
ಶ್ರೇಯಸ್ ಈಗ ‘ದಿಲ್ದಾರ್’ ಹೀರೊ..
Team Udayavani, Apr 1, 2023, 4:55 PM IST

“ರಾಣ’ ಸಿನಿಮಾ ಬಳಿಕ ನಟ ಶ್ರೇಯಸ್ ಕೆ. ಮಂಜು ಮತ್ತೂಂದು ಹೊಸ ಸಿನಿಮಾಕ್ಕೆ ತಯಾರಿ ನಡೆಸಿದ್ದಾರೆ. ಈಗಾಗಲೇ ಸದ್ದಿಲ್ಲದೆ ಶ್ರೇಯಸ್ ಹೊಸ ಸಿನಿಮಾದ ಕೆಲಸಗಳು ಶುರುವಾಗಿದ್ದು, ಇದೀಗ ಈ ಸಿನಿಮಾದ ಚಿತ್ರೀಕರಣ ಕೂಡ ಆರಂಭವಾಗಿದೆ. ಅಂದಹಾಗೆ, ಶ್ರೇಯಸ್ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ “ದಿಲ್ದಾರ್’ ಎಂದು ಟೈಟಲ್ ಇಡಲಾಗಿದ್ದು, ಇತ್ತೀಚೆಗೆ ಸಿನಿಮಾದ ಮುಹೂರ್ತ ನೆರವೇರಿತು.
ನಟ ರವಿಚಂದ್ರನ್ “ದಿಲ್ದಾರ್’ ಸಿನಿಮಾದ ಟೈಟಲ್ ಬಿಡುಗಡೆ ಮಾಡಿ, ಚಿತ್ರೀಕರಣಕೆ ಕ್ಲಾಪ್ ಮಾಡಿದರೆ, ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕ್ಯಾಮೆರಾಗೆ ಚಾಲನೆ ಮಾಡುವ ಮೂಲಕ “ದಿಲ್ದಾರ್’ ಚಿತ್ರೀಕರಣಕ್ಕೆ ಚಾಲನೆ ನೀಡಿದರು.
ಮಧು ಗೌಡ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ದಿಲ್ದಾರ್’ ಸಿನಿಮಾವನ್ನು ಸಂತೋಷ ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಅದ್ಧೂರಿ ಲವರ್’ ಹಾಗೂ “ಬ್ಯಾಡ್ ಮ್ಯಾನರ್’ ಸಿನಿಮಾದಲ್ಲಿ ಅಭಿನಯಿಸಿರುವ ಪ್ರಿಯಾಂಕಾ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದ್ದು, ಗಗನ್ ಗೌಡ ಛಾಯಾಗ್ರಹಣವಿದೆ. “ದಿಲ್ದಾರ್’ ಕಾಲೇಜ್ ಸ್ಟೋರಿ ಸಿನಿಮಾವಾಗಿದ್ದು, ಬೆಂಗಳೂರು ಸುತ್ತಮುತ್ತ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
