“ದ್ರೋಣ’ನಾಗಿ ಶಿವಣ್ಣನ ದರ್ಶನ
ಶಿವಣ್ಣ ಅಭಿನಯದ ಈ ವರ್ಷದ ಮೊದಲ ಚಿತ್ರ ಮಾ. 6ಕ್ಕೆ ತೆರೆಗೆ
Team Udayavani, Feb 25, 2020, 7:04 AM IST
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ ಈ ವರ್ಷದ ಮೊದಲ ಚಿತ್ರ “ದ್ರೋಣ’ದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಸದ್ಯ ತನ್ನ ಟ್ರೇಲರ್ ಮತ್ತು ಹಾಡುಗಳ ಮೂಲಕ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ “ದ್ರೋಣ’ ಇದೇ ಮಾರ್ಚ್ 6ರಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಇಲ್ಲಿಯವರೆಗೆ ಅನೇಕ ಪಾತ್ರಗಳಿಗೆ ಜೀವ ತುಂಬಿರುವ ಶಿವಣ್ಣ “ದ್ರೋಣ’ ಚಿತ್ರದಲ್ಲಿ ಶಾಲಾ ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದಲ್ಲಿ ಶಿವಣ್ಣ ಎರಡು ವಿಭಿನ್ನ ಶೇಡ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮಾಸ್ ಮತ್ತು ಕ್ಲಾಸ್ ಆಡಿಯನ್ಸ್ಗೆ “ದ್ರೋಣ’ಇಷ್ಟವಾಗಲಿದ್ದಾನೆ ಅನ್ನೋದು ಚಿತ್ರತಂಡದ ಮಾತು. ಇನ್ನು ಸೆಂಟಿಮೆಂಟ್, ಲವ್ ಕಂ ಆ್ಯಕ್ಷನ್ ಕಥಾಹಂದರ ಹೊಂದಿರುವ “ದ್ರೋಣ’ ಚಿತ್ರಕ್ಕೆ ಪ್ರಮೋದ್ ಚಕ್ರವರ್ತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಭಾರತದ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಇನಿಯಾ ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಜೋಡಿಯಾಗಿದ್ದು, ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.
ಉಳಿದಂತೆ, ಸ್ವಾತಿ ಶರ್ಮಾ, ವಿಜಯ್ ಕಿರಣ್, ರಾಮಸ್ವಾಮಿ, ಬಾಬು ಹಿರಣ್ಣಯ್ಯ, ರಂಗಾಯಣ ರಘು, ರವಿಕಿಶನ್, ಸಾಧುಕೋಕಿಲ, ನಾರಾಯಣ ಸ್ವಾಮಿ, ಲಾವಣ್ಯ, ಶಕ್ತಿ, ಲಿಖೀತ್ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ “ಆಯುಷ್ಮಾನ್ ಭವ’ ಚಿತ್ರದ ನಂತರ ಶಿವಣ್ಣ ಅವರನ್ನು ತೆರೆಮೇಲೆ ನೋಡಲಿಲ್ಲ ಅಂದುಕೊಳ್ಳುತ್ತಿದ್ದ ಅಭಿಮಾನಿಗಳ ಮುಂದೆ ಶಿವಣ್ಣ “ದ್ರೋಣ’ನಾಗಿ ದರ್ಶನ ಕೊಡಲು ರೆಡಿಯಾಗುತ್ತಿದ್ದು, ಶಿವಣ್ಣನ ಹೊಸ ಅವತಾರ ಅಭಿಮಾನಿಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋ ಕುತೂಹಲಕ್ಕೆ ಮಾರ್ಚ್ ಮೊದಲ ವಾರದಲ್ಲಿ ತೆರೆ ಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!