
ಎಲೆಕ್ಟ್ರಿಷಿಯನ್ ಆದ ಶರಣ್
Team Udayavani, Feb 9, 2023, 2:17 PM IST

ನಟ ಶರಣ್ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿ ದ್ದಾರೆ. “ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ವಿಭಿನ್ನವಾಗಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ.
ಸೋಮವಾರ (ಫೆ.06) ಶರಣ್ ಹುಟ್ಟುಹಬ್ಬ ಪ್ರಯುಕ್ತ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.
“ಶ್ರೀಧರ ಕೃಪ ಕಂಬೈನ್ಸ್’ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ “ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ.
ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಅರ್ಜುನ್ ಜನ್ಯಾ ಸಂಗೀತ ನಿರ್ದೇಶನ, ಅದ್ವೆ„ತ್ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
