ಶಿವಣ್ಣ ಬರ್ತ್ಡೇ: ಘೋಸ್ಟ್ ಸ್ಪೆಷಲ್ ಗಿಫ್ಟ್
Team Udayavani, Jul 12, 2023, 8:45 AM IST
ನಟ ಶಿವರಾಜಕುಮಾರ್ ಅಭಿನಯದ “ಘೋಸ್ಟ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಸದ್ಯ ನಿಧಾನವಾಗಿ “ಘೋಸ್ಟ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇಂದು ಶಿವಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಉಡುಗೊರೆಯೊಂದನ್ನು ಕೊಡುವ ತಯಾರಿಯಲ್ಲಿದೆ.
ಹೌದು, ಇಂದು ನಟ ಶಿವರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುಯತ್ತಿದ್ದು, ಈ ಸಂದರ್ಭದಲ್ಲಿ “ಘೋಸ್ಟ್’ ಚಿತ್ರತಂಡ ಕೂಡ ಸಿನಿಮಾದ “ಬಿಗ್ ಡ್ಯಾಡಿ…’ ವಿಡಿಯೋವನ್ನು ಬಿಡುಗಡೆ ಮಾಡುತ್ತಿದೆ. ಗಾಂಧಿನಗರದ ಕೆ. ಜಿ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ನಟ ಶಿವರಾಜಕುಮಾರ್ ಮತ್ತು “ಘೋಸ್ಟ್’ ಚಿತ್ರತಂಡದ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಲಿದ್ದು, ಅಭಿಮಾನಿಗಳ ಸಮ್ಮುಖದಲ್ಲಿ “ಘೋಸ್ಟ್’ ಸಿನಿಮಾದ “ಬಿಗ್ ಡ್ಯಾಡಿ…’ ವಿಡಿಯೋ ಬಿಡುಗಡೆಯಾಗಲಿದೆ.
ಈಗಾಗಲೇ ಈ ಕುರಿತು ಜುಲೈ 12 “ಬಿ. ಡಿ’ (ಬಿಗ್ ಡ್ಯಾಡಿ) ಎಂಬ ಪೋಸ್ಟರ್ ಸಹ ಸೋಶಿಯಲ್ ಮೀಡಿಯಾಗಳಲ್ಲಿ ಬಿಡುಗಡೆಯಾಗಿದ್ದು, ವೈರಲ್ ಆಗುತ್ತಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ “ಬಿಗ್ ಡ್ಯಾಡಿ…’ ವಿಡಿಯೋದಲ್ಲಿ ಏನಿರಬಹುದು ಎಂಬ ಅಭಿಮಾನಿಗಳ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.
ಅಂದಹಾಗೆ, “ಘೋಸ್ಟ್’ ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. “ಸಂದೇಶ್ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಸಂದೇಶ್ ಎನ್. ನಿರ್ಮಿಸುತ್ತಿರುವ “ಘೋಸ್ಟ್’ ಸಿನಿಮಾಕ್ಕೆ ಹಾಗೂ ಶ್ರೀನಿ ನಿರ್ದೇಶನವಿದೆ.
“ಘೋಸ್ಟ್’ ಸಿನಿಮಾದಲ್ಲಿ ಶಿವರಾಜಕುಮಾರ್ ಅವರೊಂದಿಗೆ ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ