ಉಪೇಂದ್ರ ಚಿತ್ರಕ್ಕೆ ಸಾನ್ವಿ ಶ್ರೀವಾತ್ಸವ್ ನಾಯಕಿ
Team Udayavani, Jul 27, 2018, 10:35 AM IST
ಉಪೇಂದ್ರ ಮತ್ತು ರವಿಚಂದ್ರನ್ ಅಭಿನಯದಲ್ಲಿ ಹಿರಿಯ ನಿರ್ದೇಶಕ ಚಿತ್ರವನ್ನು ನಿರ್ದೇಶಿಸುತ್ತಿರುವುದು ಗೊತ್ತಿರದ ವಿಷಯವೇ. ಆಗಸ್ಟ್ 20ರಂದು ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ.
ಈ ಮಧ್ಯೆ ಚಿತ್ರಕ್ಕೆ ಸಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಚಿತ್ರವನ್ನು ಕನಕಪುರ ಶ್ರೀನಿವಾಸ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ನಿಮಿಕಾ ರತ್ನಾಕರ್ ಈಗಾಗಲೇ ಆಯ್ಕೆಯಾಗಿದ್ದಾರೆ.
ಇನ್ನು ಸಾನ್ವಿ ಶ್ರೀವಾತ್ಸವ್ ಸಹ ನಾಯಕಿಯಾಗಿ ಕಾಣಿಸಿಕೊಳ್ಳುವುದು ಪಕ್ಕಾ ಆಗಿದೆ. ಇಬ್ಬರೂ ಉಪೇಂದ್ರ ಅವರಿಗೆ ನಾಯಕಿಯರಾಗಿ ನಟಿಸಲಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ, ರವಿಕುಮಾರ್ ಛಾಯಾಗ್ರಹಣ ಮತ್ತು ಶ್ರೀಕಾಂತ್ ಅವರ ಸಂಕಲನವಿದೆ.