ಶೂಟಿಂಗ್‌ ಹೊರಟ ಪುಟಾಣಿ ಪಂಟರ್ಸ್

ಇದು ಮಕ್ಕಳ ಕಮರ್ಷಿಯಲ್‌ ಚಿತ್ರ

Team Udayavani, Apr 29, 2019, 3:00 AM IST

Putani-Punters

ಮೇಘನಾ ರಾಜ್‌ ನಿರ್ಮಾಣದ “ಪುಟಾಣಿ ಪಂಟರ್ಸ್’ ಚಿತ್ರಕ್ಕೆ ಬುಧವಾರ ಮುಹೂರ್ತ ನೆರವೇರಿದೆ. ಅಂದಹಾಗೆ, ಬೆನಕ ಪವನ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆದ “ಪುಟಾಣಿ ಪಂಟರ್ಸ್’ ಚಿತ್ರದ ಸಮಾರಂಭದಲ್ಲಿ ನಟ ಧ್ರುವ ಸರ್ಜಾ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಮತ್ತೂಬ್ಬ ನಟ ಚಿರಂಜೀವಿ ಸರ್ಜಾ ಕ್ಯಾಮರಾ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಇನ್ನು ಚಿತ್ರದ ಹೆಸರೇ ಹೇಳುವಂತೆ “ಪುಟಾಣಿ ಪಂಟರ್ಸ್’ ಮಕ್ಕಳ ಚಿತ್ರ. ಚಿತ್ರದ ಬಗ್ಗೆ ಮಾತನಾಡುವ ಮೇಘನಾ, “ಮೊದಲಿನಿಂದಲೂ ಚಿತ್ರ ನಿರ್ಮಾಣದ ಬಗ್ಗೆ ಆಸಕ್ತಿಯಿತ್ತು. ಈಗ ಆ ಕನಸು ನನಸಾಗುತ್ತಿದೆ. ನಾನು ಮಾಡುವ ಚಿತ್ರ ಮೊದಲು ನನಗೆ ಇಷ್ಟವಾಗಬೇಕು ನಂತರ ಅದು ಪ್ರೇಕ್ಷಕರಿಗೆ ಇಷ್ಟವಾಗುತ್ತದೆ.

ಹಾಗಾಗಿ ನನಗೆ ಇಷ್ಟವಾಗುವ ಒಂದೊಳ್ಳೆ ಕಥೆಯನ್ನು ಆಯ್ಕೆ ಮಾಡಿಕೊಂಡು ಈ ಚಿತ್ರವನ್ನು ನಿರ್ಮಿಸಲು ಮುಂದಾದೆ. ಇದು ಮಕ್ಕಳ ಚಿತ್ರವಾದರೂ, ಪಕ್ಕಾ ಕಮರ್ಷಿಯಲ್‌ ಎಂಟರ್‌ಟೈನರ್‌ ಆಗಿ ಚಿತ್ರವನ್ನು ಆಡಿಯನ್ಸ್‌ ಮುಂದೆ ತರುವ ಯೋಜನೆ ಇದೆ. ಸಂಪೂರ್ಣ ಮನರಂಜನೆ ಈ ಚಿತ್ರದಲ್ಲಿ ಇರಲಿದೆ’ ಎಂದರು.

ನಿರ್ದೇಶಕ ಬೆನಕ ಪವನ್‌, “ಸಾಕಷ್ಟು ವರ್ಷಗಳಿಂದ ಚಿತ್ರ ನಿರ್ದೇಶಿಸಬೇಕು ಎಂಬ ಯೋಚನೆ ಇತ್ತು. ಚಿತ್ರರಂಗದ ಅನೇಕ ಸ್ನೇಹಿತರು ಚಿತ್ರವನ್ನು ನಿರ್ದೇಶಿಸಲು ಪ್ರೋತ್ಸಾಹಿಸುತ್ತಿದ್ದರು. ಆದರೆ ಅಭಿನಯದಲ್ಲೇ ಹೆಚ್ಚು ತೊಡಗಿಕೊಂಡಿದ್ದರಿಂದ ಅದಕ್ಕೆ ಕಾಲ ಕೂಡಿಬಂದಿರಲಿಲ್ಲ. ಈಗ ಚಿತ್ರ ನಿರ್ದೇಶಿಸುವ ಅವಕಾಶ ಒದಗಿದೆ.

ಕನ್ನಡದ ಪ್ರೇಕ್ಷಕರ ಮುಂದೆ ಇಡೀ ಫ್ಯಾಮಿಲಿ ಕುಳಿತು ನೋಡುವಂಥ ಸದಭಿರುಚಿಯ ಚಿತ್ರವನ್ನು ಕೊಡಲು ನಮ್ಮ ತಂಡ ತಯಾರಿ ಮಾಡಿಕೊಂಡಿದೆ’ ಎಂದರು. “ಪುಟಾಣಿ ಪಂಟರ್ಸ್’ ಚಿತ್ರದಲ್ಲಿ ಮಕ್ಕಳ ತುಂಟಾಟ, ತರಲೆ, ಅವರ ಯೋಚನೆ ಎಲ್ಲವನ್ನೂ ತೆರೆಮೇಲೆ ತರಲು ನಿರ್ದೇಶಕ ಪವನ್‌ ಪ್ಲಾನ್‌ ಮಾಡಿಕೊಂಡಿದ್ದಾರೆ.

ಈಗಾಗಲೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ಅಭಿನಯಿಸಿರುವ ಸುಮಾರು ಏಳೆಂಟು ಮಕ್ಕಳು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಹಿರಿಯ ನಟ ಸುಂದರ ರಾಜ್‌, ಪ್ರಮೀಳಾ ಜೋಷಾಯ್‌, ಸ್ಪರ್ಶ ರೇಖಾ, ನಾಗರಾಜ ಮೂರ್ತಿ, ರಮೇಶ್‌ ಪಂಡಿತ್‌, ಮುಖ್ಯಮಂತ್ರಿ ಚಂದ್ರು, ಮೈಕೋ ಮಂಜು, ರಾಜೇಶ್‌ ನಟರಂಗ ಸೇರಿದಂತೆ ಹಲವು ಕಲಾವಿದರು ಇತರೆ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

“ಪುಟಾಣಿ ಪಂಟರ್ಸ್’ ಚಿತ್ರದ ಹಾಡುಗಳಿಗೆ ವಸಂತ ಕುಮಾರ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದ್ದು ಬಿ.ಎಸ್‌ ಮೀರಾ ಹಾಡುಗಳಿಗೆ ಸಾಹಿತ್ಯ ಒದಗಿಸುತ್ತಿದ್ದಾರೆ. ಚಿತ್ರಕ್ಕೆ ತ್ರಿಭುವನ್‌ ನೃತ್ಯ ಸಂಯೋಜನೆ ಮತ್ತು ಅಲ್ಟಿಮೇಟ್‌ ಶಿವು ಸಾಹಸ ಸಂಯೋಜಿಸುತ್ತಿದ್ದಾರೆ.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.