Sandalwood: ಟ್ರೇಲರ್ ಇಲ್ಲ ಹಾಡೇ ಎಲ್ಲಾ… ’ಕೃಷ್ಣಂ ಪ್ರಣಯ ಸಖಿ’ ಹಾಡು ಸೂಪರ್ ಹಿಟ್
Team Udayavani, Aug 6, 2024, 10:35 AM IST
ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗಣೇಶ್ ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ.
ಈ ಚಿತ್ರದಲ್ಲಿ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳಿದೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದೆ. ಚಿತ್ರ ಆಗಸ್ಟ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಕೃಷ್ಣಂ ಪ್ರಣಯ ಸಖೀ ಪ್ರೇಕ್ಷಕರ ಮನ ತಲುಪಿದೆ. ನಿರೀಕ್ಷೆಗೂ ಮೀರಿ ಹಾಡುಗಳು ಹಿಟ್ ಅಗಿದೆ.
ಈ ಸಂಭ್ರಮವನ್ನು ಹಂಚಿಕೊಳ್ಳಲು ಚಿತ್ರದ ಆಡಿಯೋ ಹಕ್ಕು ಪಡೆದುಕೊಂಡಿರುವ ಆನಂದ್ ಆಡಿಯೋದವರು ಸಮಾರಂಭ ಆಯೋಜಿಸಿದ್ದರು. ಹಾಡುಗಳನ್ನು ಬರೆದಿರುವವರನ್ನು ಹಾಗೂ ಹಾಡಿದರವನ್ನು ಫಲಕ ನೀಡಿ ಸನ್ಮಾನಿಸಿದರು.
ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಗೀತ ರಚನೆಕಾರ ನಿಶಾನ್ ರೈ ಅವರನ್ನು ಹಾಗೂ ಚಿತ್ರತಂಡದ ಸದಸ್ಯರನ್ನು ಆನಂದ್ ಆಡಿಯೋ ಶ್ಯಾಮ್ ಮತ್ತು ಆನಂದ್ ಆತ್ಮೀಯವಾಗಿ ಸನ್ಮಾನಿಸಿದರು. ನಂತರ ಚಿತ್ರತಂಡದವರು ಮಾತನಾಡಿದರು.
ಚಿತ್ರದ ಹಾಡುಗಳ ಬಗ್ಗೆ ಮಾತನಾಡಿದ ನಾಯಕ ಗಣೇಶ್, ಈವರೆಗೂ ಬಿಡುಗಡೆಯಾಗಿರುವ ಮೂರು ಹಾಡುಗಳು ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಹಾಗಾಗಿ ಈ ಸಮಾರಂಭವನ್ನು ಆನಂದ್ ಆಡಿಯೋದವರು ಆಯೋಜಿಸಿದ್ದಾರೆ. ಅವರಿಗೆ ಧನ್ಯವಾದಗಳು. ಇತ್ತೀಚೆಗೆ ಹಾಡುಗಳು ಹಿಟ್ ಆಗುವುದು ಬಹಳ ಕಡಿಮೆ. ಮೊದಲೆಲ್ಲಾ ಆಡಿಯೋ ಹಿಟ್ ಅಂತ ಕಾರ್ಯಕ್ರಮ ಮಾಡುತ್ತಿದ್ದೆವು. ಇತ್ತೀಚೆಗೆ ಆಗಿರಲಿಲ್ಲ. ಮೂರನೇ ಹಾಡು ಯಶಸ್ವಿಯಾದಾಗ ಯಾಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್ ಆಡಿಯೋದವರು ಹೇಳುತ್ತಿದ್ದರು. ಆನಂದ್ ಆಡಿಯೋದವರ ಜೊತೆಗೆ ನನ್ನದು ಬಹಳ ದೊಡ್ಡ ಸಂಬಂಧ. ನನ್ನ ಚಿತ್ರ ಜೀವನದ ಯಶಸ್ಸಿಗೆ ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ ಮತ್ತು ಆ ಕ್ರೆಡಿಟ್ ಆನಂದ್ ಆಡಿಯೋದವರಿಗೂ ಸಲ್ಲಬೇಕು. ಈ ಚಿತ್ರದ ಆಡಿಯೋ ಹಕ್ಕುಗಳನ್ನು ಡಬ್ಬಲ್ ದುಡ್ಡು ಕೊಟ್ಟು ಆನಂದ್ ಆಡಿಯೋದವರು ಕೊಂಡಿದ್ದಾರೆ. ಜಸ್ಕರಣ್ ತುಂಬಾ ಚೆನ್ನಾಗಿ ಹಾಡಿದ್ದಾರೆ. ಅದರಲ್ಲೂ ದ್ವಾಪರ ಹಾಡಂತೂ ಜಾಲತಾಣಗಳಲ್ಲಿ ಬಹಳ ಫೇಮಸ್ ಆಗಿದೆ. ಹಾಡುಗಳ ಯಶಸ್ಸಿನ ಹೆಚ್ಚಿನ ಭಾಗದ ಕ್ರೆಡಿಟ್ ನಿರ್ದೇಶಕ ರಿಗೆ ಹೋಗಬೇಕು ಎಂದರು.
ನಿರ್ದೇಶಕ ಶ್ರೀನಿವಾಸ್ ರಾಜು ಮಾತನಾಡಿ, ಈ ಚಿತ್ರ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಅರ್ಜುನ್ ಬಹಳ ಬ್ಯುಸಿಯಾಗಿದ್ದಾರೆ. ಅದರಲ್ಲೂ ನಮಗೆ ಸಮಯ ಕೊಟ್ಟು ಈ ರೀತಿ ಜನಪ್ರಿಯ ಹಾಡುಗಳನ್ನು ಮಾಡಿಕೊಟ್ಟಿರುವುದು ಖುಷಿ ವಿಷಯ. ಚಿತ್ರದಲ್ಲಿ ಮೊದಲು ಒಂಬತ್ತು ಹಾಡುಗಳಿದ್ದವು. ಕೊನೆಗೆ ಕಡಿಮೆಯಾಗಿ, ಏಳು ಹಾಡುಗಳಿವೆ. ಈ ಹಾಡುಗಳನ್ನು ಪ್ರಮೋಟ್ ಮಾಡುತ್ತಿರುವ ಮತ್ತು ನನ್ನ ಮೇಲೆ ನಂಬಿಕೆ ಇಟ್ಟು ಚಿತ್ರಕ್ಕೆ ಹಣ ಹೂಡಿದ ನಿರ್ಮಾಪಕ ಪ್ರಶಾಂತ್ ಅವರಿಗೆ ಧನ್ಯವಾದಗಳು. “ದ್ವಾಪರ’ ವರೆಗೂ ಬೇರೆ ಬೇರೆ ರೀತಿಯ ಹಾಡುಗಳಿದ್ದವು. ಇನ್ನು ಮುಂದಿನ ಒಂದು ವಾರದಲ್ಲಿ ಮೆಲೋಡಿ ಹಾಡುಗಳು ಬರಲಿವೆ. ಈ ಚಿತ್ರಕ್ಕೆ ಟ್ರೇಲರ್ ಅವಶ್ಯಕತೆ ಇರಲಿಲ್ಲ ಎಂದು ಒಂದು ವರ್ಷದ ಹಿಂದೆ ಅನಿಸಿತ್ತು. ಇದೊಂದು ಮ್ಯೂಸಿ ಕಲ್ ಚಿತ್ರವಾದ್ದರಿಂದ, ಈ ಚಿತ್ರವನ್ನು ಹಾಡುಗಳಿಂದ ಮಾತ್ರ ಪ್ರಮೋಟ್ ಮಾಡುವುದು ನನ್ನ ಆಸೆ. ಹಾಗಾಗಿ, ಚಿತ್ರದ ಟ್ರೇಲರ್ ಬಿಡುಗಡೆ ಮಾಡುತ್ತಿಲ್ಲ. ಇದು ಈ ಚಿತ್ರಕ್ಕೆ ಮಾತ್ರ ಎಂದು ತಿಳಿಸಿದರು.
ನಟಿ ಶರಣ್ಯ ಶೆಟ್ಟಿ, ಹಿರಿಯ ನಟ ರಾಮಕೃಷ್ಣ, ಕಾರ್ಯಕಾರಿ ನಿರ್ಮಾಪಕ ಶರತ್, ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಹಾಡು ಬರೆದಿರುವ ನಿಶಾನ್ ರೈ ಹಾಗೂ ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್ ಮತ್ತು ಆನಂದ್ ಹಾಡುಗಳು ಗೆದ್ದಿರುವ ಆನಂದವನ್ನು ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ
Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ
Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!
Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.