ರಂಗಭೂಮಿ ಪ್ರತಿಭೆಗಳು ಪೋಣಿಸಿದ ಸೂಜಿದಾರ

Team Udayavani, Apr 29, 2019, 3:00 AM IST

ತನ್ನ ಶೀರ್ಷಿಕೆ ಮತ್ತು ವಿಭಿನ್ನ ಕಥಾಹಂದರದ ಮೂಲಕ ಚಂದನವನದ ಒಂದಷ್ಟು ಸಿನಿಪ್ರಿಯರ ಗಮನ ಸೆಳೆದಿರುವ ‘ಸೂಜಿದಾರ’ ಚಿತ್ರ ತೆರೆಗೆ ಬರಲು ತೆರೆಮರೆಯಲ್ಲಿ ಸಿದ್ದತೆ ನಡೆಸುತ್ತಿದೆ. ಸದ್ಯ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಇತ್ತೀಚೆಗ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡಿದೆ.

ನಟ ನೀನಾಸಂ ಸತೀಶ್‌, ನಿರ್ದೇಶಕ ಬಿ.ಎಂ ಗಿರಿರಾಜ್‌ ಸೇರಿದಂತೆ ಚಿತ್ರರಂಗದ ಹಲವು ಗರ್ಣಯರ ಸಮ್ಮುಖದಲ್ಲಿ ‘ಸೂಜಿದಾರ’ ಚಿತ್ರದ ಹಾಡುಗಳು ಹೊರಬಂದಿವೆ. ಇನ್ನೊಂದು ವಿಶೇಷವೆಂದರೆ, ತೆರೆಯ ಮುಂದೆ ಮತ್ತು ತೆರೆಯ ಹಿಂದೆ ಬಹುತೇಕ ರಂಗಭೂಮಿ ಪ್ರತಿಭೆಗಳೆ ಸೇರಿ ‘ಸೂಜಿದಾರ’ ಚಿತ್ರವನ್ನು ನಿರ್ಮಿಸಿದ್ದಾರೆ.

ಹಲವು ವರ್ಷಗಳಿದ ರಂಗಭೂಮಿಯಲ್ಲಿ ಸಕ್ರಿಯರಾಗಿರುವ, ಹಲವು ಚಿತ್ರಗಳಲ್ಲಿ ಸಹನಟನಾಗಿ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಿದ ಅನುಭವವಿರುವ ನಟ ಯಶವಂತ್‌ ಶೆಟ್ಟಿ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇವರಿಗೆ ನಾಯಕಿಯಾಗಿ ಹರಿಪ್ರಿಯಾ ಜೋಡಿಯಾಗಿದ್ದಾರೆ.

ಉಳಿದಂತೆ ಅಚ್ಯುತಕುಮಾರ್‌, ಸುಚೇಂದ್ರ ಪ್ರಸಾದ್‌, ಶ್ರೇಯಾ ಅಂಚನ್‌, ಚಿತ್ರದ ಹಾಡುಗಳಿಗೆ ನೀನಾಸಂ ಪ್ರತಿಭೆ ಶ್ರೀಧರ್‌ ಹೆಗ್ಗೊಡು -ದಿಗ್ವಿಜಯ ಹೆಗ್ಗೊಡು ಸಂಗೀತ ಸಂಯೋಜಿಸಿದ್ದಾರೆ. ಪ್ರದೀಪ್‌ ವರ್ಮ ಹಿನ್ನಲೆ ಸಂಗೀತ ನೀಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮೌನೇಶ್‌ ಬಡಿಗೇರ್‌, ‘ಬದುಕಿನ ಸಂಕೀರ್ಣ ಆಯಾಮಗಳನ್ನು ಸೇರಿಸಿಕೊಂಡು ಚಿತ್ರ ಮಾಡಲಾಗಿದೆ.

ಸಮಾಜದ ಸುತ್ತ ಹಲವರು ನಾನಾ ರೀತಿಯ ಬದುಕು – ಬವಣೆಗಳನ್ನು ಅನುಭಸುತ್ತಿದ್ದಾರೆ. ಅಂತಹುದೆ ಕೆಲವು ಅಂಶಗಳನ್ನು ತೆಗೆದುಕೊಳ್ಳಲಾಗಿದೆ. ಇಲ್ಲಿಯವರೆಗೂ ಕಾಣಿಸಿದ ವಿಭಿನ್ನ ಪಾತ್ರಕ್ಕೆ ನಾಯಕಿ ಹರಿಪ್ರಿಯಾ ಬಣ್ಣ ಹಚ್ಚಿದ್ದಾರೆ. ಚಿತ್ರದ ಬಗ್ಗೆ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಶೀಘ್ರದಲ್ಲಿಯೇ ಚಿತ್ರವನ್ನು ಜನರ ಮುಂದೆ ತರಲಿದ್ದೇವೆ’ ಎಂದರು.

ಸಿನಿ ಸ್ನೇಹ ಟಾಕೀಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಸೂಜಿದಾರ’ ಚಿತ್ರವನ್ನು ಅಭಿಜಿತ್‌ ಕೋಟೆಗಾರ್‌ ಮತ್ತು ಸಚ್ಚೀಂದ್ರನಾಥ್‌ ನಾಯಕ್‌ ಜಂಟಿಯಾಗಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಅಶೋಕ್‌. ಡಿ ರಾಮನ್‌ ಛಾಯಾಗ್ರಹಣ, ಎಲ್‌. ಮೋಹನ್‌ ಸಂಕಲನ ಕಾರ್ಯವಿದೆ.

ಸದ್ಯ ಬಿಡುಗಡೆಯಾಗಿರುವ ‘ಸೂಜಿದಾರ’ದ ಟೀಸರ್‌, ಹಾಡುಗಳು ನಿಧಾನವಾಗಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, ಬಹುತೇಕ ರಂಗಭೂಮಿ ಪ್ರತಿಭೆಗಳ ಕೈಯಲ್ಲಿ ಮೂಡಿರುವ ‘ಸೂಜಿದಾರ’ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಅನ್ನೋದು ಮೇ ತಿಂಗಳ ಅಂತ್ಯದೊಳಗೆ ಗೊತ್ತಾಗಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

  • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....

  • ಕುಲುಮೆಯ ಬೆಂಕಿ ಮುಂದೆ, ದುಡಿದು ದಣಿವ ಜೀವ. ಪ್ರಾಯ 65 ದಾಟಿದೆ. ಕಮ್ಮಾರಿಕೆಯಿಂದ ಬಂದ ನಾಲ್ಕಾರು ಕಾಸನ್ನು ವೀರಾಚಾರಿ ಅವರು ಬ್ಯಾಂಕಿನಲ್ಲಿ ಕೂಡಿಡದೆ, ನಮ್ಮೆಲ್ಲರ...

  • ರಷ್ಯಾ ಮೂಲದ ಸೀಬರ್ಡ್‌ಗಳಿಗೆ, ಕಾರವಾರದ ಕಡಲತಡಿ ಪಕ್ಷಿಕಾಶಿ ಇದ್ದಂತೆ. ಆದರೆ, ದುರಾದೃಷ್ಟ. ಈ ಬಾರಿ ಇಲ್ಲಿ ಸೀಬರ್ಡ್‌ನ ಚಿಲಿಪಿಲಿ ಕೇಳಿಸುತ್ತಿಲ್ಲ. ದೂರದ ಊರಿನ...