
ಶಿವಣ್ಣ-ಸುದೀಪ್ ಅಭಿನಯದ “ದಿ ವಿಲನ್’ ಸಾಂಗ್ ರಿಲೀಸ್: Watch
Team Udayavani, Jul 14, 2018, 3:38 PM IST

ಪ್ರೇಮ್ ನಿರ್ದೇಶನದ ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅಭಿನಯದ “ದಿ ವಿಲನ್’ ಚಿತ್ರದ “ಮಚ್ಚು ಗಿಚ್ಚು ಹಿಡಿದವನಲ್ಲ, ಆದ್ರೂ ಹವಾ ಇಟ್ಟವನಲ್ಲ’ ಹಾಡಿನ ಲಿರಿಕಲ್ ವಿಡಿಯೊ ಸಾಂಗ್ ಶನಿವಾರ ಸಾಮಾಜಿಕ ಜಾಲತಾಣ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು, ಸಕತ್ ಹವಾ ಕ್ರಿಯೇಟ್ ಮಾಡಿದೆ.
ಪ್ರೇಮ್ ಸಾಹಿತ್ಯವಿರುವ ಈ ಹಾಡಿಗೆ ಶಂಕರ್ ಮಹಾದೇವನ್ ಮತ್ತು ಬಸ್ರು ಧ್ವನಿ ನೀಡಿದ್ದರೆ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಅಲ್ಲದೇ ಬಿಡುಗಡೆಯಾದ ಕೆಲ ಗಂಟೆಗಳಲ್ಲೇ 2.89 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಲಿರಿಕಲ್‌ನಲ್ಲಿ ಹಾಡಿನ ಸಾಹಿತ್ಯದ ಜೊತೆಗೆ ಸಿನಿಮಾ ಚಿತ್ರಿಕರಣದ ದೃಶ್ಯಗಳನ್ನು ಕಾಣಬಹುದಾಗಿದ್ದು, ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿಮಾನಿಗಳು ಈ ಹಾಡಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಚಿತ್ರವನ್ನು ಸಿ.ಆರ್. ಮನೋಹರ್ ತಮ್ಮ ತನ್ವಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಗಿರೀಶ್ ಗೌಡ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಶಿವರಾಜಕುಮಾರ್, ಸುದೀಪ್, ಶ್ರುತಿ ಹರಿಹರನ್, ಆ್ಯಮಿ ಜಾಕ್ಸನ್, ಮಿಥುನ್ ಚಕ್ರವರ್ತಿ, ಶ್ರೀಕಾಂತ್, ತಿಲಕ್ ಮುಂತಾದವರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
