ರವಿಶಂಕರ್‌ ಕಂಠದಲ್ಲಿ “ರುಸ್ತುಂ’ ಟೈಟಲ್‌ ಟ್ರ್ಯಾಕ್‌


Team Udayavani, Mar 13, 2019, 6:04 AM IST

rustyum.jpg

ಒಂದೆಡೆ ನಟ ಶಿವರಾಜಕುಮಾರ್‌ ಅಭಿನಯದ “ರುಸ್ತುಂ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಬಾಕಿಯಿರುವ ಡ್ಯುಯೆಟ್‌ ಹಾಡಿನ ಚಿತ್ರೀಕರಣವನ್ನು ಅದ್ಧೂರಿಯಾಗಿ ನಡೆಸುತ್ತಿದೆ. ಈ ಹಾಡಿಗಾಗಿ ಕಂಠೀರವ ಸ್ಟುಡಿಯೋದಲ್ಲಿ ವಿಭಿನ್ನ ಸೆಟ್‌ ನಿರ್ಮಿಸಲಾಗಿದ್ದು, ನೃತ್ಯ ನಿರ್ದೇಶಕ ಇಮ್ರಾನ್‌ ಸರ್ದಾರಿಯಾ ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ.

ಇನ್ನು ಚಿತ್ರದ ಸೆಕೆಂಡ್‌ ಹಾಫ್ನಲ್ಲಿ ಬರುವ ಈ ಹಾಡಿನಲ್ಲಿ ಶಿವಣ್ಣ ಜೊತೆ ನಾಯಕಿ ಶ್ರದ್ಧಾ ಶ್ರೀನಾಥ್‌ ಭರ್ಜರಿಯಾಗಿ ಇಂಡೋ-ವೆಸ್ಟರ್ನ್ ಸ್ಟೈಲ್‌ನಲ್ಲಿ ಸ್ಟೆಫ್ಸ್ ಹಾಕುತ್ತಿದ್ದಾರೆ. ಚಿತ್ರತಂಡದ ಪ್ಲಾನ್‌ ಪ್ರಕಾರ ಎಲ್ಲವೂ ಅಂದುಕೊಂಡಂತೆ ನಡೆದರೆ, ಇದೇ ವಾರಾಂತ್ಯದೊಳಗೆ “ರುಸ್ತುಂ’ ಶೂಟಿಂಗ್‌ ಪೂರ್ಣಗೊಳಿಸಿ ಕುಂಬಳ ಕಾಯಿ ಒಡೆಯುವ ಯೋಚನೆಯಲ್ಲಿದೆ ಚಿತ್ರತಂಡ. ಇವೆಲ್ಲದರ ನಡುವೆ “ರುಸ್ತುಂ’ ಚಿತ್ರದ ಕಡೆಯಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ.

ಅದೇನೆಂದರೆ, “ರುಸ್ತುಂ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಅನ್ನು ಆರ್ಮುಗಂ ಖ್ಯಾತಿಯ ಖಳನಟ ರವಿಶಂಕರ್‌ ಹಾಡಿದ್ದಾರೆ. ಈ ಹಿಂದೆ “ಜಿಗರ್‌ ಥಂಡ’ ಚಿತ್ರದ ಒಂದು ಹಾಡಿಗೆ ಧ್ವನಿ ನೀಡಿದ್ದ ರವಿಶಂಕರ್‌ ಈಗ “ರುಸ್ತುಂ’ ಚಿತ್ರಕ್ಕೆ ಕಂಠದಾನ ಮಾಡಿದ್ದು, ಚಿತ್ರದಲ್ಲಿ ಆರ್ಮುಗಂ ಧ್ವನಿ ಹೇಗಿರಬಹುದು ಎಂಬ ಕುತೂಹಲ ಫ್ಯಾನ್ಸ್‌ ಮನದಲ್ಲಿ ಮನೆ  ಮಾಡಿದೆ. ಇನ್ನು ಈ ಹಾಡಿಗೆ ಅನೂಪ್‌ ಸೀಳಿನ್‌ ಸಂಗೀತ ನಿರ್ದೇಶನವಿದ್ದು, ರವಿಶಂಕರ್‌ ಗಡಸು ಧ್ವನಿಯಲ್ಲಿ ಈ ಕೇಳಲು ಚಿತ್ರದ ಆಡಿಯೋ ಬಿಡುಗಡೆಯಾಗುವವರೆಗೂ ಕಾಯಬೇಕು. 

“ರುಸ್ತುಂ’ ಸಾಹಸ ನಿರ್ದೇಶಕ ರವಿವರ್ಮ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಚಿತ್ರವಾಗಿದ್ದು, ಶಿವಣ್ಣ ಅವರೊಂದಿಗೆ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್‌, ರಚಿತಾ ರಾಮ್‌, ಮಯೂರಿ, ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜಯಣ್ಣ – ಭೋಗೆಂದ್ರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬಿಗ್‌ ಬಜೆಟ್‌ನ ಈ ಚಿತ್ರ ಜೂನ್‌ ವೇಳೆಗೆ ತೆರೆಗೆ ಬರಲಿದೆ ಎನ್ನಲಾಗುತ್ತಿದೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.