ಸಂಚಾರಿ ವಿಜಯ್‌ ಕಾಮಿಡಿಗೆ ಸ್ಟಾರ್ ವಿಶ್‌


Team Udayavani, Nov 5, 2017, 11:19 AM IST

maglu.jpg

ಕನ್ನಡ ಚಿತ್ರರಂಗದಲ್ಲಿ ಈಗ ಒಂದು ಹೊಸ ಬೆಳವಣಿಗೆ ಆರಂಭವಾಗಿದೆ. ಅದೇನೆಂದರೆ ಚಿತ್ರರಂಗಕ್ಕೆ ಬರುವ ಹೊಸ ತಂಡಗಳು, ತಾವು ಮಾಡಿದ ಕೆಲಸವನ್ನು ಸ್ಟಾರ್‌ ನಟರಿಗೆ ಅಥವಾ ಈಗಾಗಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ-ನಟಿಯರಿಗೆ ತೋರಿಸಿ ಅವರ, ಶುಭಹಾರೈಕೆ ಪಡೆದೇ ಸಿನಿಮಾ ಬಿಡುಗಡೆ ಮಾಡುತ್ತಿದೆ.

ಇದೊಂಥರ ಒಳ್ಳೆಯ ಬೆಳವಣಿಗೆ ಎಂದರೆ ತಪ್ಪಲ್ಲ. ಈಗಾಗಲೇ “ಮಹಾನುಭಾವರು’ ಸೇರಿದಂತೆ ಅನೇಕ ಚಿತ್ರತಂಡಗಳು ಈ ತರಹ ಸ್ಟಾರ್‌ಗಳ ಬಳಿಗೆ ಹೋಗಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ನನ್‌ ಮಗಳೇ ಹೀರೋಯಿನ್‌’. ಹೀಗೊಂದು ಫ‌ನ್ನಿ ಟೈಟಲ್‌ ಇಟ್ಟುಕೊಂಡಿರುವ ಚಿತ್ರ ಬರುತ್ತಿರೋದು ನಿಮಗೆ ಗೊತ್ತಿರಬಹುದು. ಸಂಚಾರಿ ವಿಜಯ್‌ ಈ ಚಿತ್ರದ ನಾಯಕ.

ಸಂಚಾರಿ ವಿಜಯ್‌ ಚಿತ್ರರಂಗಕ್ಕೇನು ಹೊಸಬರಲ್ಲ. ಆದರೆ, “ನನ್‌ ಮಗಳೇ ಹೀರೋಯಿನ್‌’ ತಂಡ ಮಾತ್ರ ಹೊಸದು. ಈ ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರು ಚಿತ್ರರಂಗಕ್ಕೆ ಹೊಸಬರು. ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ ಇದಾಗಿದ್ದು, ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ನವೆಂಬರ್‌ 17 ರಂದು ಬಿಡುಗಡೆಯಾಗುತ್ತಿದೆ.

ಈಗಾಗಲೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಟ್ರೇಲರ್‌ ನೋಡಿದವರು ಖುಷಿಯಾಗಿದ್ದಾರೆ. ಈ ಟ್ರೇಲರ್‌ ಅನ್ನು ಕನ್ನಡ ಚಿತ್ರರಂಗದ ಬಹುತೇಕ ಸ್ಟಾರ್‌ ನಟರಿಗೆ ತೋರಿಸಿ ಅವರ ಹಾರೈಕೆ ಪಡೆದಿದೆ ಚಿತ್ರತಂಡ. ಪ್ರತಿಯೊಬ್ಬ ನಟರು ಕೂಡಾ ಟ್ರೇಲರ್‌ ವೀಕ್ಷಿಸಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರೋದು ಚಿತ್ರತಂಡದ ಖುಷಿಗೆ ಕಾರಣವಾಗಿದೆ.

“ಶಿವರಾಜಕುಮಾರ್‌, ಪುನೀತ್‌, ದರ್ಶನ್‌ , ಗಣೇಶ್‌, ವಿಜಯ್‌ ಸೇರಿದಂತೆ ಬಹುತೇಕ ನಟರು ನಮ್ಮ ಟ್ರೇಲರ್‌ ನೋಡಿ ವಿಶ್‌ ಮಾಡಿದ್ದಾರೆ’ ಎನ್ನುತ್ತಾರೆ ನಾಯಕ ಸಂಚಾರಿ ವಿಜಯ್‌. ಚಿತ್ರದ ಟ್ರೇಲರ್‌ ಅನ್ನು ಶಿವರಾಜಕುಮಾರ್‌, ಪುನೀತ್‌ ರಾಜಕುಮಾರ್‌, ದರ್ಶನ್‌, ಗಣೇಶ್‌, ವಿಜಯ್‌, ಪ್ರೇಮ್‌, ಕಿಟ್ಟಿ, ರಕ್ಷಿತ್‌ ಶೆಟ್ಟಿ, ಪ್ರಜ್ವಲ್‌ ಸೇರಿದಂತೆ ಅನೇಕ ನಟರು “ನನ್‌ ಮಗಳೇ ಹೀರೋಯಿನ್‌’ ವೀಕ್ಷಿಸಿ ಶುಭಕೋರಿದ್ದಾರೆ.

ಇದು ಚಿತ್ರತಂಡದ ವಿಶ್ವಾಸವನ್ನು ಹೆಚ್ಚಿಸಿರೋದಂತು ಸುಳ್ಳಲ್ಲ. ಚಿತ್ರದಲ್ಲಿ ಅಮೃತಾ ರಾವ್‌ ಹಾಗೂ ದೀಪಿಕಾ ನಾಯಕಿಯರು. ಈ ಚಿತ್ರವನ್ನು ಬಾಹುಬಲಿ ಎನ್ನುವವರು ನಿರ್ದೇಶಿಸಿದ್ದು, ಎನ್‌.ಬಿ.ಮೋಹನ್‌ ಕುಮಾರ್‌ ಹಾಗೂ ಪಟೇಲ್‌ ಅನ್ನದಾನಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. 

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.