ಸುದೀಪ್‌ ಮುಡಿಗೇರಿದ ಪ್ರತಿಷ್ಠಿತ ಪ್ರಶಸ್ತಿ

ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌ ಫಿಲಂ ಫೆಸ್ಟಿವಲ್‌ ಅವಾರ್ಡ್‌

Team Udayavani, Jan 21, 2020, 7:04 AM IST

ನಟ ಕಿಚ್ಚ ಸುದೀಪ್‌ ಅಭಿನಯಕ್ಕೆ ಈಗ ಮತ್ತೊಂದು ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. 2020ನೇ ಸಾಲಿನ “ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್‌ ಅವಾರ್ಡ್‌’ ಘೋಷಣೆಯಾಗಿದ್ದು, “ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್‌ ಅವಾರ್ಡ್‌-2020’ಯ “ಮೋಸ್ಟ್‌ ಪ್ರಾಮಿಸಿಂಗ್‌ ಆ್ಯಕ್ಟರ್‌’ ಪ್ರಶಸ್ತಿಗೆ ಕನ್ನಡದ ನಟ ಸುದೀಪ್‌ ಆಯ್ಕೆಯಾಗಿದ್ದಾರೆ.

ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ತೆರೆಕಂಡ ಸಲ್ಮಾನ್‌ ಖಾನ್‌ ನಾಯಕನಾಗಿದ್ದ “ದಬಾಂಗ್‌-3′ ಸಿನಿಮಾದ ಸುದೀಪ್‌ ಖಳನಾಯಕನಾಗಿ ಬಲ್ಲಿ ಸಿಂಗ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. “ದಬಾಂಗ್‌-3′ ಚಿತ್ರದಲ್ಲಿ ಸುದೀಪ್‌ ನಿರ್ವಹಿಸಿದ್ದ ಬಲ್ಲಿ ಸಿಂಗ್‌ ಪಾತ್ರ ಪೋಷಣೆಗಾಗಿ ಈ ಪ್ರಶಸ್ತಿ ಒಲಿದು ಬಂದಿದೆ.

ಈ ಬಾರಿ ದಾದಾ ಸಾಹೇಬ್‌ ಫಾಲ್ಕೆ ಹಾಗೂ ಮಹಾತ್ಮ ಗಾಂಧೀಜಿಯವರ 150ನೇ ವರ್ಷದ ಜನ್ಮದಿನೋತ್ಸವದ ಪ್ರಯುಕ್ತ “ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌ ಫಿಲಂ ಫೆಸ್ಟಿವಲ್‌ ಅವಾರ್ಡ್‌’ ಕಾರ್ಯಕ್ರಮ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಫೆಬ್ರವರಿ 20ರಂದು ಮುಂಬೈನ ಪ್ರತಿಷ್ಠಿತ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ನಡೆಯಲಿದೆ. ಮಹಾರಾಷ್ಟ್ರದ ರಾಜ್ಯಪಾಲರು ವಿಶೇಷ ಅತಿಥಿಯಾಗಿ ಆಗಮಿಸಲಿದ್ದು, ಉಳಿದಂತೆ ವಿವಿಧ ಚಿತ್ರರಂಗದ ಅನೇಕ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಇನ್ನು 2020ನೇ ಸಾಲಿನ “ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌ ಫಿಲಂ ಫೆಸ್ಟಿವಲ್‌ ಅವಾರ್ಡ್‌’ “ಮೋಸ್ಟ್‌ ಪ್ರಾಮಿಸಿಂಗ್‌ ಆ್ಯಕ್ಟರ್‌’ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಷಯವನ್ನು ದಾದಾ ಸಾಹೇಬ್‌ ಫಾಲ್ಕೆಯವರ ಮೊಮ್ಮಗ ಹಾಗೂ “ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್‌ ಅವಾರ್ಡ್‌’ನ ತೀರ್ಪುಗಾರ ಸಮಿಯ ಅಧ್ಯಕ್ಷರೂ ಆಗಿರುವ ಚಂದ್ರಶೇಖರ್‌ ಪುಸಲ್ಕರ್‌ ಖಚಿತಪಡಿಸಿದ್ದಾರೆ.

ಕಳೆದ ಬಾರಿ ನಟ ರಾಕಿಂಗ್‌ ಸ್ಟಾರ್‌ ಯಶ್‌ “ದಾದಾ ಸಾಹೇಬ್‌ ಫಾಲ್ಕೆ ಇಂಟರ್‌ ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್‌ ಅವಾರ್ಡ್‌’ಗೆ ಬಾಜನರಾಗಿದ್ದರು. ಈ ಬಾರಿ ಪ್ರಶಸ್ತಿ ಕನ್ನಡದ ಮತ್ತೂಬ್ಬ ಸ್ಟಾರ್‌ ನಟ ಸುದೀಪ್‌ಗೆ ಒಲಿದು ಬಂದಿದ್ದು, ಕನ್ನಡ ಚಿತ್ರ ಪ್ರೇಮಿಗಳು ಅದರಲ್ಲೂ ಸುದೀಪ್‌ ಅಭಿಮಾನಿಗಳು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಸೋಶಿಯಲ್‌ ಮೀಡಿಯಾಗಳಲ್ಲೂ ಸುದೀಪ್‌ ಅಭಿಮಾನಿಗಳು ಮತ್ತು ಚಿತ್ರರಂಗದ ಅನೇಕ ಗಣ್ಯರು ಸುದೀಪ್‌ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬಿಸಿಲಿನಿಂದ ರಕ್ಷಣೆ ಪಡೆಯಲಷ್ಟೇ ಸನ್‌ಗ್ಲಾಸಸ್‌ ಧರಿಸುವ ಕಾಲ ಇದಲ್ಲ. ನೀವು ಧರಿಸುವ ಕೂಲಿಂಗ್‌ ಗ್ಲಾಸ್‌ ಕಣ್ಣನ್ನಷ್ಟೇ ಅಲ್ಲ, ನಿಮ್ಮ ಸ್ಟೈಲ್‌ ಅನ್ನೂ "ಕೂಲ್‌'...

  • ಮಹಾನಗರ: ರಾಜ್ಯ ಸರಕಾರವು ನೂತನವಾಗಿ ಜಾರಿಗೆ ತಂದ ನಂಬರ್‌ ಪ್ಲೇಟ್‌ ಮಾದರಿ ನಗರದಲ್ಲಿ ಇನ್ನೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ವಾಹನಗಳ ನಂಬರ್‌ ಪ್ಲೇಟ್‌ನಲ್ಲಿ...

  • ತಾವು ಯಾವುದರಲ್ಲಿ ಡಿಗ್ರಿ ಮಾಡಿದ್ದೇವೋ ಅದಕ್ಕೆ ತಕ್ಕಂತೆ ಕೆಲಸ ಸಿಗಬೇಕೆಂದು ಕಾದು ಕುಳಿತುಕೊಳ್ಳುವ ಕಾಲ ಅಲ್ಲ ಇದು. ಇವತ್ತು ಪದವಿ, ಸ್ನಾತಕೋತ್ತರ ಪದವಿಗಳು...

  • ಆಗೆಲ್ಲಾ ಈಗಿನಂತೆ ನಿಶ್ಚಿತಾರ್ಥಕ್ಕೆ ನೂರಾರು ಜನರು ಬರುತ್ತಿರಲಿಲ್ಲ. ಮುಖ್ಯವಾದ ಏಳೆಂಟು ಜನರು ಬಂದು, ಹುಡುಗಿಗೆ ಉಂಗುರ ತೊಡಿಸಿ, ಹರಿವಾಣ ವಿನಿಮಯ ಮಾಡುತ್ತಿದ್ದರು....

  • ಮಂಗಳೂರು: ರಾಜ್ಯದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಸಾಲ ಪಡೆದು 2020 ಜ. 31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮೇಲಿನ...