“ರಹದಾರಿ’ಗೆ ಬಂದ ಶ್ವೇತಾ ಶ್ರೀವಾತ್ಸವ್‌

ಸಿಂಪಲ್‌ ನಾಯಕಿಯ ಸೆಕೆಂಡ್‌ ಇನ್ನಿಂಗ್ಸ್‌

Team Udayavani, Oct 9, 2019, 3:04 AM IST

“ಸಿಂಪಲ್ಲಾಗ್‌ ಒಂದ್‌ ಲವ್‌ಸ್ಟೋರಿ’ ಚಿತ್ರದ ಮೂಲಕ ಚಂದನವನಕ್ಕೆ ನಾಯಕಿಯಾಗಿ ಪರಿಚಯವಾಗಿದ್ದ ನಟಿ ಶ್ವೇತಾ ಶ್ರೀವಾತ್ಸವ್‌ ಅವರಿಗೆ ನಂತರ ಸಾಕಷ್ಟು ಹೆಸರು ತಂದುಕೊಟ್ಟಿದ್ದು “ಕಿರಗೂರಿನ ಗಯ್ನಾಳಿಗಳು’ ಚಿತ್ರ. ಆ ಚಿತ್ರದ ನಂತರ, ಸುಮಾರು ಮೂರು ವರ್ಷ ಬಣ್ಣದ ಲೋಕದಿಂದ ಕೆಲಕಾಲ ದೂರ ಉಳಿದಿದ್ದ ಶ್ವೇತಾ ಈಗ ಮತ್ತೆ ಬಿಗ್‌ ಸ್ಕ್ರೀನ್‌ನಲ್ಲಿ ಸೆಕೆಂಡ್‌ ಇನ್ನಿಂಗ್ಸ್‌ ಶುರು ಮಾಡಲು ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದಾರೆ.

ಹೌದು, ಶ್ವೇತಾ ಶ್ರೀವಾತ್ಸವ್‌ “ರಹದಾರಿ’ ಎನ್ನುವ ಹೊಸ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ರಹದಾರಿ’ ಚಿತ್ರದಲ್ಲಿ ಶ್ವೇತಾ ಅವರು ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಶ್ವೇತಾ ಅವರ ಕಂ ಬ್ಯಾಕ್‌ ಚಿತ್ರ “ರಹದಾರಿ’ಯನ್ನು ಗಿರೀಶ್‌ ವೈರಮುಡಿ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಒಂದ್‌ ಕಥೆ ಹೇಳ್ಲಾ’ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್‌ ವೈರಮುಡಿ ಹೇಳಿರುವ “ರಹದಾರಿ’ ಚಿತ್ರದ ಕಥೆ ಮತ್ತು ಪಾತ್ರವನ್ನು ಕೇಳಿ ಖುಷಿಯಾಗಿರುವ ಶ್ವೇತಾ ಈ ಚಿತ್ರವನ್ನು ಮಾಡಲು ಒಪ್ಪಿಕೊಂಡಿದ್ದಾರಂತೆ.

ಎಲ್ಲೂ ಹೆಚ್ಚು ಬೆಳಕಿಗೆ ಬಂದಿಲ್ಲದ, ಸಾಕಷ್ಟು ಕುತೂಹಲಕಾರಿಯಾಗಿರುವ, ನೈಜ ಘಟನೆ ಆಧಾರವಾಗಿ ಇಟ್ಟುಕೊಂಡಿಒರುವ ಕಥೆ ರಾಬರಿ ಚಿತ್ರದಲ್ಲಿದ್ದು, ಅನೇಕ ತಿರುವುಗಳ ನಡುವೆ ಚಿತ್ರದ ಕಥೆ ಸಾಗುತ್ತದೆ. ಅದನ್ನು ಭೇದಿಸುವ ಪಾತ್ರದಲ್ಲಿ ಶ್ವೇತಾ ಕಾಣಿಸಿಕೊಳ್ಳುತ್ತಾರೆ ಎನ್ನುವುದು ಚಿತ್ರತಂಡದ ಮೂಲಗಳ ಮಾಹಿತಿ. ಮುಕ್ತಾಂಬ ಬಸವರಾಜು ಹಾಗೂ ಮಂಜುನಾಥ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರೋಣದ ಬಕ್ಕೇಶ್‌ ಹಾಗೂ ಕೆ.ಸಿ ರಾವ್‌ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಚಿತ್ರದ ಉಳಿದ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿಗಳು ಶೀಘ್ರದಲ್ಲಿಯೇ ಹೊರಬರಲಿದೆ.  ಒಟ್ಟಾರೆ ರಾಬರಿ ಕೇಸ್‌ ಪತ್ತೆ ಮಾಡಲು “ರಹದಾರಿ’ ಮೂಲಕ ಮತ್ತೆ ಚಿತ್ರರಂಗಕ್ಕೆ ಬರುತ್ತಿರುವ ಶ್ವೇತಾ ಶ್ರೀವಾತ್ಸವ್‌ ಅವರನ್ನು ಪ್ರೇಕ್ಷಕ ಪ್ರಭುಗಳು ಹೇಗೆ ಸ್ವೀಕರಿಸುತ್ತಾರೆ ಅನ್ನೋ ಕುತೂಹಲಕ್ಕೆ ಚಿತ್ರ ತೆರೆಗೆ ಬಂದ ಮೇಲಷ್ಟೇ ಉತ್ತರ ಸಿಗಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಕಲಿಯುವ ವಯಸ್ಸಿನಲ್ಲಿ ಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಸಿ ದುಡಿಮೆಯಲ್ಲಿ ತೊಡಗಿಸುವುದು ಸಂವಿಧಾನದ ವಿರುದ್ಧವಾಗಿದೆ...

  • ಚಳ್ಳಕೆರೆ: ಹಿರಿಯೂರು, ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲೂಕುಗಳ ವ್ಯಾಪ್ತಿಯಲ್ಲಿ ಒಟ್ಟು 20 ಗುತ್ತಿಗೆದಾರರಿಗೆ ವೇದಾವತಿ ನದಿಪಾತ್ರದ ಮರಳನ್ನು ಸರ್ಕಾರದ...

  • ಚಿಕ್ಕೋಡಿ: ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದಲ್ಲಿ ಸಮರ್ಪಕ ಬಸ್‌ ನಿಲ್ಲಿಸಬೇಕೆಂದು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸಂಘಟನೆಯಿಂದ ಗುರುವಾರ...

  • ಚಿಕ್ಕಮಗಳೂರು: ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಕಾಡು ಪ್ರಾಣಿಗಳ ಕುಡಿಯುವ ನೀರಿಗಾಗಿ ಜಲಮೂಲ ಉಳಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ...

  • ಬಳ್ಳಾರಿ: ಶರಣರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಅವರ ವ್ಯಕ್ತಿತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು...