“ಕೆಜಿಎಫ್’ ತಂಡ ಸೇರಿದ ಸಂಜಯ್‌ದತ್‌

ಹೈದರಾಬಾದ್‌ನಲ್ಲಿ ಯಶ್‌ ಜೊತೆಗೆ ಫೈಟ್‌ ಚಿತ್ರೀಕರಣದಲ್ಲಿ ಮುನ್ನಾಭಾಯ್‌ ಭಾಗಿ

Team Udayavani, Sep 26, 2019, 3:04 AM IST

KGF

ಕನ್ನಡದ “ಕೆಜಿಎಫ್-2′ ಚಿತ್ರದಲ್ಲಿ ಬಾಲಿವುಡ್‌ ನಟ ಸಂಜಯ್‌ದತ್‌ ನಟಿಸಲಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತು. ಆದರೆ, ಅವರು ಯಾವಾಗ “ಕೆಜಿಎಫ್’ ಚಿತ್ರ ತಂಡವನ್ನು ಸೇರಿಕೊಳ್ಳುತ್ತಾರೆ, ಅವರ ಭಾಗದ ಚಿತ್ರೀಕರಣ ಯಾವಾಗ ಅನ್ನೋದು ಕುತೂಹಲದ ಪ್ರಶ್ನೆಯಾಗಿತ್ತು. ಈಗ ಸಂಜಯ್‌ದತ್‌ ಅಧಿಕೃತವಾಗಿ “ಕೆಜಿಎಫ್-2′ ಚಿತ್ರೀಕರಣದ ಸೆಟ್‌ಗೆ ಎಂಟ್ರಿಯಾಗಿದ್ದಾರೆ. ಹೌದು, ಈಗಾಗಲೇ “ಕೆಜಿಎಫ್ -2′ ಚಿತ್ರದ ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ.

ಯಶ್‌ ಅದಾಗಲೇ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಈಗ ಸಂಜಯ್‌ದತ್‌ ಕೂಡ ಅವರೊಂದಿಗೆ ಸೇರಿಕೊಂಡಿದ್ದಾರೆ. ಅಂದಹಾಗೆ, ಸೆ.22 ರಿಂದಲೇ ಕಡಪ ಸಮೀಪ “ಕೆಜಿಎಫ್ -2′ ಚಿತ್ರೀಕರಣ ನಡೆಯಬೇಕಿತ್ತು. ಆದರೆ, ಮಳೆ ಸುರಿದ ಕಾರಣ, ಅಲ್ಲಿಂದ ಚಿತ್ರತಂಡ ಹೈದರಾಬಾದ್‌ನ ರಾಮೋಜಿಫಿಲ್ಮ್ ಸಿಟಿಗೆ ಶಿಫ್ಟ್ ಆಗಿದೆ. ಬುಧವಾರದಿಂದ ಸಂಜಯ್‌ದತ್‌ ಅವರ ಭಾಗದ ಚಿತ್ರೀಕರಣ ಶುರುವಾಗಿದೆ.

ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ “ಕೆಜಿಎಫ್ -2′ ಚಿತ್ರಕ್ಕೆ ದೊಡ್ಡ ಸೆಟ್‌ ಹಾಕಲಾಗಿದಲ್ಲದೆ, ಇದು ದೊಡ್ಡ ಶೆಡ್ನೂಲ್‌ ಆಗಿದೆ. ಚಿತ್ರದ ಪ್ರಮುಖ ಚಿತ್ರೀಕರಣದ ಭಾಗ ಇದೇ ಆಗಿರುವುದರಿಂದ ಸುಮಾರು 22 ದಿನಗಳ ಕಾಲ “ಕೆಜಿಎಫ್-2′ ಚಿತ್ರದ ಚಿತ್ರೀಕರಣದಲ್ಲಿ ಸಂಜಯ್‌ದತ್‌ ಹಾಗು ಯಶ್‌ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಯಶ್‌ ಹಾಗು ಸಂಜಯ್‌ದತ್‌ ನಡುವಿನ ಫೈಟ್ಸ್‌ ಕೂಡ ಇದೇ ಶೆಡ್ನೂಲ್‌ನಲ್ಲಿ ಚಿತ್ರೀಕರಣಗೊಳ್ಳಲಿದೆ.

ಈಗಾಗಲೇ ಸಂಜಯ್‌ದತ್‌ ಜೊತೆಗೆ ಹಿಂದೆ ಮುಂದೆ ನಿಲ್ಲಿಸಲು ಸುಮಾರು ಆರು ಅಡಿ ಎತ್ತರದ ಒಂದಷ್ಟು ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಬುಧವಾರ ಸೆಟ್‌ಗೆ ಹೋಗಿರು ಸಂಜಯ್‌ದತ್‌ ಜೊತೆಗೆ ನಿರ್ದೇಶಕ ಪ್ರಶಾಂತ್‌ ನೀಲ್‌ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್‌ ಗೌಡ ಫೋಟೋವೊಣದನ್ನು ತೆಗೆಸಿಕೊಂಡಿರುವ ಫೋಟೋ ಸದ್ಯ ಸಾಮಾಜಿಕ ತಾಣದಲ್ಲಿ ಜೋರು ಸುದ್ದಿ ಮಾಡುತ್ತಿದೆ. ಬಾಲಿವುಡ್‌ನ‌ ಮುನ್ನಾಭಾಯ್‌ ಸಂಜಯ್‌ದತ್‌ ಅವರು ಈ ಚಿತ್ರದಲ್ಲಿ ಅಧೀರನ ಪಾತ್ರ ಮಾಡುತ್ತಿದ್ದಾರೆ.

ಅದೊಂದು ಮೇಜರ್‌ ಪಾತ್ರವಾಗಿದ್ದು, ಸಾಕಷ್ಟು ಭಯಾನಕವಾಗಿರಲಿದೆ ಎಂದು ಈ ಹಿಂದೆಯೇ ಸಂಜಯ್‌ದತ್‌ ಹೇಳಿದ್ದರು. ಈಗ ಎಲ್ಲರಿಗೂ ಆ ಅಧೀರನ ಪಾತ್ರ ಹೇಗಿದೆ ಎಂಬ ಕುತೂಹಲವಂತೂ ಇದೆ. ಅದಕ್ಕಾಗಿ ಸಿನಿಮಾ ಬರುವವರೆಗೂ ಕಾಯಲೇಬೇಕು. ಅಂದಹಾಗೆ, ಇದೇ ಮೊದಲ ಸಲ ಸಂಜಯ್‌ದತ್‌ ಅವರು ಕನ್ನಡಕ್ಕೆ ಎಂಟ್ರಿಕೊಟ್ಟಿದ್ದಾರೆ ಎಂಬುದು ಇನ್ನೊಂದು ವಿಶೇಷ. ಹಾಗಾಗಿ, ಸಹಜವಾಗಿಯೇ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.