ಅಭಿಮಾನಿಗಳ ಜೊತೆ ಶ್ರೀಮುರಳಿ ಬರ್ತ್ಡೇ
Team Udayavani, Dec 18, 2018, 11:27 AM IST
ನಟ ಶ್ರೀಮುರಳಿ ನಿನ್ನೆ (ಡಿ.17)ರಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇದೇ ವೇಳೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಮಾದರಿಯ ಕೇಕ್ಗಳನ್ನು ಕತ್ತರಿಸಿ ಸಂಭ್ರಮಿಸಿದರು.
ಇನ್ನು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೊದಲು ಜಯನಗರದ ನಾಲ್ಕನೇ ಹಂತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಶ್ರೀಮುರಳಿ, ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳ ಜೊತೆ ರೋಡ್ ಶೋ ಮೂಲಕ ಶಾಲಿನಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ರೋರಿಂಗ್ ಉತ್ಸವದಲ್ಲಿ ಪಾಲ್ಗೊಂಡರು.
ರೋರಿಂಗ್ ಉತ್ಸವದಲ್ಲಿ ಅಭಿಮಾನಿಗಳು ಶ್ರೀಮುರಳಿ ಬರ್ತ್ಡೇ ಪ್ರಯುಕ್ತ ರಕ್ತದಾನ, ವೈದ್ಯಕೀಯ ಶಿಬಿರ, ಅನ್ನದಾನ ಮತ್ತು ಆಟೋ ರಿಕ್ಷಾ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಇನ್ನು ಅಭಿಮಾನಿಗಳ ಆಸೆಯಂತೆ ಶ್ರೀ ಮುರಳಿ ಕೂಡ ಆಟೋ ಓಡಿಸಿ ಸಂಭ್ರಮಿಸಿದರು.
ಶ್ರೀ ಮುರಳಿ ಬರ್ತ್ಡೇ ಪ್ರಯುಕ್ತ “ಭರಾಟೆ’ ಚಿತ್ರತಂಡ ಚಿತ್ರದ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಇನ್ನು “ಮದಗಜ’ ಚಿತ್ರತಂಡ ಕೂಡ ಹಾಜರಿದ್ದು ಚಿತ್ರದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?