ಸುಬ್ರಹ್ಮಣ್ಯ: ಪಂಜದ ಪುಟಾಣಿಯ ಅಭಿನಯಕ್ಕೆ ನಟ ಪುನೀತ್ ಮೆಚ್ಚುಗೆ !
Team Udayavani, Sep 13, 2020, 7:39 PM IST
ಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಪಂಜ ಮೂಲದ ಪುಟಾಣಿಯ ಅಭಿನಯಕ್ಕೆ ಕನ್ನಡದ ಚಿತ್ರ ನಟ ಪುನೀತ್ ರಾಜ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿ ಬಾಲಕನ ಅಭಿನಯದ ವಿಡಿಯೋವನ್ನು ತಮ್ಮ ಫೇಸ್ಬುಕ್ ಫೇಜ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಂಜದ ಉದ್ಯಮಿ ವೆಂಕಟ್ರಮಣ ಭಟ್ ಹಾಗೂ ಶಶಿಕಲಾ ದಂಪತಿಯ ಪುತ್ರ, ಬೆಂಗಳೂರಿನಲ್ಲಿ ಇಂಜಿನಿಯರ್ ಗಳಾಗಿರುವ ಆದಿತ್ಯ ಹಾಗೂ ಪೂನಂ ದಂಪತಿಯ ಪುತ್ರ ನಾಲ್ಕು ವರ್ಷದ ಆಕಾಶ್ ನ ಅಭಿನಯದ ವಿಡಿಯೋ ಇದೀಗ ವೈರಲ್ ಆಗಿದೆ.
ಡಾ. ರಾಜ್ಕುಮಾರ್ ಅಭಿನಯದ ಬಬ್ರುವಾಹನ ಚಿತ್ರದ ಸನ್ನಿವೇಶದ ಸಂಭಾಷಣೆಯನ್ನುಅಭಿನಯಿಸಿದ ವೀಡಿಯೋವನ್ನು ಹೆತ್ತವರು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಹಾಕಿದ್ದರು. ಇದನ್ನು ಪತ್ರಕರ್ತ ಜೋಗಿ ಅವರು ಪುನೀತ್ ರಾಜ್ಕುಮಾರ್ ಅವರಿಗೆ ಕಳುಹಿಸಿದ್ದರು. ವಿಡಿಯೋ ನೋಡಿರುವ ಪುನೀತ್ ಅವರು ಬಾಲಕನ ಅದ್ಭುತ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬಾಲಕನನ್ನು ಪ್ರೋತ್ಸಾಹಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಪುಟ್ಟ ಅಭಿಮಾನಿ ? pic.twitter.com/NKEH00nzQz
— Puneeth Rajkumar (@PuneethRajkumar) September 13, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು