದ್ದಿ ಹೊರಬಿದ್ದಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.