ದರ್ಶನ್ ಅವರಿಂದ ಹಲ್ಲೆ ಆರೋಪ : ಹೊಟೇಲ್ ಗೆ ಭೇಟಿ ನೀಡಿದ ಪೊಲೀಸ್
Team Udayavani, Jul 16, 2021, 1:00 PM IST
ಮೈಸೂರ : ನಟ ದರ್ಶನ್ ಅವರಿಂದ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಮೈಸೂರಿನ ಸಂದೇಶ ಪ್ರಿನ್ಸ್ ಹೊಟೇಲ್ ಗೆ ಭೇಟಿ ನೀಡಿದ ಪರಿಶೀಲನೆ ನಡೆಸಿದರು.
ಸಂದೇಶ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ. ಈ ಹಿನ್ನೆಲೆ ಇಂದು ( ಜುಲೈ 16) ಉಪ ವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಅಲ್ಲಿನ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆ ಹೊಟೇಲ್ ಮಾಲೀಕ ಸಂದೇಶ್ ನಾಗರಾಜ್ ಅವರಿಂದ ಮಾಹಿತಿ ಕಲೆ ಹಾಕಿದ್ದಾರೆ. ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಗಂಗಾಧರ್ ಅವರನ್ನು ಸಹ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಈಗ ನಟ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿಯೇ ಇದ್ದಾರೆ. ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅವರಿಗೆ ಸಹ ಇಂದು ದರ್ಶನ ಸಿಗಲಿಲ್ಲ. ಇಂದು ಮಧ್ಯಾಹ್ನ ನಂತರ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆಯೇ ಎಂಬ ಕುತೂಹಲ ಕೆರಳಿದೆ.
ಗೃಹ ಸಚಿವರಿಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿನ್ನೆ ಮನವಿ ಮಾಡಿದ ಹಿನ್ನೆಲೆ ಗೃಹ ಸಚಿವರು ವಿಷಯ ಬಗ್ಗೆ ತನಿಖೆ ನಡೆಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು. ಹೀಗಾಗಿ ಹೋಟೆಲ್ಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ