ಸಾಫ್ಟ್ವೇರ್‌ ಮಂದಿಯ ಕನ್ನಡ ಚಿತ್ರ

ಕೊಲೆಯ ಜಾಡು ಹಿಡಿದು ಹೊರಟವರು...

Team Udayavani, Sep 26, 2019, 3:00 AM IST

Inject-0.7

ಗಾಂಧಿನಗರದಲ್ಲಿ ಈಗಾಗಲೇ ಸಾಫ್ಟ್ವೇರ್‌ ಮಂದಿ ಧುಮುಕಿದ್ದು ಗೊತ್ತೇ ಇದೆ. ಆಗಾಗ, ಸಾಫ್ಟ್ವೇರ್‌ ಕ್ಷೇತ್ರದಲ್ಲಿರುವ ಒಂದಷ್ಟು ಪ್ರತಿಭಾವಂತರು ಸೇರಿ, ಸಿನಿಮಾ ಮಾಡುವ ಮೂಲಕ ತಮ್ಮ ಪ್ರತಿಭೆ ಅನಾವರಣಗೊಳಿಸುತ್ತಲೇ ಇದ್ದಾರೆ. ಆ ಸಾಲಿಗೆ ಈಗ “ಇಂಜೆಕ್ಟ್ 0.7′ ಎಂಬ ಹೊಸ ಚಿತ್ರವೂ ಸೇರಿದೆ. ಈ ಚಿತ್ರದ ಶೀರ್ಷಿಕೆ ಕೇಳಿದರೆ, ಇದು ಬಾಂಡ್‌ ಸಿನಿಮಾ ಇರಬಹುದಾ? ಎಂಬ ಪ್ರಶ್ನೆ ಎದುರಾಗುತ್ತೆ. ಆದರೆ, ಇದು ಸಸ್ಪೆನ್ಸ್‌, ಥ್ರಿಲ್ಲರ್‌ ಜಾನರ್‌ಗೆ ಸೇರಿದ ಸಿನಿಮಾ.

ಆ ಕುರಿತು ಒಂದಷ್ಟು ಹೇಳುವುದಾದರೆ, ಇದನ್ನು ಸಾಫ್ಟ್ವೇರ್‌ ಎಂಜಿನಿಯರ್‌ಗಳು ಸೇರಿ ಮಾಡಿದ ಚಿತ್ರ. ತಮ್ಮ ಆದಾಯದಲ್ಲಿ ಕೂಡಿಟ್ಟ ಹಣವನ್ನು “ಇಂಜೆಕ್ಟ್ 0.7′ ಚಿತ್ರಕ್ಕಾಗಿ ಹಾಕಿದ್ದಾರೆ. ಕಡಿಮೆ ಬಜೆಟ್‌ನಲ್ಲಿ ಒಂದು ಥ್ರಿಲ್ಲರ್‌ ಸಿನಿಮಾ ಮಾಡಿರುವ ತೃಪ್ತಿ ಅವರದು. ಕಥೆ ಬಗ್ಗೆ ಹೇಳುವುದಾದರೆ, ಒಬ್ಬ ಸಾಮಾನ್ಯ ವ್ಯಕ್ತಿ ಸಿಮೆಂಟ್‌ ವ್ಯಾಪಾರ ಮಾಡಲು ನಿರ್ಧರಿಸಿ, ತನ್ನ ಪತ್ನಿ ಜೊತೆ ಊರ ಹೊರಗಿರುವ ಒಂದು ‌ ಒಂಟಿ ಮನೆಗೆ ವಾಸ ಮಾಡಲು ಹೊರಡುತ್ತಾನೆ.

ಆ ಜಾಗದಲ್ಲಿ ಸಾಲು ಸಾಲು ಕೊಲೆಗಳು ನಡೆಯುತ್ತಾ ಹೋಗುತ್ತವೆ. ಆ ಕುರಿತು ವಾಹಿನಿಯಲ್ಲಿ ಸುದ್ದಿಯೂ ಆಗುತ್ತೆ. ಆಗ ರಾಜಕಾರಣಿಯೊಬ್ಬ ತನಿಖೆಗೆ ಒತ್ತಾಯಿಸುತ್ತಾನೆ. ತನಿಖೆ ಕೈಗೊಳ್ಳುವ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸುತ್ತಾರೆ. ಆಗ ಒಂದೊಂದೇ ಘಟನೆಗಳು ಬಿಚ್ಚಿಕೊಳ್ಳುತ್ತವೆ. ಆ ಘಟನೆ ಏನು, ಕೊಲೆ ಮಾಡಿದ್ದು ಯಾರು, ಕೊಲೆ ಆಗಿದ್ದು ಯಾರದ್ದು ಎಂಬಿತ್ಯಾದಿ ಪ್ರಶ್ನೆಗೆ ಸಿನಿಮಾ ನೋಡಬೇಕು ಎಂಬುದು ಚಿತ್ರತಂಡದ ಮಾತು.

ಇನ್ನು, ಈ ಚಿತ್ರಕ್ಕೆ ಭದ್ರಾವತಿ ಮೂಲದ ನಿರಂಜನ್‌ ನಿರ್ದೇಶಿಸಿದ್ದಾರೆ. ಅಷ್ಟೇ ಅಲ್ಲ, ಚಿತ್ರಕ್ಕೆ ಸೌಂಡ್‌ಎಫೆಕ್ಟ್ಸ್ ಕೆಲಸವನ್ನೂ ಮಾಡಿ, ಹೀರೋ ಆಗಿಯೂ ಕಾಣಿಸಿಕೊಂಡಿದ್ದಾರೆ. ಪ್ರತಿಜ್ಞ ಹಾಗು ರೂಪಗೌಡ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಶ್ರೀಕಾಂತ್‌ ಯಾದವ್‌, ವಿನೀಶ್‌.ಎಂ, ಸೂರ್ಯ ಧನುಷ್‌, ಈಶ್ವರ್‌, ತಾರಾ, ಅಮೃತ, ಯೋಗೇಶ್‌, ರಾಜೇಶ್‌ ಮುಂತಾದವರು ಅಭಿನಯಿಸಿದ್ದಾರೆ.

ಬೆಂಗಳೂರು, ಅರೆಬಿಳಚಿ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಪ್ರಮೋದ್‌ಆಚಾರ್ಯ ಅವರು ಗೀತೆ ರಚಿಸಿದ್ದಾರೆ. ಶ್ರೀಧರ್‌ಕಶ್ಯಪ್‌ ಸಂಗೀತವಿದೆ. ಉದಯ್‌ ಲೀಲಾ ಅವರು ಛಾಯಾಗ್ರಹಣ ಮಾಡಿದ್ದಾರೆ. ಮಹೇಶ್‌ ರೆಡ್ಡಿ ಅವರ ಸಂಕಲನವಿದೆ. ನಿರ್ದೇಶಕ ನಿರಂಜನ್‌ ಆ್ಯಕ್ಷನ್‌ -ಕಟ್‌ ಹೇಳಿದರೆ, ಅವರ ಪತ್ನಿ ಪವಿತ್ರ ಬಂಡವಾಳ ಹಾಕಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ ಅಕ್ಟೋಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸ್ನೇಹಿತರ ವಿರುದ್ಧ ವೇ ನಟಿ ಸಂಜನಾ ದೂರು

ಸ್ನೇಹಿತರ ವಿರುದ್ಧವೇ ನಟಿ ಸಂಜನಾ ದೂರು

4jevrgi

ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ

ಡ್ರಗ್ಸ್‌ ದಂಧೆ- ನೈಜೀರಿಯಾ ಪ್ರಜೆ ಬಂಧನ

ಡ್ರಗ್ಸ್‌ ದಂಧೆ: ನೈಜೀರಿಯಾ ಪ್ರಜೆ ಬಂಧನ

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

3kannada

ಕನ್ನಡ ಬೆಳವಣಿಗೆ ಮಾಧ್ಯಮದಲ್ಲಿ ಅಡಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.