ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ
Team Udayavani, Oct 24, 2021, 2:35 PM IST
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸಿಂಪಲ್ ಸುನಿ ಕಾಂಬಿನೇಷನ್ ನ ‘ಸಖತ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ತಮಾಷೆಯಿಂದು ಕೂಡಿದ್ದು ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
ಈಗಾಗಲೇ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ನವೆಂಬರ್ 12ರಂದು ‘ಸಖತ್’ ಚಿತ್ರ ಬಿಡುಗಡೆಯಾಗಲಿದೆ.
ಚಿತ್ರ ನಿರ್ಮಾಣದ ಹೊಣೆ ಹೊತ್ತಿರುವ ಕೆವಿಎನ್ ಪ್ರೊಡಕ್ಷನ್ ಅಕ್ಟೋಬರ್ 24 ರಂದು ಸಿನಿಮಾ ಬಿಡುಗಡೆ ಸಂಬಂಧ ಅಧಿಕೃತ ಮಾಹಿತಿ ನೀಡಲಿದೆ, ಅದೇ ದಿನ ‘ಸಖತ್ ಬಾಲು’ ಟೀಸರ್ ಕೂಡ ರಿಲೀಸ್ ಆಗಲಿದೆ.
ಚಮಕ್ ಸಿನಿಮಾ ನಂತರ ಗಣೇಶ್ ಮತ್ತು ಸಿಂಪಲ್ ಸುನಿ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಿದೆ. ಸಿನಿಮಾ ರಿಯಾಲಿಟಿ ಶೋ ಅಧರಿಸಿದ ಕಥೆಯಾಗಿದೆ. ಗಣೇಶ್ ಸಿನಿಮಾದಲ್ಲಿ ಅಂಧನ ಪಾತ್ರದಲ್ಲಿ ನಟಿಸಿದ್ದಾರೆ.