ಟೈಗರ್ ನಾಗೇಶ್ವರ ರಾವ್ ಸಿನಿಮಾಕ್ಕೆ ಶಿವಣ್ಣ ಸಾಥ್
Team Udayavani, May 20, 2023, 4:37 PM IST
ತೆಲುಗು ನಟ ರವಿತೇಜ ಅಭಿನಯಿಸುತ್ತಿರುವ ಮೊದಲ ಪ್ಯಾನ್ ಇಂಡಿಯಾ ಸಿನಿಮಾ “ಟೈಗರ್ ನಾಗೇಶ್ವರ ರಾವ್’ ತೆರೆಗೆ ಬರಲು ಭರದ ಸಿದ್ಧತೆ ನಡೆಸುತ್ತಿದೆ. ಸದ್ಯ “ಟೈಗರ್ ನಾಗೇಶ್ವರ ರಾವ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಮೇ. 24ರಂದು ಸಿನಿಮಾದ ಫಸ್ಟ್ಲುಕ್ ರಿಲೀಸ್ ಮಾಡಲು ಪ್ಲಾನ್ ಹಾಕಿಕೊಂಡಿದೆ.
ಇನ್ನೊಂದು ವಿಶೇಷವೆಂದರೆ, “ಟೈಗರ್ ನಾಗೇಶ್ವರ ರಾವ್’ ಸಿನಿಮಾ ಕನ್ನಡದಲ್ಲೂ ತೆರೆಗೆ ಬರುತ್ತಿದ್ದು, ಈ ಸಿನಿಮಾದ ಕನ್ನಡ ಝಲಕ್ಗೆ ನಟ ಶಿವರಾಜಕುಮಾರ್ ಧ್ವನಿ ನೀಡಿದ್ದಾರೆ.
ಅಂದಹಾಗೆ, 1970ರ ಕಾಲಘಟ್ಟದಲ್ಲಿ ಆಂಧ್ರಪ್ರದೇಶದ ಸ್ಟುವರ್ಟ್ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ರವಿತೇಜ ಅವರಿಗೆ ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಜೋಡಿಯಾಗಿದ್ದಾರೆ.
ಇದೇ ಅಕ್ಟೋಬರ್ ವೇಳೆಗೆ ಈ ಸಿನಿಮಾ ತೆರೆಗೆ ಬರುತ್ತಿದ್ದು, “ಟೈಗರ್ ನಾಗೇಶ್ವರ ರಾವ್’ ಸಿನಿಮಾದ ಕನ್ನಡ ಅವರತರಣಿಕೆಯ ತುಣುಕು ಹೀಗಿರಲಿದೆ ಅನ್ನೋದು ಮುಂದಿನವಾರದ ಹೊತ್ತಿಗೆ ಗೊತ್ತಾಗಲಿದೆ.
ಇನ್ನು ಶಿವರಾಜಕುಮಾರ್ ಅಭಿನಯದ “ವಜ್ರಕಾಯ’ ಸಿನಿಮಾದ ಹಾಡಿನಲ್ಲಿ ರವಿತೇಜ ಶಿವಣ್ಣನ ಜೊತೆ ಹೆಜ್ಜೆ ಹಾಕಿದ್ದರು. ಇದೀಗ ರವಿತೇಜ ಸಿನಿಮಾಕ್ಕೆ ಶಿವಣ್ಣ ಧ್ವನಿಯಾಗುವ ಮೂಲಕ ಸಾಥ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ