ನಿಖೀಲ್ ಬರ್ತ್ಡೇಗೆ ಬರಲಿದೆ ‘ರೈಡರ್’ ಟೀಸರ್
Team Udayavani, Jan 15, 2021, 9:23 AM IST
ನಿಖೀಲ್ ಕುಮಾರ್ ಅಭಿನಯದ “ರೈಡರ್’ ಚಿತ್ರದ ಟೀಸರ್ ನಿಖೀಲ್ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ. ಜನವರಿ 22ರಂದು ನಿಖೀಲ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅವರಿಗೆ ಟೀಸರ್ ಗಿಫ್ಟ್ ನೀಡಲಿದೆ.
ಲಹರಿ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರವನ್ನು ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪಕ್ಕಾ ಕಮರ್ಶಿಯಲ್ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು, ನಿಖೀಲ್ ಇಲ್ಲಿ ಒಬ್ಬ ಬಾಸ್ಕೇಟ್ ಬಾಲ್ ಪ್ಲೇಯರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಬಾಸ್ಕೇಟ್ ಬಾಲ್ ಪ್ಲೇಯರ್ ಲೈಪ್ನಲ್ಲಿ ಏನೇನು ನಡೆಯುತ್ತದೆ ಅನ್ನೋದರ ಸುತ್ತ ಸಿನಿಮಾದ ಕಥೆ ನಡೆಯುತ್ತದೆ. ಇದರಲ್ಲಿ ನಿಖೀಲ್ ಅವರದು ಮಧ್ಯಮ ವರ್ಗದ ಹುಡುಗನ ಪಾತ್ರ. ಇದರಲ್ಲಿ ಲವ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್, ಎಮೋಶನ್ಸ್ ಎಲ್ಲವೂ ಇರಲಿದ್ದು, ಚಿತ್ರದ ಕ್ಯಾರೆಕ್ಟರ್ಗಾಗಿ ಒಂದಷ್ಟು ತಯಾರಿ ಮಾಡಿಕೊಂಡಿದ್ದಾರೆ ನಿಖೀಲ್.
ಚಿತ್ರದ ಕಥೆ ಕನ್ನಡ ಮತ್ತು ತೆಲುಗು ಎರಡೂ ಭಾಷೆಯ ಆಡಿಯನ್ಸ್ಗೂ ತಲುಪುವಂತಿದೆ. ಹಾಗಾಗಿ ಈ ಸಿನಿಮಾವನ್ನು ಕನ್ನಡ, ತೆಲುಗು ಎರಡೂ ಭಾಷೆಯಲ್ಲೂ ಮಾಡಲಾಗುತ್ತಿದೆಯಂತೆ. ಕನ್ನಡ, ತೆಲುಗು ಚಿತ್ರರಂಗದ ಪ್ರಸಿದ್ದ ಕಲಾವಿದರು, ತಂತ್ರಜ್ಞರು ಸಿನಿಮಾದಲ್ಲಿರುತ್ತಾರೆ