ಹಿಂದಿಗೆ ತಾರಕಾಸುರ ಡಬ್ಬಿಂಗ್
Team Udayavani, Jan 22, 2018, 10:41 AM IST
“ರಥಾವರ’ ಚಿತ್ರದ ನಂತರ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ “ತಾರಕಾಸುರ’ ಎಂಬ ಸಿನಿಮಾ ನಿರ್ದೇಶಿಸುತ್ತಿರುವ ವಿಷಯ ನಿಮಗೆ ಗೊತ್ತೇ ಇದೆ. ಈ ಚಿತ್ರದಲ್ಲಿ ನಾಯಕರಾಗಿ ವೈಭವ್ ನಟಿಸುತ್ತಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದೆ. ಚಿತ್ರ ಬಿಡುಗಡೆಗೆ ಮುನ್ನವೇ ಚಿತ್ರತಂಡ ಖುಷಿಯಾಗಿದೆ. ಅದಕ್ಕೆ ಕಾರಣ ಚಿತ್ರದ ಡಬ್ಬಿಂಗ್ ರೈಟ್ಸ್.
ಹೌದು, “ತಾರಕಾಸುರ’ ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿದೆಯಂತೆ. ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಹೇಳುವಂತೆ, ಚಿತ್ರದ ಡಬ್ಬಿಂಗ್ ರೈಟ್ಸ್ ಒಂದು ಕೋಟಿ ಎಪ್ಪೆ„ತ್ತೈದು ಲಕ್ಷ ರೂಪಾಯಿಗೆ ಮಾರಾಟವಾಗಿದೆಯಂತೆ. ಕೇವಲ ಡಬ್ಬಿಂಗ್ ರೈಟ್ಸ್ ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿರುವುದರಿಂದ ಚಿತ್ರತಂಡ ಖುಷಿಯಾಗಿದೆ.
ಸಿನಿಮಾವನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ. ಡ್ಯಾನಿ ಸಫಾನಿ ಇಲ್ಲಿ ಖಡಕ್ ವಿಲನ್ ಆಗಿ ನಟಿಸಿದ್ದು, ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ, ಅವರಿಗೆ ಹೊಸ ಗೆಟಪ್ ಕೂಡಾ ಕೊಟ್ಟಿದ್ದಾರೆ. ಖಡಕ್ ವಿಲನ್ ಒಬ್ಬನ ಎಂಟ್ರಿ ಕೂಡಾ ಜೋರಾಗಿರಬೇಕೆಂಬ ಕಾರಣಕ್ಕೆ ತಲಕಾಡುವಿನಲ್ಲಿ ಹೈವೋಲ್ಟೆಜ್ ಆ್ಯಕ್ಷನ್ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ. ಚಿತ್ರದಲ್ಲಿ ಮಾನ್ವಿತಾ ಹರೀಶ್ ನಾಯಕಿ.
ಚಿತ್ರದ ಒಂದು ಹಾಡಿನ ಚಿತ್ರೀಕರಣ ಬಾಕಿ ಇದ್ದು, ಅದನ್ನು ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರೆಯಲ್ಲಿ ಚಿತ್ರೀಕರಿಸಲಿದ್ದಾರಂತೆ. ಐದಾರು ಲಕ್ಷ ಜನ ಈ ಜಾತ್ರೆಯಲ್ಲಿ ಸೇರುವುದರಿಂದ ಅಲ್ಲೆ ಹಾಡನ್ನು ಚಿತ್ರೀಕರಿಸಲು ನಿರ್ಧರಿಸಿದೆ ಚಿತ್ರತಂಡ. ಶಿವರಾತ್ರಿ ದಿನಂದು ಚಿತ್ರಕ್ಕೆ ಕುಂಬಳಕಾಯಿ ಒಡೆಯಲಿದ್ದಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ