“ರಾಂಧವ’ ಸಂಭ್ರಮ

25 ದಿನದ ಸಂಭ್ರಮದಲ್ಲಿ ಮಿಂದೆದ್ದ ಫ್ಯಾನ್ಸ್‌

Team Udayavani, Sep 23, 2019, 3:00 AM IST

ಕನ್ನಡ ಚಿತ್ರರಂಗದಲ್ಲೀಗ ಹೊಸ ಸಿನಿಮಾಗಳ ಫ‌ಸಲು ಚೆನ್ನಾಗಿದೆ. ಅದರಲ್ಲೂ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆಯೂ ಸಿಗುತ್ತಿದೆ. ಆ ಸಾಲಿಗೆ ಈಗ “ರಾಂಧವ’ ಕೂಡ ಸೇರಿದೆ. ಹೌದು, ಈ ಚಿತ್ರ ಬಿಡುಗಡೆಯಾದ ದಿನ ಎಲ್ಲೆಡೆ ಮೆಚ್ಚುಗೆ ಪಡೆದಿತ್ತು. ಅಷ್ಟೇ ಅಲ್ಲ, 25 ದಿನಗಳ ಯಶಸ್ವಿ ಪ್ರದರ್ಶನ ಕಂಡಿರುವುದು ಚಿತ್ರತಂಡಕ್ಕೆ ಸಹಜವಾಗಿಯೇ ಖುಷಿ ಹೆಚ್ಚಿಸಿದೆ. ಈ ಖುಷಿಗೆ ಚಿತ್ರದ ನಾಯಕ ಭುವನ್‌ ಅವರ ಅಭಿಮಾನಿಗಳು ಕೇಕ್‌ ಕತ್ತರಿಸಿ, ಸಂಭ್ರಮಿಸಿರುವುದು ವಿಶೇಷ.

ಒಂದು ಚಿತ್ರ ಸಕ್ಸಸ್‌ನತ್ತ ದಾಪುಗಾಲಿಟ್ಟರೆ, ಆ ಚಿತ್ರತಂಡ ಖುಷಿ ಹಂಚಿಕೊಳ್ಳುವುದು ಸಹಜ. ಆದರೆ, ಹೊಸಬರ ಚಿತ್ರ ಮೆಚ್ಚಿಕೊಂಡ ಜನರು, ಹೀರೋ ಮೂಲಕ ಕೇಕ್‌ ಕತ್ತರಿಸಿ ಸಂಭ್ರಮಿಸುತ್ತಿರುವುದು ಹೊಸ ವಿಷಯ. ಬೆಂಗಳೂರು, ಕೊಪ್ಪಳ, ರಾಮನಗರ, ತುಮಕೂರು, ಹಾಸನ ಮತ್ತು ದೊಡ್ಡಬಳ್ಳಾಪುರ ಭಾಗದ ಅಭಿಮಾನಿಗಳು ನಾಯಕ ಭುವನ್‌ ಅವರಿಂದ ಕೇಕ್‌ನ್ನು ಕತ್ತರಿಸಿ ಖುಷಿ ಹಂಚಿಕೊಂಡರು.

ಈ ಖುಷಿ ಹಂಚಿಕೊಂಡ ನಾಯಕ ಭುವನ್‌, “ಸಿನಿಮಾ ಮಾಡಿ, ಬಿಡುಗಡೆ ಮಾಡುವುದು ಸುಲಭ ಅಂದುಕೊಂಡಿದ್ದೆ. ಆದರೆ, ಬಿಡುಗಡೆ ವೇಳೆ ಎಷ್ಟು ಕಷ್ಟ ಆಯ್ತು ಅನ್ನೋದನ್ನು ಅರಿತೆ. ಕೆಲವು ಕಡೆ ನಿರೀಕ್ಷೆ ಇತ್ತು. ಆದರೆ, ಅಲ್ಲೆಲ್ಲಾ ಆ ನಿರೀಕ್ಷೆ ಸುಳ್ಳಾಯ್ತು. ಆದರೆ, ಕೆಲ ಸೆಂಟರ್‌ಗಳಲ್ಲಿ ನಮ್ಮ ನಿರೀಕ್ಷೆ ಮೀರಿ ಚಿತ್ರ ಪ್ರದರ್ಶನ ಕಂಡಿದೆ. ನಾವು ಕೆಲವು ಚಿತ್ರಮಂದಿರಗಳಿಗೆ ಭೇಟಿ ಕೊಟ್ಟ ವೇಳೆ, ಎಲ್ಲರಿಂದಲೂ ಇದು ಹೊಸಬರ ಸಿನಿಮಾ ಎನಿಸುವುದಿಲ್ಲ ಅಂತಾನೇ ಹೇಳುತ್ತಿದ್ದರು.

ಆಗ, ನಮ್ಮ ತಂಡಕ್ಕೆ ಸಿನಿಮಾ ಮಾಡಿದ್ದಕ್ಕೂ ಸಾರ್ಥಕ ಎನಿಸಿದ್ದು ಸುಳ್ಳಲ್ಲ’ ಎಂದರು ಭುವನ್‌. ನಿರ್ದೇಶಕ ಸುನೀಲ್‌ ಆಚಾರ್ಯ ಅವರಿಗೆ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿರುವ ಸೂಚನೆ ಸಿಕ್ಕಿದ್ದರಿಂದ 50 ದಿನದ ಸಂಭ್ರಮ ಆಚರಿಸಿಕೊಳ್ಳಬಹುದು ಎಂಬ ಯೋಚನೆ ಇತ್ತಂತೆ. “ಅಭಿಮಾನಿಗಳು ಸೇರಿ, 25 ದಿನದ ಸಂಭ್ರಮ ಹಂಚಿಕೊಂಡಿದ್ದಾರೆ. ಅವರ ಸಂತಸಕ್ಕೆ ನಮ್ಮ ಬೆಂಬಲ ಬೇಕು.

ಹಾಗಾಗಿ ಅವರ ಪ್ರೀತಿಯ ಆಹ್ವಾನಕ್ಕೆ ಬಂದಿದ್ದೇವೆ’ ಎಂಬುದು ಸುನಿಲ್‌ಆಚಾರ್ಯ ಮಾತು. ನಟಿ ವಾಣಿಶ್ರೀ ಅವರಿಗೆ ಒಳ್ಳೆಯ ಚಿತ್ರದಲ್ಲಿ ಕೆಲಸ ಮಾಡಿದ ಖುಷಿಯಂತೆ. ಅವರಿಲ್ಲಿ ಕಥೆ ಕೇಳದೆ ನಟನೆ ಮಾಡಿದ್ದನ್ನು ನೆನಪಿಸಿಕೊಂಡರು ಅವರು. ಇನ್ನು ಸಂಗೀತ ನಿರ್ದೇಶಕ ಶಶಾಂಕ್‌ ಶೇಷಗಿರಿ ಅವರ ಕೆಲಸಕ್ಕೆ ಎಲ್ಲೆಡೆಯಿಂದಲೂ ಮೆಚ್ಚುಗೆ ಸಿಕ್ಕಿದೆ. ಅದನ್ನು ಹೇಳಿಕೊಂಡು ಅವರು, ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...

  • ಈ ಬಾರಿ ನಡೆಯಲಿರುವ ಹನ್ನೆರಡನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ನಟ ಯಶ್‌ ಅವರು ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಪ್ರತಿ...

ಹೊಸ ಸೇರ್ಪಡೆ