ಐತಿಹಾಸಿಕ ಪಾತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ

ಉಪ್ಪಿ - ನಾಗಣ್ಣ ಹೊಸ ಚಿತ್ರಕ್ಕೆ ಸಿದ್ಧತೆ

Team Udayavani, Nov 30, 2020, 11:33 AM IST

ಐತಿಹಾಸಿಕ ಪಾತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ

ಸ್ಯಾಂಡಲ್‌ವುಡ್‌ನ‌ ಸಕ್ಸಸ್‌ಫ‌ುಲ್‌ ಕಾಂಬಿನೇಶನ್‌ ಪೈಕಿ ನಟ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ನಿರ್ದೇಶಕ ನಾಗಣ್ಣ ಅವರ ಕಾಂಬಿನೇಶನ್‌ ಕೂಡ ಒಂದು. ಈಗಾಗಲೇ “ಕುಟುಂಬ’, “ಗೌರಮ್ಮ’, “ದುಬೈ ಬಾಬು’, “ಗೋಕರ್ಣ’ ಸೇರಿದಂತೆ ನಾಲ್ಕು ಹಿಟ್‌ ಚಿತ್ರಗಳನ್ನು ನೀಡಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ನಿರ್ದೇಶಕ ನಾಗಣ್ಣ ಜೋಡಿ ಈಗ ಐದನೇ ಚಿತ್ರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಎಲ್ಲ ಅಂದುಕೊಂಡಂತೆ ನಡೆದರೆ, ಹೊಸ ವರ್ಷದ ಆರಂಭದಲ್ಲಿ ಈ ಚಿತ್ರ ಸೆಟ್ಟೇರಲಿದೆ. ಇನ್ನು ತಮ್ಮ ಮತ್ತು ಉಪೇಂದ್ರ ಅವರ ಕಾಂಬಿನೇಶನ್‌ನ ಹೊಸ  ಚಿತ್ರದ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ನಿರ್ದೇಶಕ ನಾಗಣ್ಣ, “ಇದೊಂದು ಐತಿಹಾಸಿಕ ಕಥಾಹಂದರ ಹೊಂದಿರುವ ಸಿನಿಮಾ.

15ನೇ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಮೇಲೆ ತರುತ್ತಿದ್ದೇವೆ. ಭಾರವಿ ಅವರಕಥೆ ಇದಾಗಿದೆ. ಕಥೆಯನ್ನುಕೇಳಿದ ಉಪೇಂದ್ರ ಖುಷಿಯಿಂದ ಈ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಮೊದಲ ಬಾರಿಗೆ ಉಪೇಂದ್ರ ಈ ಸಿನಿಮಾದಲ್ಲಿ ಐತಿಹಾಸಿಕ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಸದ್ಯಕ್ಕೆ ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಮಾಡಲು ಯೋಚಿಸಿದ್ದೇವೆ. ಸಿನಿಮಾದ ಟೈಟಲ್‌ ಇನ್ನಷ್ಟೇ ಅಂತಿಮವಾಗಬೇಕಿದೆ’ ಎನ್ನುತ್ತಾರೆ. “ಕನ್ನಡದ ಜೊತೆಗೆ ಬೇರೆ ಭಾಷೆಯ ಕಲಾವಿದರು

ಕೂಡ ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ಸಿನಿಮಾದ ಹೀರೋಯಿನ್ಸ್‌ ಮತ್ತಿತರಕಲಾವಿದರ ಆಯ್ಕೆ ನಡೆಯುತ್ತಿದೆ. ಈ ಸಿನಿಮಾದ ಹಾಡುಗಳಿಗೆ ಹಂಸಲೇಖ ಸಂಗೀತಸಂಯೋಜಿಸುತ್ತಿದ್ದಾರೆ. ಈಗಾಗಲೇ ಹಾಡುಗಳಸಂಯೋಜನೆಕೂಡ ಶುರುವಾಗಿದೆ. ಚಿತ್ರಕ್ಕೆ ಸುರೇಶ್‌ ಅರಸ್‌ ಸಂಕಲನವಿದೆ. ಉಳಿದಂತೆ ಇತರ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ ನಿರ್ದೇಶಕ ನಾಗಣ್ಣ.

ಇನ್ನು ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಇಬ್ಬರು ನಾಯಕಿಯರು ಜೋಡಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರಂತೆ. ಏಕಕಾಲಕ್ಕೆ ನಾಲ್ಕು ಭಾಷೆಗಳಲ್ಲಿ ಈ ಚಿತ್ರ ಬರುತ್ತಿರುವುದರಿಂದ, ಇಬ್ಬರು ನಾಯಕಿಯರ ಪಾತ್ರಕ್ಕೆ ಈಗಾಗಲೇ, ಹಿಂದಿ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಸ್ಟಾರ್‌ ನಟಿಯರನ್ನೇ ಚಿತ್ರಕ್ಕೆ ಕರೆತರುವ ಯೋಚನೆಯಿದೆ ಎನ್ನಲಾಗುತ್ತಿದೆ. ಈ ಹಿಂದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ್ದ “ಎ’ ಚಿತ್ರವನ್ನು ನಿರ್ಮಿಸಿದ್ದ ಜಗನ್ನಾಥ್‌ ಅವರ ಬ್ಯಾನರ್‌ನಲ್ಲಿ ಈ ಚಿತ್ರ ಮೂಡಿಬರುತ್ತಿದೆ.

“ಈಗಾಗಲೇ ಈ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಶುರುವಾಗಿದೆ. ಮುಂಬರುವ ಜನವರಿ ಅಥವಾ ಫೆಬ್ರವರಿಯಲ್ಲಿ ಸಿನಿಮಾದ ಮುಹೂರ್ತ ನಡೆಯಲಿದೆ. ಒಂದೇ ಹಂತದಲ್ಲಿ ಶೂಟಿಂಗ್‌ ಮುಗಿಸುವ ಯೋಚನೆ ಇದೆ. ಇಲ್ಲಿಯವರೆಗೆ ನೋಡಿರದ ಹೊಸ ಗೆಟಪ್‌ನಲ್ಲಿ ಉಪೇಂದ್ರ ಅವರನ್ನು ಈ ಸಿನಿಮಾದಲ್ಲಿ ನೋಡಬಹುದು. ಅವರ ಅಭಿಮಾನಿಗಳಿಗೆ ಖಂಡಿತ ಇಷ್ಟವಾಗುವ ಸಿನಿಮಾವಾಗಲಿದೆ’ ಎನ್ನುತ್ತಾರೆ ನಿರ್ದೇಶಕ ನಾಗಣ್ಣ.

“ಕಬ್ಜ’ ಚಿತ್ರೀಕರಣ ಪೂರ್ಣವಾಗುತ್ತಿದ್ದಂತೆ, ಉಪ್ಪಿ – ನಾಗಣ್ಣಕಾಂಬಿನೇಶನ್‌ನ ಈ ಹೊಸಚಿತ್ರ ಶುರುವಾಗಲಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.