‘ಘೋಸ್ಟ್’ ಲುಕ್ ನಲ್ಲಿ ಶಿವಣ್ಣ: ಸಸ್ಪೆನ್ಸ್ ಕಂ ಆ್ಯಕ್ಷನ್- ಥ್ರಿಲ್ಲರ್ ಚಿತ್ರ
Team Udayavani, Oct 13, 2022, 4:32 PM IST
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ “ಘೋಸ್ಟ್’ ಸಿನಿಮಾದ ಮುಹೂರ್ತವನ್ನು ಆಚರಿಸಿಕೊಂಡು ಸೆಟ್ಟೇರಿದೆ. ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ನಡೆದ “ಘೋಸ್ಟ್’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ, ಶಿವರಾಜಕುಮಾರ್ ಪತ್ನಿ ಶ್ರೀಮತಿ ಗೀತಾ ಶಿವರಾಜಕುಮಾರ್ “ಘೋಸ್ಟ್’ ಸಿನಿಮಾದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಬೃಂದಾ ಜಯರಾಂ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಚಿತ್ರತಂಡದ ಸದಸ್ಯರು ಹಾಗೂ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದರು.
“ಸಂದೇಶ್ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಸಂದೇಶ್ ಎನ್. ನಿರ್ಮಿಸುತ್ತಿರುವ, “ಘೋಸ್ಟ್’ ಸಿನಿಮಾಕ್ಕೆ “ಶ್ರೀನಿವಾಸ ಕಲ್ಯಾಣ’, “ಓಲ್ಡ್ ಮಾಂಕ್’ ಖ್ಯಾತಿಯ ನಟ ಕಂ ನಿರ್ದೇಶಕ ಶ್ರೀನಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ಘೋಸ್ಟ್’ ಸಿನಿಮಾಕ್ಕೆ ಮಾಸ್ತಿ ಹಾಗೂ ಪ್ರಸನ್ನ ಸಂಭಾಷಣೆಯಿದೆ. ಚಿತ್ರಕ್ಕೆ ಮಹೇಂದ್ರ ಸಿಂಹ ಛಾಯಾಗ್ರಹಣವಿದ್ದು, ಅರ್ಜುನ್ ಜನ್ಯ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಇನ್ನು ಸಸ್ಪೆನ್ಸ್ ಕಂ ಆ್ಯಕ್ಷನ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಘೋಸ್ಟ್’ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಾಗುತ್ತಿದ್ದು, ಚಿತ್ರೀಕರಣಕ್ಕಾಗಿ ಮಿನರ್ವ ಮಿಲ್‌ನಲ್ಲಿ ಬರೋಬ್ಬರಿ 15 ವಿಭಿನ್ನ ಸೆಟ್‌ಗಳನ್ನು ಹಾಗೂ ಮೈಸೂರಿನಲ್ಲಿ 4 ಬೃಹತ್ ಸೆಟ್‌ಗಳನ್ನು ನಿರ್ಮಿಸಲಾಗಿದೆ. ಕಲಾ ನಿರ್ದೇಶಕ ಮೋಹನ್ ಬಿ. ಕೆರೆ ಕಲ್ಪನೆಯಲ್ಲಿ ಮೂಡಿಬಂದಿರುವ, ಈ ಅದ್ದೂರಿ ಸೆಟ್‌ಗಳ ನಿರ್ಮಾಣಕ್ಕೆ ಸುಮಾರು ಮೂರು ಕೋಟಿ ವೆಚ್ಚವಾಗಿದೆ ಎಂಬುದು ಚಿತ್ರತಂಡದ ಮಾತು.
ಸಿನಿಮಾದಲ್ಲಿ ಭರ್ಜರಿ ಐದು ಆ್ಯಕ್ಷನ್ ದೃಶ್ಯಗಳಿದ್ದು, ಮೊದಲ ಹಂತದಲ್ಲಿ ಮಿನರ್ವ ಮಿಲ್‌ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್‌ನಲ್ಲಿ ಸುಮಾರು 24 ದಿನಗಳ ಚಿತ್ರೀಕರಣ ನಡೆಯಲಿದೆ. ಎರಡನೇ ಹಂತದ ಚಿತ್ರೀಕರಣ ಮೈಸೂರಿನಲ್ಲಿ ನಡೆಯಲಿದೆ.
ಇನ್ನು “ಘೋಸ್ಟ್’ ಸಿನಿಮಾದಲ್ಲಿ ಶಿವರಾಜಕುಮಾರ್ ಅವರೊಂದಿಗೆ ಸತ್ಯಪ್ರಕಾಶ್, ಜಯರಾಂ, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…