Sapta Sagaradaache Yello: ರಕ್ಷಿತ್‌ ಶೆಟ್ಟಿ ಹೋರಾಟ ಶುರು


Team Udayavani, Jul 21, 2023, 11:29 AM IST

sapta sagaradaache ello new song

ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ.. ಸೈಡ್‌ -ಎ ಹಾಗೂ ಸೈಡ್‌-ಬಿ ಎಂದು ಈ ಎರಡು ಭಾಗಗಳನ್ನು ವಿಂಗಡಣೆ ಮಾಡಲಾಗಿದ್ದು, “ಸೈಡ್‌-ಎ’ ಸೆಪ್ಟೆಂಬರ್‌ 1ರಂದು ತೆರೆಕಂಡರೆ, “ಸೈಡ್‌-ಬಿ’ ಅಕ್ಟೋಬರ್‌ 20ರಂದು ತೆರೆಗೆ ಬರಲಿದೆ.

ಈಗ ಮೊದಲ ಹಂತವಾಗಿ “”ಸಪ್ತಸಾಗರದಾಚೆ ಎಲ್ಲೋ- ಸೈಡ್‌-ಎ’ನಿಂದ ಮೊದಲ ಹಾಡು ಬಿಡುಗಡೆಯಾಗಿದೆ. “ಹೋರಾಟ ಹೋರಾಟ ಮುಗಿಯೋವರೆಗೂ ಅಲೆದಾಟ, ಅಂತ್ಯನೇ ಇರದಂತಹ ದೂರ ತೀರದ ಹುಡುಕಾಟ…’ ಎಂಬ ಹಾಡು ಗುರುವಾರ ಬೆಳಗ್ಗೆ ಪರಂವ ಮ್ಯೂಸಿಕ್‌ ಯೂಟ್ಯೂಬ್‌ನಲ್ಲಿ ಬಿಡಗಡೆಯಾಗಿದೆ. ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ ನಿರ್ದೇಶನವಿದೆ.

ಅಂದಹಾಗೆ, ಈ ಚಿತ್ರವನ್ನು ಸ್ವತಃ ರಕ್ಷಿತ್‌ ಶೆಟ್ಟಿ ನಿರ್ಮಿಸುತ್ತಿದ್ದು, ಹೇಮಂತ್‌ ರಾವ್‌ ಈ ಸಿನಿಮಾದ ನಿರ್ದೇಶಕರು. ಈಗಾಗಲೇ ಹೇಮಂತ್‌ ರಾವ್‌ ನಿರ್ದೇಶನದ “ಗೋಧಿ ಬಣ್ಣ ಸಾಧಾರಾಣ ಮೈ ಕಟ್ಟು’ ಸಿನಿಮಾದಲ್ಲಿ ರಕ್ಷಿತ್‌ ನಟಿಸಿದ್ದರು. ಈಗ ಮತ್ತೂಮ್ಮೆ ಈ ಜೋಡಿ “ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಮೂಲಕ ಒಂದಾಗಿದೆ.

ಅಂದಹಾಗೆ, ಇದು ಔಟ್‌ ಅಂಡ್‌ ಔಟ್‌ ಲವ್‌ಸ್ಟೋರಿಯಾಗಿದ್ದು, ಈ ಚಿತ್ರದಲ್ಲಿ ರಕ್ಷಿತ್‌ ಎರಡು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಒಮ್ಮೆ ತೂಕ ಇಳಿಸಿಕೊಂಡ ರಕ್ಷಿತ್‌ ಮತ್ತೆ ತೂಕ ಹೆಚ್ಚಿಸಿಕೊಂಡಿದ್ದಾರೆ. ಈಗಾಗಲೇ ತಮ್ಮ ವಿಭಿನ್ನ ಅಭಿರುಚಿಯ ಮೂಲಕ ಕನ್ನಡಕ್ಕೆ ಹೊಸ ಬಗೆಯ ಸಿನಿಮಾಗಳನ್ನು ನೀಡಿರುವ ರಕ್ಷಿತ್‌ ಶೆಟ್ಟಿ, ಈಗ “ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಚಿತ್ರದಲ್ಲಿ ರುಕ್ಮಿಣಿ ವಸಂತ್‌ ನಾಯಕಿಯಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.