Kannda cinema; ‘ಸತ್ಯಂ’ ತಂದ ಸಂತೋಷ; ಟೀಸರ್ ಗೆ ಒಂದು ಮಿಲಿಯನ್ ಹಿಟ್ಸ್
Team Udayavani, Nov 27, 2023, 6:23 PM IST
ಕನ್ನಡ ಮತ್ತು ತೆಲುಗಿನಲ್ಲಿ ನಿರ್ಮಾಣವಾಗಿರುವ “ಸತ್ಯಂ’ ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈಗ ಟೀಸರ್ ಒಂದು ಮಿಲಿಯನ್ ಹಿಟ್ಸ್ ದಾಖಲಿಸುವ ಮೂಲಕ ಚಿತ್ರತಂಡ ಖುಷಿಗೆ ಕಾರಣವಾಗಿದೆ. ತಾತ ಮೊಮ್ಮಗನ ಸುತ್ತ ನಡೆಯುವ ಫ್ಯಾಮಿಲಿ ಕಂ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಸತ್ಯಂ’ ಸಿನಿಮಾವನ್ನು “ಶ್ರೀಮಾತಾ ಕ್ರಿಯೇಶನ್ಸ್’ ಬ್ಯಾನರಿನಲ್ಲಿ ಮಹಂತೇಶ್ ವಿ. ಕೆ. ನಿರ್ಮಿಸಿದ್ದು, ಅಶೋಕ್ ಕಡಬ ನಿರ್ದೇಶನ ಮಾಡಿದ್ದಾರೆ. ಸಂತೋಷ್ ಈ ಚಿತ್ರದ ನಾಯಕ. ರಂಜಿನಿ ರಾಘವನ್ ನಾಯಕಿ.
“ನಾನು ಈ ಹಿಂದೆ ಮಾಡಿದ “ಕೆಂಪ’, “ಕರಿಯ-2′, “ಗಣಪ’ ಸಿನಿಮಾಗಳಿಗಿಂತ ಸಂಪೂರ್ಣ ವಿಭಿನ್ನವಾಗಿ “ಸತ್ಯಂ’ ಸಿನಿಮಾ ಮೂಡಿಬಂದಿದೆ. ನನ್ನ ತಂದೆ ಆರಂಭದಲ್ಲಿ ಈ ಕಥೆಯನ್ನು ಒಪ್ಪಿ, ಇದೊಂದು ಒಳ್ಳೆಯ ಸಿನಿಮಾವಾಗುತ್ತದೆ ಎಂದಿದ್ದರು. ಈ ಸಿನಿಮಾದಲ್ಲಿ ಸತ್ಯ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಎಲ್ಲ ಥರದ ಎಂಟರ್ಟೈನ್ಮೆಂಟ್ ಅಂಶಗಳಿರುವ ಈ ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ’ ಎನ್ನುವುದು ನಾಯಕ ಸಂತೋಷ್ ಮಾತು.
“ಇದೊಂದು ಫ್ಯಾಮಿಲಿ ಕಂಟೆಂಟ್ ಇರುವಂಥ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾ. ಪಂಜುರ್ಲಿ ದೈವ ಆರಾಧಿಸುವ ರಾಜ ಮನೆತನದ ಕುಟುಂಬದಲ್ಲಿ ಒಂದು ಕಳಂಕ ನಡೆದಿರುತ್ತದೆ. ಅದರಿಂದ ಸಾವು ನೋವುಗಳು ಆಗಿದ್ದು, ಅದರಲ್ಲಿ ಒಂದು ವಂಶದ ಕುಡಿ ಸುಮಾರು 40 ವರ್ಷದ ನಂತರ ಭೂತ ಕೋಲದ ಪೂಜೆಗೆಂದು ಆ ಊರಿಗೆ ಬಂದಾಗ ನಡೆಯುವ ಕಥೆಯಿದು. ಮೂರು ಶೇಡ್ಗಳು ಇರುವ ಈ ಚಿತ್ರಕ್ಕೆ ದೊಡ್ಡ ಮಟ್ಟದ ಸೆಟ್ಗಳನ್ನು ಹಾಕಿದ್ದೆವು. 2019ರಲ್ಲೇ ಈ ಕಥೆ ಮಾಡಿಕೊಂಡಿದ್ದರೂ, ಕೋವಿಡ್ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಯಿತು’ ಎಂಬುದು ನಿರ್ದೇಶಕ ಅಶೋಕ್ ಕಡಬ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…