ಹೊಂಬಾಳೆ ತಂಡ ಸೇರಿದ ಬೋಲ್ಡ್ ಬ್ಯೂಟಿ: ಸಲಾರ್ಗೆ ಶ್ರುತಿ ಹಾಸನ್
Team Udayavani, Jan 29, 2021, 8:33 AM IST
ಹೊಂಬಾಳೆ ಪ್ರೊಡಕ್ಷನ್ಸ್ನಡಿ ನಿರ್ಮಾಣವಾಗುತ್ತಿರುವ ಬಹುಭಾಷಾ ಚಿತ್ರ “ಸಲಾರ್’ಗೆ ನಾಯಕಿ ಯಾರಾಗುತ್ತಾರೆಂಬ ಕುತೂಹಲ ಸಿನಿಪ್ರೇಮಿಗಳಲ್ಲಿತ್ತು. ಈಗ ಆ ಕುತೂಹಲಕ್ಕೆ ತೆರೆಬಿದ್ದಿದೆ. ಅದು ನಾಯಕಿಯ ಅನೌನ್ಸ್ಮೆಂಟ್ನೊಂದಿಗೆ. ಹೌದು, ಪ್ರಭಾಸ್ ನಾಯಕರಾಗಿರುವ “ಸಲಾರ್’ ಚಿತ್ರಕ್ಕೆ ಶ್ರುತಿ ಹಾಸನ್ ನಾಯಕಿಯಾಗಿದ್ದಾರೆ.
ಗುರುವಾರ ಶ್ರುತಿ ಹಾಸನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಅವರಿಗೆ ಶುಭಕೋರಿ, ತಂಡಕ್ಕೆ ವೆಲ್ಕಮ್ ಮಾಡಿದೆ. ಪ್ರಶಾಂತ್ ನೀಲ್ ನಿರ್ದೇಶನದ “ಸಲಾರ್’ ಚಿತ್ರಕ್ಕೆ ಇತ್ತೀಚೆಗಷ್ಟೇ ಹೈದರಾಬಾದ್ ಸೆಟ್ಟೇರಿದೆ.
ಈಗಾಗಲೇ ಚಿತ್ರದ ಪೂರ್ವತಯಾರಿ ಜೋರಾಗಿ ನಡೆಯುತ್ತಿದ್ದು, ಸದ್ಯ ಪ್ರಶಾಂತ್ ನೀಲ್ “ಕೆಜಿಎಫ್-2′ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಅದು ಮುಗಿಯುತ್ತಿದ್ದಂತೆ “ಸಲಾರ್’ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಇದು ಕೂಡಾ ಹೊಂಬಾಳೆ ಬ್ಯಾನರ್ನಿಂದ ಬರುತ್ತಿರುವ ಮತ್ತೂಂದು ಅದ್ಧೂರಿ ಸಿನಿಮಾ ಇದಾಗಿದ್ದು, ಈಗಾಗಲೇ ಸಿನಿಮಾ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಇನ್ನು ಶ್ರುತಿ ಹಾಸನ್ ನಾಯಕಿಯಾಗಿರುವ “ಕ್ರ್ಯಾಕ್’ ಚಿತ್ರ ಇತ್ತೀಚೆಗಷ್ಟೇ ತೆರೆಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ