Kannada Cinema; ಶೀಘ್ರದಲ್ಲಿ ಬಿಡುಗಡೆಯಾಗಲಿದೆ ‘ಆರಾಮ್ ಅರವಿಂದ ಸ್ವಾಮಿ’ ಹಾಡು
Team Udayavani, Dec 11, 2023, 2:58 PM IST
ನಟ ಅನೀಶ್ ತೇಜೇಶ್ವರ್ ಅಭಿನಯದ “ಆರಾಮ್ ಅರವಿಂದ ಸ್ವಾಮಿ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಈಗಾಗಲೇ ತನ್ನ ಪ್ರಮೋಷನಲ್ ವಿಡಿಯೋ ಮೂಲಕ ಒಂದಷ್ಟು ಗಮನ ಸೆಳೆಯುತ್ತಿರುವ “ಆರಾಮ್ ಅರವಿಂದ ಸ್ವಾಮಿ’ ಸಿನಿಮಾದ ಟೈಟಲ್ ಟ್ರ್ಯಾಕ್ ಅನ್ನು ಇದೇ ತಿಂಗಳು ಬಿಡುಗಡೆಯಾಗಲಿದೆ.
“ಆರಾಮ್ ಅರವಿಂದ್ ಸ್ವಾಮಿ’ ರೋಮ್ಯಾಂಟಿಕ್ ಕಾಮಿಡಿ ಕಥಾಹಂದರದ ಸಿನಿಮಾವಾಗಿದ್ದು, ಈ ಹಿಂದೆ “ನಮ್ ಗಣಿ ಬಿ. ಕಾಂ ಪಾಸ್’, “ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳನ್ನು ನಿರ್ದೇಶಿಸಿದ್ದ ಅಭಿ ಷೇಕ್ ಶೆಟ್ಟಿ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ.
“ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾದಲ್ಲಿ ನಾಯಕ ಅನೀಶ್ ತೇಜೇಶ್ವರ್ಗೆ ಜೋಡಿಯಾಗಿ ಮಿಲನಾ ನಾಗರಾಜ್ ಹಾಗೂ ಹೃತಿಕಾ ಶ್ರೀನಿವಾಸ್ ಜೋಡಿಯಾಗಿ ಅಭಿನಯಿಸಿದ್ದಾರೆ. “ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, “ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
“ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾದ ಹಾಡುಗಳಿಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದು, ಸಿನಿಮಾಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ. ಬೆಂಗಳೂರು, ಕೇರಳ, ಕನಕಪುರ, ಮೈಸೂರು ಸುತ್ತಮುತ್ತ “ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ