ಪ್ರತಿಭೆ ಇದ್ದವರಿಗೆ ರೆಡ್‌ ಕಾರ್ಪೆಟ್

ಪರಭಾಷೆಯಲ್ಲಿ ಕನ್ನಡ ಕಲಾವಿದರಿಗೆ ಬೇಡಿಕೆ

Team Udayavani, Apr 24, 2020, 10:43 AM IST

ಪ್ರತಿಭೆ ಇದ್ದವರಿಗೆ ರೆಡ್‌ ಕಾರ್ಪೆಟ್

ಒಂದು ಕಾಲವಿತ್ತು. ಕನ್ನಡ ಚಿತ್ರಗಳು ಬೆಂಗಳೂರು ದಾಟಿ ಹೊರ ಹೋಗುವುದಿಲ್ಲ ಎಂದು. ಆದರೆ ಈಗ ಕಾಲ ಬದಲಾಗಿದೆ. ಕನ್ನಡ ಚಿತ್ರಗಳು ತಮ್ಮ ಮಾರುಕಟ್ಟೆಯನ್ನು ವಿಸ್ತರಿಸಿಕೊಂಡಿವೆ.

ಕೇವಲ ಕರ್ನಾಟಕವಷ್ಟೇ ಅಲ್ಲದೇ, ದೇಶ ವಿದೇಶಗಳಲ್ಲಿ ತೆರೆಕಾಣುತ್ತಿವೆ. ಈ ಮೂಲಕ ಕನ್ನಡದ ಮಾರುಕಟ್ಟೆ ವಿಸ್ತರಣೆಯಾಗುವ ಜೊತೆಗೆ ಕನ್ನಡದ ಸಿನಿಮಾಗಳಿಗೆ, ಕನ್ನಡ ಕಲಾವಿದರಿಗೆ ಬೇರೆ ಭಾಷೆಗಳಲ್ಲಿ ಅವಕಾಶ ಸಿಗುತ್ತಿದೆ. ಈ ಮೂಲಕ ಕಲಾವಿದರು ಕೂಡಾ ಭಾಷೆಯ ಹಂಗು ತೊರೆದು ಬೇರೆ ಬೇರೆ ಚಿತ್ರರಂಗದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ರಶ್ಮಿಕಾ, ನಭಾ ನಟೇಶ್‌ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಒಂದಷ್ಟು ಕನ್ನಡದ ನಟ-ನಟಿಯರು ಆಗಾಗ ಬೇರೆ ಬೇರೆ ತೆಲುಗು ಚಿತ್ರಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಈಗ ಇನ್ನೊಂದಿಷ್ಟು ಮಂದಿಗೆ ಅವಕಾಶಗಳು ಒದಗಿ ಬರುತ್ತಿವೆ. ಅದರಲ್ಲಿ ಡಾಲಿ ಧನಂಜಯ್‌ ಕೂಡಾ ಒಬ್ಬರು.

ಹೌದು, ಡಾಲಿ ಖ್ಯಾತಿಯ ಧನಂಜಯ್‌ ಮತ್ತೂಮ್ಮೆ ಟಾಲಿವುಡ್‌ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇತ್ತೀಚೆಗೆ ಲಭ್ಯವಾಗಿದೆ. ಇದರ ನಡುವೆ ಇನ್ನೊಂದು ಅಚ್ಚರಿಯ ವಿಷಯವೆಂದರೆ, ತಮಿಳಿನ ವಿಜಯ್‌ ಸೇತುಪತಿಯವರ ಜಾಗಕ್ಕೆ ಡಾಲಿ ಆಯ್ಕೆಯಾಗಿದ್ದಾರೆ ಎಂಬ ಮಾತುಗಳು.

ಹೌದು, ಟಾಲಿವುಡ್‌ನ‌ ಬಹುನಿರೀಕ್ಷಿತ ಪುಷ್ಪ ಸಿನಿಮಾ ದಲ್ಲಿ ವಿಲನ್‌ ಆಗಿ ವಿಜಯ್‌ ಸೇತುಪತಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಈ ಮೂಲಕ ಅಲ್ಲು ಅರ್ಜುನ್‌ ವಿರುದ್ಧ ತೊಡೆ ತಟ್ಟಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬರುತ್ತಿರುವ ಮಾಹಿತಿ ಪ್ರಕಾರ ಪುಷ್ಪ ಸಿನಿಮಾದಿಂದ ವಿಜಯ್‌ ಸೇತುಪತಿ ಹೊರ ನಡೆದಿದ್ದಾರಂತೆ. ಈ ಚಿತ್ರ ಬಹುಭಾಷೆಯಲ್ಲಿ ತಯಾರಾಗುತ್ತಿರುವುದೇ ವಿಜಯ್‌ ಸೇತುಪತಿ ಸಿನಿಮಾದಿಂದ ಹೊರ ಬರಲು ಕಾರಣ ಎನ್ನಲಾಗಿದೆ.

ಈ ಮೊದಲು ಪುಷ್ಪ ಚಿತ್ರ ತೆಲುಗಿನಲ್ಲಿ ಮಾತ್ರ ರಿಲೀಸ್‌ ಆಗಲಿದೆ ಎಂದು ವಿಜಯ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದರಂತೆ. ವಿಜಯ್‌ ಒಪ್ಪಿಕೊಂಡ ನಂತರ ಪ್ಯಾನ್‌ ಇಂಡಿಯಾ ಸಿನಿಮಾವಾಗಿ ರಿಲೀಸ್‌ ಆಗುತ್ತಿದೆ ಎಂದು ತಿಳಿದಿದ್ದರಿಂದ, ಸಿನಿಮಾದಿಂದ ಹೊರನಡೆದಿದ್ದಾರಂತೆ. ಮತ್ತೂಂದೆಡೆ, ವಿಜಯ್‌ಗೆ ತಮಿಳಿನಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳಲು ಇಷ್ಟವಿಲ್ಲ ವಂತೆ. ಇದರಿಂದಾಗಿ ಅವರ ತಮಿಳು ಅಭಿಮಾನಿ  ಗಳಿಗಾಗಿ ಬೇಸರವಾ ಗುತ್ತಂತೆ. ಹೀಗಾಗಿ ವಿಜಯ್‌ ಪುಷ್ಪ ಸಿನಿಮಾದಿಂದ ಹೊರಬಂದಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಇಷ್ಟೇ ಅಲ್ಲದೆ ವಿಜಯ್‌ ಸದ್ಯ ತಮಿಳಿನ ಮಾಸ್ಟರ್‌ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದು, ಮತ್ತೂಂದೆಡೆ ತಮಿಳು, ತೆಲುಗು ಹಾಗೂ ಹಿಂದಿ ಸೇರಿ 10ಕ್ಕೂ ಹೆಚ್ಚು ಸಿನಿಮಾಗಳಲ್ಲಿ ವಿಜಯ್‌ ಸೇತುಪತಿ ಬ್ಯುಸಿಯಾಗಿದ್ದಾರಂತೆ.

ಹೀಗಾಗಿ ಡೇಟ್‌ ಹೊಂದಾಣಿಕೆಯಾ ಗುತ್ತಿಲ್ಲವಂತೆ. ಇದಕ್ಕಾಗಿ ಪುಷ್ಪ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ಸಹ ಹೇಳಲಾಗುತ್ತಿದೆ. ಆದರೆ ಈ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ. ಒಟ್ಟಾರೆ ವಿಜಯ್‌ ಸೇತುಪತಿ ಚಿತ್ರದಿಂದ ಹೊರನಡೆದಿದ್ದರಿಂದ ಆ ಜಾಗಕ್ಕೆ ಕನ್ನಡದ ಡಾಲಿ ಧನಂಜಯ್‌ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಡಾಲಿಗೆ ಈಗಾಗಲೇ ಚಿತ್ರ ತಂಡದಿಂದ ಆಫರ್‌ ಬಂದಿದ್ದು, ಲಾಕ್‌ಡೌನ್‌ ಮುಗಿದ ಬಳಿಕ ಸಿನಿಮಾಗೆ ಸಹಿ ಹಾಕಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ವಿಜಯ್‌ ಸೇತುಪತಿ ಪಾತ್ರವನ್ನೇ ನಿರ್ವಹಿಸುತ್ತಾರಾ, ಬೇರೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ ಎನ್ನುವುದು ಖಚಿತವಾಗಿಲ್ಲ.­

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.