ಅಪ್ಪು ಅಮರಶ್ರೀ : ಪುನೀತ್‌ ‘ಪದ್ಮಶ್ರೀ’ ಬಗ್ಗೆ ಶಿವಣ್ಣ ಮಾತು

Team Udayavani, Nov 9, 2021, 8:43 AM IST

jhjkjhgfds

“ಅಮರಶ್ರೀಗೆ ಪದ್ಮಶ್ರೀನಾ? – ಶಿವರಾಜ್‌ಕುಮಾರ್‌ ಹೀಗೆ ಹೇಳಿ ಒಂದು ಕ್ಷಣ ಮೌನವಾದರು. ತಮ್ಮನ ಅಗಲಿಕೆಯ ನೋವು ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಎಷ್ಟೇ ನೋವಿದ್ದರೂ ಅಣ್ಣನಾಗಿ ತಮ್ಮನ ಕಾರ್ಯಗಳನ್ನು ಮುಂದೆ ನಿಂತು ಮಾಡುವ ಅನಿವಾರ್ಯತೆ. ಇದೇ ಸಂದರ್ಭದಲ್ಲಿ ಅಭಿಮಾನಿಗಳಿಂದ ಕೇಳಿಬರುತ್ತಿರುವ ಒತ್ತಾಯವೆಂದರೆ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪದ್ಮಶ್ರೀ ನೀಡಬೇಕೆಂಬುದು.

ಈ ಬಗ್ಗೆ ಮಾತನಾಡುವ ಶಿವರಾಜ್‌ಕುಮಾರ್‌, “ನನ್ನ ತಮ್ಮ ಅಮರಶ್ರೀ. ಎಲ್ಲರ ಹೃದಯದಲ್ಲಿ ಪ್ರೀತಿಯಿಂದ ಇರುತ್ತಾನೆ. ಅದೇ ದೊಡ್ಡ ಪ್ರಶಸ್ತಿ. ಅದೇ ಪದ್ಮಶ್ರೀಗಿಂತ ದೊಡ್ಡದು’ ಎನ್ನುವುದು ಶಿವರಾಜ್‌ ಕುಮಾರ್‌ ಮಾತು. ಪುನೀತ್‌ ರಾಜ್‌ ಕುಮಾರ್‌ ಅವರ 11ನೇ ದಿನದ ಕಾರ್ಯದ ಬಗ್ಗೆ ಮಾತನಾಡಿದ ಶಿವಣ್ಣ, “ನಾವು ಇದನ್ನೆಲ್ಲಾ ಪುನೀತ್‌ಗೆ ಮಾಡುತ್ತಿದ್ದೇವಾ ಎಂದು ಫೀಲ್‌ ಆಗುತ್ತದೆ. ಆದರೆ, ವಿಧಿ ವಿಧಾನ ಮಾಡಲೇಬೇಕು. ಪುನೀತ್‌ ಇಲ್ಲ ಎಂಬ ನೋವು ನನಗೆ ಸದಾ ಕಾಡುತ್ತಿರುತ್ತದೆ.

ತಮ್ಮ ಅನ್ನೋದಕ್ಕಿಂತ ಮಗನೇ ಹೋದಂತಹ ನೋವು ಆಗುತ್ತಿದೆ. ಆ ನೋವಿನಿಂದ ಹೊರಬರಲು ಸಾಧ್ಯವೇ ಇಲ್ಲ. ಚಿಕ್ಕ ವಯಸ್ಸಿನಿಂದಲೂ ನಾವು ಅವನನ್ನು ಆರಾಧಿಸಿದ್ದೇವೆ. ಅವನ ಬೆಳವಣಿಗೆ ನೋಡಿ ಖುಷಿಪಟ್ಟಿದ್ದೇವೆ. ನಮಗೆ ಇಷ್ಟೊಂದು ನೋವಾಗಿದೆ ಎಂದ ಮೇಲೆ ಅವನನ್ನು ಪ್ರೀತಿಸುವ ಅಭಿಮಾನಿಗಳಿಗೆ ಎಷ್ಟು ನೋವಾಗಬೇಡ ಹೇಳಿ. ಹಾಗಂತ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬರಬಾರದು.

ಅವನು ಸಂತೋಷವಾಗಿ ಇರಬೇಕೆಂದರೆ ಅಭಿಮಾನಿ ಗಳು ಈ ರೀತಿ ನಡೆದುಕೊಳ್ಳಬಾರದು. ಅಪ್ಪು ಹೆಸರನ್ನು ಇನ್ನೂ ಅಮರವಾಗಿಸಲು ಪ್ರಯತ್ನಿಸಿ. ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಅಪ್ಪು ಮಾಡುತ್ತಿದ್ದ ಕಾರ್ಯಗಳನ್ನು ಮುಂದುವರಿಸಿ’ ಎಂದು ಅಭಿಮಾನಿಗಳಿಗೆ ಕಿವಿಮಾತು ಹೇಳಿದರು. ಇದೇ ವೇಳೆ ಮಾತನಾಡಿದ ಶಿವಣ್ಣ, ಪುನೀತ್‌ಗೆ ಜನ ತೋರಿಸುತ್ತಿರುವ ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ.

ಇದು ಅವನ ವ್ಯಕ್ತಿತ್ವವನ್ನು ಕಟ್ಟಿಕೊಡುತ್ತದೆ. ನಾವು ಮೂವರು ಸಹೋದರರು ಒಟ್ಟಿಗೆ ಸಿನಿಮಾ ಮಾಡುವ ಕನಸಿತ್ತು. ಇತ್ತೀಚೆಗೆ ನಡೆದ “ಸಲಗ’ ಇವೆಂಟ್‌ ನಲ್ಲೂ ಅಣ್ಣನ ಸಿನಿಮಾ ನಿರ್ದೇಶನ ಮಾಡಬೇಕೆಂಬ ಆಸೆ ತೋಡಿಕೊಂಡಿದ್ದ ಅಪ್ಪು. ಆದರೆ, ಅದು ಈಡೇರಲೇ ಇಲ್ಲ’ ಎಂದು ಭಾವುಕರಾದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.