
ಕಾಂತಾರಕ್ಕೆ ಸಂಕಷ್ಟ; ‘ವರಾಹ ರೂಪಂ’ ಟ್ಯೂನ್ ನಮ್ಮಿಂದ ಕದ್ದಿದ್ದು ಎಂದ ‘ನವರಸಂ’ ತಂಡ
Team Udayavani, Oct 25, 2022, 9:54 AM IST

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ಭರ್ಜರಿ ಹಿಟ್ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡ ಎಂಬ ಸಾಧನೆ ಬರೆದ ಕಾಂತಾರ ಬೇರೆ ಭಾಷೆಗಳಲ್ಲೂ ಸಖತ್ ಸದ್ದು ಮಾಡುತ್ತಿದೆ. ಆದರೆ ಆರಂಭದಿಂದಲೂ ಕಾಂತಾರದ ವರಾಹ ರೂಪಂ ಹಾಡಿಗೆ ಕೇಳಿ ಬರುತ್ತಿರುವ ಆರೋಪ ಇದೀಗ ಮತ್ತೊಂದು ರೂಪ ಪಡೆದಿದೆ.
ಕಾಂತಾರ ಚಿತ್ರದಲ್ಲಿ ಪಂಜುರ್ಲಿ ದೈವವನ್ನು ಹೊಗಳುವ ‘ವರಾಹ ರೂಪಂ ದೈವ ವರಿಷ್ಟಂ’ ಹಾಡು ಪ್ರಸಿದ್ಧಿಯಾಗಿದೆ. ಆದರೆ ಆರಂಭದಿಂದಲೂ ಈ ಹಾಡು ಮಲಯಾಳಂ ನ ನವರಸಂ ಹಾಡಿನ ಕಾಪಿ ಎಂಬ ಕೇಳಿಬರುತ್ತಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂತಾರಾ ಸಂಗೀತ ನಿರ್ದೇಶಕ ಅಜನೀಶ್ ಬಿ ಲೋಕನಾಥ್, ಅದು ಬೇರೆ ಇದು ಬೇರೆ ಎಂದು ಹೇಳಿ ಸಾಮ್ಯತೆ ಆರೋಪವನ್ನು ತಳ್ಳಿ ಹಾಕಿದ್ದರು.
ಆದರೆ ಸೋಮವಾರ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ‘ತೈಕ್ಕುಡಂ ಬ್ರಿಡ್ಜ್’ ತಂಡವು ಕಾಪಿರೈಟ್ ಬಗ್ಗೆ ಉಲ್ಲೇಖ ಮಾಡಿದೆ.
ಇದನ್ನೂ ಓದಿ:ವಿಶ್ವಕಪ್ ನಲ್ಲಿ ವಿಂಡೀಸ್ ಗೆ ಆಘಾತ; ಕೋಚ್ ಹುದ್ದೆಯಿಂದ ಕೆಳಗಿಳಿದ ಫಿಲ್ ಸಿಮನ್ಸ್
“ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ತೈಕ್ಕುಡಂ ಬ್ರಿಡ್ಜ್ ತಂಡವು ‘ಕಾಂತಾರ’ ಸಿನಿಮಾದ ಜೊತೆ ಯಾವುದೇ ರೀತಿಯ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದಿದೆ.
ಹಾಡಿನ ಹಕ್ಕುಗಳನ್ನು ಕುರಿತಂತೆ ಕಾಂತಾರ ತಂಡದವರು ನಮಗೆ ಯಾವುದೇ ಕ್ರೆಡಿಟ್ ನೀಡಿಲ್ಲ. ಅಲ್ಲದೆ ಈ ಹಾಡನ್ನು ತಮ್ಮ ಸ್ವಂತ ಸೃಷ್ಟಿ ಎಂಬಂತೆ ಪ್ರಚಾರ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ನಮಗೆ ಬೆಂಬಲ ನೀಡಬೇಕು ಎಂದು ನಮ್ಮ ಕೇಳುಗರಲ್ಲಿ ವಿನಂತಿ ಮಾಡಿಕೊಳ್ಳುತ್ತೇವೆ. ಮ್ಯೂಸಿಕ್ ಕಾಪಿ ರೈಟ್ ಉಳಿಸುವ ಬಗ್ಗೆ ಎಲ್ಲ ಸಂಗೀತ ಕಲಾವಿದರು ತಮ್ಮ ಅಭಿಪ್ರಾಯ ಹಂಚಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ’ ಎಂದು ನವರಸಂ ಹಾಡಿನ ಸೃಷ್ಟಿಕರ್ತರಾದ ‘ತೈಕ್ಕುಡಂ ಬ್ರಿಡ್ಜ್’ ತಂಡ ಪೋಸ್ಟ್ ಮಾಡಿದೆ.
ಸದ್ಯ ಈ ಬಗ್ಗೆ ನಿರ್ದೇಶಕ ರಿಷಬ್ ಶೆಟ್ಟಿ ಅಥವಾ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಯಾವುದೇ ಹೇಳಿಕೆ ನೀಡಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ‍್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು