ರಾಬರ್ಟ್‌ ಬಿಡುಗಡೆಗೆ ಆತುರವಿಲ್ಲ

ಪ್ರೇಕ್ಷಕರು ಭಯ ಬಿಟ್ಟು ಥಿಯೇಟರ್‌ಗೆ ಬಂದ ಮೇಲಷ್ಟೇ ರಿಲೀಸ್‌ ; ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ನೇರ ಮಾತು

Team Udayavani, Oct 21, 2020, 12:44 PM IST

cinema-tdy-1

ಬಿಡುಗಡೆಗೆ ಸಿದ್ಧವಾಗಿರುವ ಸ್ಟಾರ್‌ ಸಿನಿಮಾ ಪಟ್ಟಿಯಲ್ಲಿ ದರ್ಶನ್‌ ಅವರ “ರಾಬರ್ಟ್‌’ ಚಿತ್ರಕೂಡಾ ಒಂದು. ಈಗಾಗಲೇ ಚಿತ್ರ ಹಲವು ಕಾರಣಗಳಿಗಾಗಿ ನಿರೀಕ್ಷೆ ಹುಟ್ಟಿಸಿದೆ. ಈಗ ಚಿತ್ರದ ಬಿಡುಗಡೆಕುರಿತಾದ ಚರ್ಚೆ ಜೊರಾಗಿ ನಡೆಯುತ್ತಿದೆ.ಕ್ರಿಸ್‌ಮಸ್‌ಗೆ ಚಿತ್ರ ಬಿಡುಗಡೆಯಾಗಲಿದೆ ಎಂಬ ಸುದ್ದಿ ಜೋರಾಗಿ ಹರಿದಾಡಿದೆ.

ಹಾಗಾದರೆ,ಕ್ರಿಸ್‌ಮಸ್‌ಗೆ ಚಿತ್ರ ಬಿಡುಗಡೆಯಾಗೋದು ಪಕ್ಕಾನಾ… ಈ ಪ್ರಶ್ನೆಯನ್ನು “ರಾಬರ್ಟ್‌’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಅವರ ಮುಂದಿಟ್ಟರೆ, “ಸದ್ಯಕ್ಕೆ ಯಾವುದೂ ಅಂತಿಮವಾಗಿಲ್ಲ’ ಎನ್ನುತ್ತಾರೆ.

“ರಾಬರ್ಟ್‌’ ಸಿನಿಮಾದ ಬಿಡುಗಡೆ ಕುರಿತಾಗಿ “ಉದಯವಾಣಿ’ಯೊಂದಿಗೆ ಮಾತನಾಡಿದ ನಿರ್ಮಾಪಕ ಉಮಾಪತಿ, “ನಮ್ಮಕಡೆಯಿಂದ ಸಿನಿಮಾ ರೆಡಿ ಇದೆ. ಈಗ ಸೆನ್ಸಾರ್‌ಗೆ ಸಿದ್ಧವಾಗಿದೆ.ಆದರೆ, ಬಿಡುಗಡೆ ದಿನಾಂಕ ಅಂತಿಮವಾಗಿಲ್ಲ.ಸದ್ಯದ ಪರಿಸ್ಥಿತಿಯಲ್ಲಿ ಸಿನಿಮಾವನ್ನು ಇದೇ ದಿನಾಂಕಕ್ಕೆ ಬಿಡುಗಡೆ ಮಾಡುತ್ತೇವೆ ಎಂದು ಹೇಳ್ಳೋದುಕಷ್ಟ. ಜೊತೆಗೆ ಬಿಡುಗಡೆ ಕುರಿತಾಗಿ ನಮ್ಮ ಹೀರೋ ದರ್ಶನ್‌ ಅವರಲ್ಲೂ ಚರ್ಚಿಸಬೇಕಿದೆ. ಅವರ ನಿರ್ಧಾರ ತುಂಬಾ ಮುಖ್ಯ. ಅದಕ್ಕಿಂತ ಹೆಚ್ಚಾಗಿ ನಾವು ಸಿನಿಮಾ ಮಾಡಿರೋದು ಜನರಿಗಾಗಿ. ಜನ ಭಯ ಬಿಟ್ಟು ಚಿತ್ರಮಂದಿರಕ್ಕೆ ಬರುವಂತಾಗಬೇಕು. ಆಗ ಚಿತ್ರ ಬಿಡುಗಡೆ ಮಾಡಿದರೆ ನಾವು ಪಟ್ಟ ಶ್ರಮಕ್ಕೂ ಒಂದು ಸಾರ್ಥಕತೆ ಸಿಗುತ್ತದೆ’ ಎನ್ನುವುದು ಉಮಾಪತಿಯವರ ಮಾತು.

“ರಾಬರ್ಟ್‌’ ಚಿತ್ರ ತೆಲುಗಿನಲ್ಲೂ ಬಿಡುಗಡೆಯಾಗುತ್ತಿದ್ದು, ಅದರ ತಯಾರಿ ಕೂಡಾ ನಡೆಯುತ್ತಿದೆ. ಸಿಂಧೂರ ಲಕ್ಷ್ಮಣ ಬಗ್ಗೆ ಈಗಲೇ ಏನೂ ಹೇಳಲಾರೆ: ನಿರ್ಮಾಪಕ ಉಮಾಪತಿಯವರು ದರ್ಶನ್‌ ಜೊತೆ “ಸಿಂಧೂರ ಲಕ್ಷ್ಮಣ’ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರವನ್ನು ತರುಣ್‌ ಸುಧೀರ್‌ ನಿರ್ದೇಶಿಸಲಿದ್ದಾರೆ.

ಹಾಗಾದರೆ ಈ ಚಿತ್ರ ಯಾವಾಗ ಆರಂಭವಾಗುತ್ತದೆ ಎಂಬ ಕುತೂಹಲ ಸಹಜ. ಈ ಬಗ್ಗೆ ಮಾತನಾಡುವ ಉಮಾಪತಿ, “ಆ ಚಿತ್ರದ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ. ಏಕೆಂದರೆ ದರ್ಶನ್‌ ಅವರು ಇಷ್ಟು ವರ್ಷಗಳಲ್ಲಿ ಸಿನಿಮಾ ಪ್ರಮೋಶನ್‌, ಶೂಟಿಂಗ್‌ ವಿಚಾರದಲ್ಲಿ ಒಂದು ನಿಯಮ ಪಾಲಿಸಿಕೊಂಡು ಬಂದಿದ್ದಾರೆ. ಕೈಯಲ್ಲಿರುವ ಸಿನಿಮಾ ಮುಗಿಸದೇ ಅಥವಾ ಬಿಡುಗಡೆಯಾಗದೇ ಅವರು ಮತ್ತೂಂದು ಸಿನಿಮಾ ಬಗ್ಗೆ ಮಾತನಾಡುವುದಿಲ್ಲ. ಹಾಗಾಗಿ, ಸದ್ಯಕ್ಕೆ “ರಾಬರ್ಟ್‌’ ಕಡೆಗಷ್ಟೇ ನಮ್ಮ ಗಮನ’ ಎನ್ನುತ್ತಾರೆ ಉಮಾಪತಿ.­

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.