ಡಬ್ಬಲ್‌ ಇಂಜಿನ್‌ ಹತ್ತಿದ ಚಿರಯೌವ್ವನೆ

Team Udayavani, Jun 13, 2018, 11:09 AM IST

double-engine.jpg

ಈಯಮ್ಮನಿಗೆ ವಯಸ್ಸೇ ಆಗಲ್ಲ ಬಿಡಿ … ಸುಮನ್‌ ರಂಗನಾಥನ್‌ ನೋಡಿದವರು ಮೊದಲು ಹೇಳುವ ಮಾತಿದೆ. ಅದಕ್ಕೆ ಕಾರಣ ಗ್ಲಾಮರ್‌. ಹರೆಯದ ಯಾವ ನಟಿಗೂ ಕಮ್ಮಿ ಇಲ್ಲದಂತಹ ಗ್ಲಾಮರ್‌ನಲ್ಲಿ ಮಿಂಚುವ ಮೂಲಕ ಸುಮನ್‌ ರಂಗನಾಥ್‌ ಇಂದಿಗೂ ಬೇಡಿಕೆಯ ನಟಿಯಾಗಿದ್ದಾರೆ. 1989ರಲ್ಲಿ ಆರಂಭವಾದ ಸುಮನ್‌ ರಂಗನಾಥ್‌ ಅವರ ಜರ್ನಿ ಇಲ್ಲಿವರೆಗೆ ಯಶಸ್ವಿಯಾಗಿ ಸಾಗಿಬಂದಿದೆ.

ಕನ್ನಡ, ತೆಲುಗು, ತಮಿಳು, ಹಿಂದಿ … ಹೀಗೆ ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಸುಮನ್‌ ರಂಗನಾಥ್‌ ನಟಿಸಿ ಬಂದಿದ್ದಾರೆ. ಸುಮನ್‌ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಹೆಸರು ಕೊಟ್ಟ ಸಿನಿಮಾ “ಸಿದ್ಲಿಂಗು’. ಆ ಚಿತ್ರದ ಆಂಡಲಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು ಸುಮನ್‌. ಆ ನಂತರ “ನೀರ್‌ ದೋಸೆ’ಯಲ್ಲೂ ಸುಮನ್‌ ಅವರಿಗೆ ಒಳ್ಳೆಯ ಪಾತ್ರ ಸಿಕ್ಕಿತ್ತು. ಸದ್ಯ ಸುಮನ್‌ ರಂಗನಾಥ್‌ “ಡಬಲ್‌ ಇಂಜಿನ್‌’ ಎಂಬ ಸಿನಿಮಾದಲ್ಲಿ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ.

ಇಲ್ಲಿ ಚಿಕ್ಕಣ್ಣ ಅವರ ಕಾಂಬಿನೇಶನ್‌ನಲ್ಲಿ ಅವರ ದೃಶ್ಯಗಳು ಸಾಗಿ ಬರಲಿದೆ. ಹೆಸರಿಗೆ ತಕ್ಕಂತೆ ಕಾಮಿಡಿ ಹಿನ್ನೆಲೆಯಲ್ಲಿ ಸಾಗುವ ಸಿನಿಮಾ ಇದಾಗಿರುವುದರಿಂದ ಸಾಕಷ್ಟು ಫ‌ನ್ನಿ ಸನ್ನಿವೇಶಗಳು ಚಿಕ್ಕಣ್ಣ ಹಾಗೂ ಸುಮನ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿವೆ. ಈ ಹಿಂದೆ “ಬಾಂಬೆ ಮಿಠಾಯಿ’ ಎಂಬ ಸಿನಿಮಾ ಮಾಡಿದ್ದ ಚಂದ್ರಮೋಹನ್‌ ಈ ಚಿತ್ರದ ನಿರ್ದೇಶಕರು.

ಇದೊಂದು ಮೂವರು ಮುಗ್ಧ ಹುಡುಗರ ಸುತ್ತ ನಡೆಯುವ ಕಥೆ. ಹಳ್ಳಿಯಲ್ಲಿರುವ ಮೂವರು ಮುಗ್ಧ ಯುವಕರಿಗೆ ಅದೊಂದು ದಿನ, ತಾವು ದಿಢೀರ್‌ ಶ್ರೀಮಂತರಾಗಿಬಿಡಬೇಕು ಎಂಬ ಆಸೆ ಚಿಗುರುತ್ತದೆ. ಶ್ರೀಮಂತರಾಗೋದು ಸುಲಭವಲ್ಲ. ಆದರೆ, ಕೆಟ್ಟದಾರಿ ಹಿಡಿದರೆ, ಬೇಗನೇ ಶ್ರೀಮಂತರಾಗಿಬಿಡಬಹುದು ಎಂಬ ಆಸೆಯಿಂದ ಕೆಟ್ಟದಾರಿ ಹಿಡಿಯುತ್ತಾರೆ. ಆಮೇಲೆ ಏನೆಲ್ಲಾ ಆಗಿಹೋಗುತ್ತೆ ಎಂಬುದು ಚಿತ್ರದ ಕಥಾ ಸಾರಾಂಶ.

ಕಥೆ ಗಂಭೀರವಾಗಿದ್ದರೂ, ಹಾಸ್ಯದ ಮೂಲಕವೇ ಚಿತ್ರ ಸಾಗುವುದರಿಂದ ನೋಡುಗರಿಗೆ ಎಲ್ಲೂ ಬೋರ್‌ ಎನಿಸುವುದಿಲ್ಲ ಎಂಬುದು ಚಿತ್ರತಂಡದ ಮಾತು. ಮುಖ್ಯವಾಗಿ ಇಲ್ಲಿ ಯುವಕರಿಗೊಂದು ಸಂದೇಶವಿದೆ. ಅದಕ್ಕೆ ಪೂರಕವಾಗಿಯೇ ಶೀರ್ಷಿಕೆ ಇಡಲಾಗಿದೆಯಂತೆ. ಅದೇನೇ ಆದರೂ ಸುಮನ್‌ ರಂಗನಾಥ್‌ ಮತ್ತೂಮ್ಮೆ “ಡಬಲ್‌ ಇಂಜಿನ್‌’ನಲ್ಲಿ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿರುವುದಂತೂ ಸತ್ಯ. 

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.