“ಅಮ್ಮಾ ಐ ಲವ್‌ ಯೂ’ ಹೆಸರಿಗಾಗಿ ಕಾಯುತ್ತಿರುವ ಚಿತ್ರತಂಡ

Team Udayavani, Mar 6, 2018, 11:01 AM IST

Amma-I-Love.jpg

ದ್ವಾರಕೀಶ್‌ ಚಿತ್ರದಡಿ ನಿರ್ಮಾಣವಾಗುತ್ತಿರುವ 51ನೇ ಚಿತ್ರವಾದ “ಅಮ್ಮಾ ಐ ಲವ್‌ ಯೂ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವನ್ನು ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆ ಮಾಡಬೇಕೆಂಬುದು ನಿರ್ಮಾಪಕ ಯೋಗಿ ದ್ವಾರಕೀಶ್‌ ಯೋಚನೆ. ಆದರೆ, ಇದುವರೆಗೂ ಚಿತ್ರದ ಪ್ರಚಾರವನ್ನೇ ಶುರು ಮಾಡಿಲ್ಲ. ಅದಕ್ಕೆ ಕಾರಣ, ಇನ್ನೂ ಟೈಟಲ್‌ ಸಿಗದಿರುವುದು.

ಹೌದು, “ಅಮ್ಮಾ ಐ ಲವ್‌ ಯೂ’ ಎಂಬ ಹೆಸರಿನಲ್ಲೇ ಚಿತ್ರದ ಚಿತ್ರೀಕರಣವಾಗಿದ್ದರೂ ಮತ್ತು ಅದೇ ಹೆಸರಿನಲ್ಲಿ ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ಚಿತ್ರತಂಡದವರು ಹೊರಟಿದ್ದರೂ, ಇದುವರೆಗೂ ಚಿತ್ರತಂಡದವರಿಗೆ ಟೈಟಲ್‌ ಸಿಕ್ಕಿಲ್ಲವಂತೆ. ಇನ್ನೂ ಹೆಸರು ಸಿಗದ ಕಾರಣ, ಚಿತ್ರತಂಡದವರು ಚಿತ್ರದ ಪ್ರಚಾರವನ್ನೂ ಮಾಡುತ್ತಿಲ್ಲ. ಹಾಗಾಗಿ ಚಿತ್ರದ ಬಿಡುಗಡೆಗೆ ಇನ್ನು ಒಂದೇ ಒಂದು ತಿಂಗಳಿದ್ದರೂ ಪ್ರಚಾರ ಮಾತ್ರ ಆಗುತ್ತಿಲ್ಲ.

“ನಾವು “ಅಮ್ಮಾ ಐ ಲವ್‌ ಯೂ’ ಹೆಸರಿನಲ್ಲಿ ಚಿತ್ರ ಮಾಡಿದ್ದೇವೆ. ಆದರೆ, ವಾಣಿಜ್ಯ ಮಂಡಳಿಯಲ್ಲಿ “ಅಮ್ಮ’ ಎಂಬ ಹೆಸರು ಬೇರೆ ನಿರ್ಮಾಪಕರ ಹೆಸರಿನಲ್ಲಿದೆ. ಅವರು “ಅಮ್ಮ¾’ ಎಂಬ ಹೆಸರು ಮೊದಲು ನೋಂದಾಯಿಸಿದ್ದರಿಂದ, ಅವರು ಚಿತ್ರ ಮಾಡಿದ ನಂತರ, ನೀವು ಬೇಕಾದರೆ “ಅಮ್ಮಾ ಐ ಲವ್‌ ಯೂ’ ಹೆಸರಿನಲ್ಲಿ ಚಿತ್ರ ಮಾಡಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಆದರೆ, ನಮ್ಮ ಚಿತ್ರ ರೀ-ರೆಕಾರ್ಡಿಂಗ್‌ ಹಂತದಲ್ಲಿದೆ.

ಮುಂದಿನ ತಿಂಗಳು ಬಿಡುಗಡೆ ಮಾಡುವ ಯೋಚನೆ ಇದೆ. ಹೀಗಿರುವಾಗ ಅವರು ಮಾಡಿ ಮುಗಿಸಿದ ನಂತರ, ನಾವು ಚಿತ್ರ ಮಾಡಬೇಕು ಎಂದರೆ ಹೇಗೆ? ಅವರು ಯಾವಾಗ ಚಿತ್ರ ಮಾಡುತ್ತಾರೋ ಗೊತ್ತಿಲ್ಲ. ಮೇಲಾಗಿ ಅದು “ಅಮ್ಮ’, ನಮ್ಮದು “ಅಮ್ಮಾ ಐ ಲವ್‌ ಯೂ’. ಎರಡೂ ಬೇರೆ ಟೈಟಲ್‌ಗ‌ಳು. ಈಗಾಗಲೇ ಅಲ್ಪಸ್ವಲ್ಪ ಬದಲಾವಣೆಯೊಂದಿಗೆ ಒಂದೇ ಹೆಸರಿಟ್ಟುಕೊಂಡು ಸಾಕಷ್ಟು ಚಿತ್ರಗಳು ಬಂದಿವೆ.

ಎಲ್ಲಕ್ಕಿಂತ ಹೆಚ್ಚಾಗಿ “ಅಮ್ಮ’ ಎಂಬ ಹೆಸರಿನ ಅವಧಿ ಮುಗಿದಿದೆ. ಅದನ್ನು ಆ ನಿರ್ಮಾಪಕರು ವಿಸ್ತರಿಸಿಲ್ಲ. ಹಾಗಿದ್ದರೂ ನಮಗೆ ಇನ್ನು ಹೆಸರು ಸಿಗುತ್ತಿಲ್ಲ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಅವರ ಜೊತೆಗೆ ಮಾತನಾಡಿ, “ಅಮ್ಮಾ ಐ ಲವ್‌ ಯೂ’ ಎಂಬ ಹೆಸರನ್ನು ಕೊಡಿ ಎಂದು ಮನವಿ ಮಾಡಿದ್ದೇನೆ’ ಎನ್ನುತ್ತಾರೆ ಯೋಗಿ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಕಡೆಯಿಂದ ಹೆಸರು ಸಿಗುತ್ತಿದ್ದಂತೆಯೇ, ಚಿತ್ರದ ಪ್ರಚಾರ ಶುರು ಮಾಡಿ, ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ ಯೋಗಿ ದ್ವಾರಕೀಶ್‌. ಅಂದ ಹಾಗೆ, “ಅಮ್ಮಾ ಐ ಲವ್‌ ಯೂ’ ಚಿತ್ರವನ್ನು ಕೆ.ಎಂ. ಚೈತನ್ಯ ನಿರ್ದೇಶಿಸಿದ್ದು, ಚಿರಂಜೀವಿ ಸರ್ಜಾ, ನಿಶ್ವಿ‌ಕಾ ನಾಯ್ಡು, ಸಿತಾರಾ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.