‘ನಗುವಿನ ಹೂಗಳ ಮೇಲೆ’ ಹಾಡು ಬಂತು
Team Udayavani, Feb 13, 2023, 4:28 PM IST
“ಆಮ್ಲೆಟ್’, “ಕೆಂಪಿರ್ವೆ’ ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮತ್ತೂಂದು ಬಹು ನಿರೀಕ್ಷಿತ ಚಿತ್ರ “ನಗುವಿನ ಹೂಗಳ ಮೇಲೆ’. ಅಭಿದಾಸ್, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರ ಪ್ರೇಕ್ಷಕರೆದುರು ಸಜ್ಜಾಗಿದೆ. ಇದೀಗ ಸಿನಿಮಾ ತಂಡ ಚಿತ್ರದ ಮೊದಲ ಹಾಡನ್ನು ಜೀ ಮ್ಯೂಸಿಕ್ನಲ್ಲಿ ಬಿಡುಗಡೆ ಮಾಡಿದೆ.
ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಅರಳಿರುವ “ಇರಲಿ ಬಿಡು ಈ ಜೀವ ನಿನಗಾಗಿ’ ರೋಮ್ಯಾಂಟಿಕ್ ಹಾಡಿಗೆ ತಜೇಂಧರ್ ಸಿಂಗ್, ನಿಹಾರಿಕ ನಾಥ್ ದನಿಯಾಗಿದ್ದು, ಲವ್ ಪ್ರಾನ್ ಮೆಹತಾ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದೆ. ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ ಪ್ರಚಾರ ಕಾರ್ಯ ಆರಂಭಿಸಿದೆ ಚಿತ್ರತಂಡ. ಸೆನ್ಸಾರ್ ಗೆ ರೆಡಿಯಾಗಿರುವ ಚಿತ್ರ ಏಪ್ರಿಲ್ನಲ್ಲಿ ಬೆಳ್ಳಿ ಪರದೆ ಮೇಲೆ ಬರಲಿದೆ.
ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿರುವ ಅಭಿದಾಸ್, ಶರಣ್ಯ ಶೆಟ್ಟಿ ಚಿತ್ರದಲ್ಲಿ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ.
ಇರಲು ಬಿಡಬೇಡಿ. 🫢
ಹಾಡು ನೋಡಿ ಆನಂದಿಸಲು ಮರೀಬೇಡಿ.🕺🏼ಸಿಂಗಾರ ಸಿರಿಯೆ ಹಾಡಿನ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ
ಅಭಿಷೇಕ್ ರಾಮದಾಸ್ ಮತ್ತು ಶರಣ್ಯ ಶೆಟ್ಟಿ ಅಭಿನಯದ“ನಗುವಿನ ಹೂಗಳ ಮೇಲೆ” ಹೊಸ ಸಿನಿಮಾದ ಹಾಡು “ಇರಲಿ ಬಿಡು ”
ನಾಳೆ ಸಂಜೆ ೫.೧೫ ಕ್ಕೆ ಝೀ ಮ್ಯೂಸಿಕ್ ಯೌಟ್ಯೂಬ್ ಚಾನೆಲ್ ಅಲ್ಲಿ ಬಿಡುಗಡೆ ಆಗಲಿದೆ. pic.twitter.com/3YSrgOWzQo— Zee Music South (@zeemusicsouth) February 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…