KGF 2ನಲ್ಲಿ “ಅಧೀರ” ಯಾರು ಎಂಬ ಕುತೂಹಲಕ್ಕೆ ತೆರೆ, ಫಸ್ಟ್ ಲುಕ್ ರಿಲೀಸ್!
Team Udayavani, Jul 29, 2019, 11:58 AM IST
ಬೆಂಗಳೂರು:2018ರಲ್ಲಿ ದೇಶಾದ್ಯಂತ ಭರ್ಜರಿ ಸದ್ದು ಮಾಡಿದ್ದ ಕೆಜಿಎಫ್ ಸಿನಿಮಾ ತಂಡ ಸೋಮವಾರ ಕೆಜಿಎಫ್ 2ನ ಅಧೀರ ಕ್ಯಾರೆಕ್ಟರ್ ನ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದೆ.
ಕೆಜಿಎಫ್ ತಂಡ ಇಂದು ಬೆಳಗ್ಗೆ ಕೆಜಿಎಫ್ 2ರ ಅಧೀರ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಬಾಲಿವುಡ್ ನ ಸಂಜಯ್ ದತ್ ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಕೆಜಿಎಫ್ ಚಿತ್ರದಲ್ಲಿ ಯಶ್ ಮುಖ್ಯಭೂಮಿಕೆಯಲ್ಲಿದ್ದು, ಇದೀಗ ಕೆಜಿಎಫ್ 2ರಲ್ಲಿ ಸಂಜಯ್ ದತ್ ಪಾತ್ರ ಮಾಡೋದು ಪೋಸ್ಟರ್ ನಿಂದ ಖಚಿತವಾಗಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಮೊದಲ ಭಾಗ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಐದು ಭಾಷೆಗಳಲ್ಲಿ ಭರ್ಜರಿ ಯಶಸ್ವಿ ಕಂಡಿತ್ತು. ಗಲ್ಲಾ ಪೆಟ್ಟಿಗೆಯಲ್ಲಿ ಕೆಜಿಎಫ್ ಕೋಟ್ಯಂತರ ರೂಪಾಯಿ ಬಾಚಿತ್ತು.
ಅಧೀರ ಪಾತ್ರದ ಸಂಜಯ್ ದತ್ ಪೋಸ್ಟರ್ ನಲ್ಲಿ ನಿಗೂಢ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಜಯ್ ದತ್ ಗೆ ಇಂದು 60ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಕೆಜಿಎಫ್ ತಂಡ ಅಧೀರ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್